ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?
ಚಿಕ್ಕಮಗಳೂರು, ಮಾರ್ಚ್ 12: ಚಿಕ್ಕಮಗಳೂರಿಗೂ ಕೊರೊನಾ (ಕೋವಿಡ್ 19) ಸೋಂಕು ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಕೊರೊನಾ ಸೋಂಕಿನ ಅನುಮಾನದ ಮೇಲೆ ಮಂಗಳೂರು ಮೂಲದ 45 ವರ್ಷ ಪ್ರಾಯದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 15 ದಿನಗಳ ಹಿಂದೆ ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ವ್ಯಕ್ತಿಗೆ ತೀವ್ರ ಜ್ವರ, ಕೆಮ್ಮು ಶೀತ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ತಂಗಿ ಮನೆಗೆ ಆಗಮಿಸಿದ ವೇಳೆಯಲ್ಲಿ ಕಾಣಿಸಿದ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಅವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಂದಿದ್ದರು. ಜ್ವರ ನಿಂಯತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ರೋಗಿಯ ರಕ್ತ ಸಂಗ್ರಹಿಸಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 5 ಕೊರೊನಾ ಶಂಕಿತ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.












Click it and Unblock the Notifications