ಕಡೂರು ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ: ತಹಶೀಲ್ದಾರ್ ವಿರುದ್ಧ ಸೂಕ್ತ ಕ್ರಮಕ್ಕೆ ರೈತ ಸಂಘ ಆಗ್ರಹ
ಚಿಕ್ಕಮಗಳೂರು, ಜನವರಿ, 06: ಜಿಲ್ಲೆಯ ಕಡೂರು ತಾಲೂಕು ಕಚೇರಿ ಭ್ರಷ್ಟಾಚಾರದ ಕೂಪವಾಗಿದ್ದು, ತಹಶೀಲ್ದಾರ್ ಜೆ.ಉಮೇಶ್ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಭೂ ಮಂಜೂರು ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ತರೀಕೆರೆ ಉಪವಿಭಾಗಾಧಿಕಾರಿ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗೆ ಶಿಫಾರಸು ಮಾಡಿದ್ದರು. ಆದರೂ ಕೂಡ ಜಿಲ್ಲಾಧಿಕಾರಿ ಇದುವರೆಗೂ ಸೂಕ್ತ ಕ್ರಮ ಕೈಗೊಂಡಿಲ್ಲ. ತಹಶೀಲ್ದಾರ್ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದರೂ ಬಡ್ತಿ ನೀಡಲು ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದಾರೆ. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ನಡೆ ವ್ಯಾಪಕ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆರೋಪ ಮಾಡಿದ್ದಾರೆ.
ಅಕ್ರಮವಾಗಿ ಸರ್ಕಾರಿ ಭೂಮಿ ಮಂಜೂರು
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡೂರು ತಾಲೂಕು ಕಚೇರಿ ತಹಶೀಲ್ದಾರ್ ಜೆ.ಉಮೇಶ್ ಅವರು ಹಿಂದಿನ ತಹಶೀಲ್ದಾರ್ ಅವರ ಲಾಗಿನ್‍ಗಳನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅಕ್ರಮವಾಗಿ ಪ್ರಭಾವಿಗಳಿಗೆ, ತಮ್ಮ ಸಂಬಂಧಿಕರಿಗೆ ಹಾಗೂ ಮರಣಹೊಂದಿರುವ ವ್ಯಕ್ತಿಯ ಹೆಸರಿಗೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ, ತರೀಕೆರೆ ಉಪವಿಭಾಗಾಧಿಕಾರಿ ತಹಶೀಲ್ದಾರ್ ಜೆ.ಉಮೇಶ್ ಅವರು ಬಳಸಿದ್ದ 5 ಲಾಗಿನ್‍ಗಳ ಪೈಕಿ ಎರಡು ಲಾಗಿನ್ ತೆರೆದು ಪರಿಶೀಲನೆ ಮಾಡಲಾಗಿದೆ. ಆಗ 321 ಕಡತಗಳಿಗೆ ಸಾಗುವಳಿ ಚೀಟಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಬಹುತೇಕ ಸಾಗುವಳಿ ಚೀಟಿಯನ್ನು ಅಸಲಿ ದಾಖಲೆಗಳಿಲ್ಲದೇ ನೀಡಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತರೀಕೆರೆ ಉಪವಿಭಾಗಾಧಿಕಾರಿ ಅವರು ತಹಶೀಲ್ದಾರ್ ಉಮೇಶ್ ಹಾಗೂ ನಿವೃತ್ತ ಶಿರಸ್ತೇದಾರ್ ನಂಜುಂಡಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿ ಡಿಸೆಂಬರ್ 14ರಂದು ಜಿಲ್ಲಾಧಿಕಾರಿಗೆ ತನಿಖಾ ವರದಿ ನೀಡಿದ್ದಾರೆ. ಆದರೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಇದುವರೆಗೂ ತಹಶೀಲ್ದಾರ್ ಉಮೇಶ್ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಡಿಸಿ ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿದ್ದಾರೆ
ಲೋಕಾಯುಕ್ತದಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೂ ಕೂಡ, ತಹಶೀಲ್ದಾರ್ ಅವರ ಬಡ್ತಿಗೆ ಶಿಫಾರಸು ಮಾಡಿದ್ದಾರೆ. ಅಕ್ರಮ ಭೂ ಮಂಜೂರಾತಿ ಆರೋಪ ಸಾಬೀತಾಗಿದ್ದರೂ ತಹಶೀಲ್ದಾರ್ ಉಮೇಶ್ ಅವರಿಗೆ ಬಡ್ತಿ ನೀಡಿರುವುದು ಕಾನೂನು ಬಾಹಿರವಾಗಿದೆ. ತಹಶೀಲ್ದಾರ್ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಜಿಲ್ಲಾಧಿಕಾರಿ ನಿರ್ಲಕ್ಷ್ಯವಹಿಸಿರುವುದರ ಹಿಂದೆ ಹಲವರ ಪ್ರಭಾವಿಗಳು ಇದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಜಿಲ್ಲಾಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಮುಂದಿನ 1 ವಾರದೊಳಗೆ ಕಡೂರು ತಹಶೀಲ್ದಾರ್ ಉಮೇಶ್ ವಿರುದ್ಧ ಜಿಲ್ಲಾಧಿಕಾರಿ ಕಾನೂನು ಕ್ರಮಕೈಗೊಂಡು ಅಮಾನತುಗೊಳಿಸಬೇಕು. ಅವರ ಬಡ್ತಿ ಆದೇಶವನ್ನು ತಡೆಹಿಡಿಯಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ವಿರುದ್ಧವೇ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಅಲ್ಲದೇ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲಾಗುವುದು ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications