• search
  • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಮಗಳೂರು: ಕೋವಿಡ್ ಲಸಿಕೆ ಲಭ್ಯವಿರುವ ಆಸ್ಪತ್ರೆಗಳು

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಮಾರ್ಚ್ 01: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ 2ನೇ ಹಂತದ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. "ಜಿಲ್ಲೆಯನ್ನು ಕೋವಿಡ್ ಮುಕ್ತವಾಗಿಸಲು ಜನರು ಸಹಕಾರ ನೀಡಬೇಕು" ಎಂದು ಜಿಲ್ಲಾಧಿಕಾರಿ ಡಾ. ಕೆ. ಎನ್. ರಮೇಶ್ ಮನವಿ ಮಾಡಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸೋಮವಾರದಂದು ಕೋವಿಡ್ ಲಸಿಕೆ ಹಾಕುವ ಅಭಿಯಾನದ ಕುರಿತು ಜಿಲ್ಲಾಧಿಕಾರಿಗಳು ಮಾತನಾಡಿದರು. "60 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಹಾಗೂ 45 ರಿಂದ 50 ವರ್ಷದೊಳಗಿನ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ಜನರಿಗೆ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ" ಎಂದರು.

ಮೈಸೂರು; ಕೋವಿಡ್ ಲಸಿಕೆ ಲಭ್ಯವಿರುವ ಆಸ್ಪತ್ರೆಗಳ ಪಟ್ಟಿ ಮೈಸೂರು; ಕೋವಿಡ್ ಲಸಿಕೆ ಲಭ್ಯವಿರುವ ಆಸ್ಪತ್ರೆಗಳ ಪಟ್ಟಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಲಸಿಕಾ ವಿತರಣಾ ಕಾರ್ಯವನ್ನು ಮೂಡಿಗೆರೆ, ಕಡೂರು, ತರೀಕೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಹೋಲಿ ಕ್ರಾಸ್ ಆಸ್ಪತ್ರೆ ಮತ್ತು ಕೆ. ಆರ್. ಎಸ್ ಮಲ್ಟಿ ಸ್ಪೇಷಾಲಿಟಿ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಲಾಗುತ್ತಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಗೆ ದರ ಎಷ್ಟು? ತಪ್ಪು ಮಾಹಿತಿ ಬಗ್ಗೆ ಸರ್ಕಾರದ ಸ್ಪಷ್ಟನೆಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಗೆ ದರ ಎಷ್ಟು? ತಪ್ಪು ಮಾಹಿತಿ ಬಗ್ಗೆ ಸರ್ಕಾರದ ಸ್ಪಷ್ಟನೆ

ಸರ್ಕಾರಿ ಆಸ್ಪತ್ರೆಗಳಲಿ ಸೋಮವಾರ, ಬುಧವಾರ, ಶುಕ್ರವಾರ, ಶನಿವಾರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಾರದ ಎಲ್ಲಾ ದಿನಗಳಲ್ಲಿಯೂ ಲಸಿಕೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರೂ. 250 ಪಾವತಿಸಿ ಲಸಿಕೆ ಪಡೆದುಕೊಳ್ಳಬೇಕು ಇದರಲ್ಲಿ ರೂ.100 ಸರ್ವಿಸ್ ಚಾರ್ಜ್ ಹಾಗೂ ರೂ.150 ಕೇಂದ್ರ ಸರ್ಕಾರಕ್ಕೆ ಜಮೆಯಾಗಲಿದೆ.

ಲಸಿಕೆಯನ್ನು ಪಡೆಯಲು ಜನರು ಆರೋಗ್ಯ ಸೇತು ಕೋವಿನ್ 2.0 ಎಂಬ ಆಪ್ಲಿಕೇಶನ್‌ನಲ್ಲಿ ಸ್ವ- ನೋಂದಣಿ ಮಾಡಿಕೊಳ್ಳಬಹುದು. ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಗುರುತಿಸಬೇಕು. ಲಸಿಕೆ ಪಡೆಯುವವರು ವಯಸ್ಸಿನ ಪುರಾವೆಗಾಗಿ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತರುವುದು ಕಡ್ಡಾಯ.

English summary
Second phase of Covid vaccination drive launched in Chikkamagaluru district. Here are the list of hospitals of where vaccine available.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X