ಮೇ 24ರ ತನಕ ಚಿಕ್ಕಮಗಳೂರು ಜಿಲ್ಲೆ ಸಂಪೂರ್ಣ ಲಾಕ್‌ಡೌನ್
ಚಿಕ್ಕಮಗಳೂರು, ಮೇ 19: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಕಠಿಣ ಲಾಕ್‌ಡೌನ್‌ಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಇದೇ ಮೇ 20ರಿಂದ ಮೇ 24ರ ತನಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಮೇ 20ರ ಬೆಳಿಗ್ಗೆ 10ರಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಚಿಕ್ಕಮಗಳೂರು ಜಿಲ್ಲೆ ಕಂಪ್ಲೀಟ್ ಲಾಕ್ ಆಗಲಿದ್ದು, ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ, ವಾಹನ ಸಂಚಾರ ಹಾಗೂ ಜನಸೇರುವುದನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

Recommended Video
ಆರೋಗ್ಯದ ಕಾಳಜಿಗೆ Oximeter ಮನೆಯಲ್ಲಿರುವುದು ಎಷ್ಟು ಸೂಕ್ತ? | Oneindia Kannada
ಈಗಾಗಲೇ ಅನುಮತಿ ಪಡೆದಿರುವ ಮದುವೆ ಕಾರ್ಯಕ್ರಮಗಳಿಗೆ ಕೇವಲ 10 ಜನರಿಗೆ ಮಾತ್ರ ಅವಕಾಶ ಕಲ್ಪಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿರುವ ಕಾರಣದಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.












Click it and Unblock the Notifications