ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೊಂದಲ ಮೂಡಿಸಿದ ಚಿಕ್ಕಮಗಳೂರು ಪೊಲೀಸ್ ಇಲಾಖೆ ನೋಟಿಸ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜನವರಿ 12: ಶೃಂಗೇರಿಯಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್ ಬಿದ್ದ ಮೇಲೂ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

ಚಿಕ್ಕಮಗಳೂರು ಪೊಲೀಸ್ ಇಲಾಖೆ ನೀಡಿದ ನೋಟಿಸ್ ಸಾಕಷ್ಟು ವಿವಾದ ಹುಟ್ಟು ಹಾಕಿದೆ. ಸಮ್ಮೇಳನ ಪರವಾಗಿ ಇರುವವರು ಮತ್ತು ಸಮ್ಮೇಳನ ವಿರೋಧಿಸುವವರಿಂದ ವಿರೋಧ ವ್ಯಕ್ತವಾಗಿದೆ.

ವಿವಾದಿತ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್ವಿವಾದಿತ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಬ್ರೇಕ್

ಪೊಲೀಸ್ ಇಲಾಖೆ ನೀಡಿರುವ ನೋಟೀಸ್ ನಲ್ಲಿ ಸಾಹಿತ್ಯ ಸಮ್ಮೇಳನವನ್ನು ಅಕ್ರಮ ಕೂಟ ಎಂದು ಕರೆದು, ಮತ್ತೆ ಪೆಟ್ರೋಲ್ ಬಾಂಬ್ ಪತ್ತೆ ಎನ್ನುವ ಅಂಶ ದಾಖಲಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

Creat Confused Of Chikkamagaluru Police Department Notice

ಪೊಲೀಸ್ ಮಾಡಿರುವ ಈ ಎಡವಟ್ಟಿನಿಂದ ಇಕ್ಕಟ್ಟಿನಲ್ಲಿ ಸಿಲುಕಿದೆ. ನೋಟಿಸ್ ಸಾಕಷ್ಟು ವಿವಾದ ಸೃಷ್ಟಿಸಿದ್ದು, ಸಮ್ಮೇಳನ ನಿಂತ ಮೇಲೂ ಸಾಮಾಜಿಕ ಜಾಲ ತಾಣದಲ್ಲಿ ಇದರ ಬಗ್ಗೆ ಚರ್ಚೆ ನಡೆತಿದೆ.

ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನದ ಮೇಲೆ ಪೆಟ್ರೋಲ್ ಬಾಂಬ್ ಪ್ಲಾನ್?ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನದ ಮೇಲೆ ಪೆಟ್ರೋಲ್ ಬಾಂಬ್ ಪ್ಲಾನ್?

ಕನ್ನಡ ನುಡಿ ಜಾತ್ರೆಗೆ ಬಲಪಂಥೀಯ ಉಗ್ರರು ಬಾಂಬ್ ದಾಳಿ ಬೆದರಿಕೆ ಹಾಕಿದ್ದಾರೆ, ಪೊಲೀಸರು ರಕ್ಷಣೆ ಕೊಡೋದು ಬಿಟ್ಟು ಸಮ್ಮೇಳನ ಮುಂದೂಡುವಂತೆ ಮಾಡಿದ್ದಾರೆ. ಕೂಡಲೇ ಅವರ ವಿರುದ್ದ ಕ್ರಮ ಜರುಗಿಸಿ ಎಂದು ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Creat Confused Of Chikkamagaluru Police Department Notice

ಸಮ್ಮೇಳನ ವಿರೋಧಿಸಿದವರು ಮತ್ತು ಸಮ್ಮೇಳನದ ಆಯೋಜಕರು ಇಬ್ಬರೂ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶಗೊಂಡಿದ್ದಾರೆ. ಎರಡು ರೀತಿಯ ಅರ್ಥವನ್ನು ಮೂಡಿಸಿರುವುದು ವಿವಾದ ಹುಟ್ಟುಹಾಕಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದ 16 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. ಇದಕ್ಕೆ ಕೆಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಆದರೂ ಪೊಲೀಸ್ ಭದ್ರತೆಯಲ್ಲಿ ಸಮ್ಮೇಳನ ಉದ್ಘಾಟನೆಗೊಂಡಿತ್ತು. ನಂತರ ಎರಡನೆಯ ದಿನದ ಕಾರ್ಯಕ್ರಮವನ್ನು ರದ್ದುಪಡಿಸಿ, ಮುಂದೂಡಲಾಗಿತ್ತು.

English summary
The notice issued by the Chikkamagaluru Police Department has caused considerable controversy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X