ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಸೋತಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ ಜೆಡಿಎಸ್‌ ಕಾರ್ಯಕರ್ತರು

ಚಿಕ್ಕಮಗಳೂರು, ಮೇ, 14: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ ಎಸ್.ಎಲ್.ಭೋಜೇಗೌಡಗೆ ಜೆಡಿಎಸ್ ಕಾರ್ಯಕರ್ತರು ಹಾಲಿನ ಅಭಿಷೇಕದ ಮೂಲಕ ಸನ್ಮಾನ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ನಡೆಯುವ ಮುನ್ನವೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆಪ್ತ ಎಸ್.ಎಲ್.ಭೋಜೇಗೌಡ ಅವರು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಜನರ ಬಳಿ ಕೇಳಿಕೊಂಡಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಅದರಂತೆಯೇ ಇದೀಗ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಸಿ.ಟಿ.ರವಿ ಅವರು ಪರಾಭವಗೊಂಡಿದ್ದಾರೆ. ಆದ್ದರಿಂದ ಜೆಡಿಎಸ್‌ ಕಾರ್ಯಕರ್ತರೆಲ್ಲ ಸೇರಿ ಭೋಜೇಗೌಡಗೆ ಹಾಲಿನ ಅಭಿಷೇಕ ಮಾಡಿದ್ದಾರೆ.

JDS workers Milk anointed to SL Bhoje Gowda

ನಗರಸಭೆ ಸದಸ್ಯ ಎ.ಸಿ.ಕುಮಾರಗೌಡ ನೇತೃತ್ವದಲ್ಲಿ ಭಾನುವಾರ ನಗರದ ಹೊಸಬಡಾವಣೆ ಸರ್ಕಲ್‍ನಲ್ಲಿ ಭೋಜೆಗೌಡರನ್ನು ಸನ್ಮಾನಿಸಿ ಹಾಲಿನ ಅಭಿಷೇಕ ಮಾಡುವ ಮೂಲಕ ಯುವಕರು ಸಂಭ್ರಮಿಸಿದರು. ಸಿ.ಟಿ.ರವಿ ಸೋಲಿಸಲು ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದ ಭೊಜೇಗೌಡರು ಕಾಂಗ್ರೆಸ್‌ಗೆ ಮತ ನೀಡುವಂತೆ ಬಹಿರಂಗವಾಗು ಪ್ರಚಾರ ಮಾಡಿದ್ದರು. ಇದೀಗ ಕಾಂಗ್ರೆಸ್ ಗೆದ್ದ ಹಿನ್ನೆಲೆ ಕಾರ್ಯಕರ್ತರು ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದ್ದಾರೆ.

ಈ ವೇಳೆ ಎಸ್.ಎಲ್.ಬೋಜೇಗೌಡ ಮಾತನಾಡಿ, ಚುನಾವಣೆಯಲ್ಲಿ ಚಿಕ್ಕಮಗಳೂರು ತಾಲೂಕು ವಿಭಿನ್ನ ಕ್ಷೇತ್ರವಾಗಿದೆ. ಎಲ್ಲಾ ಮತದಾರರ ಆಶಯದಂತೆ ಭ್ರಷ್ಟ ಆಡಳಿತವನ್ನು ತೊಲಗಿಸಿ ಜನಾಭಿಪ್ರಾಯದಂತೆ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ನೊಂದ ಜೀವಿಗಳು ಸಮಸ್ಯೆಗಳಿಗೀಡಾದ ಹಿನ್ನೆಲೆಯಲ್ಲಿ ಮತದಾರರು ತಿರುಗಿಬಿದ್ದು ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಭಾರೀ ಮುಖಭಂಗವಾಗಿದ್ದು, ಸೋಲು ಕಂಡಿದ್ದಾರೆ. 1999ರ ವಿಧಾನಸಭಾ ಚುನಾವಣೆ ಬಳಿಕ ಸೋಲು ಕಾಣದ ರವಿ ಈ ಬಾರಿ ತಮ್ಮ ಆಪ್ತನ ಮುಂದೇಯೇ ಸೋಲು ಕಂಡಿದ್ದಾರೆ.

1999ರಲ್ಲಿ ಸುಮಾರು 900 ಮತಗಳಿಂದ ಸೋತಿದ್ದ ಸಿಟಿ ರವಿ ನಂತರದ ಚುನಾವಣೆಯಲ್ಲಿ ಕ್ರಮವಾಗಿ 25 ಸಾವಿರ, 15 ಸಾವಿರ, 11 ಸಾವಿರ, 26 ಮತಗಳಿಂದ ಗೆಲುವು ಸಾಧಿಸುತ್ತಾ ಬಂದಿದ್ದರು. ಆದರೆ ಈ ಬಾರಿ ಹೆಚ್.ಡಿ ತಮ್ಮಯ್ಯ ಎದುರು ಏಳು ಸಾವಿರ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+