ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಿ.ಟಿ ರವಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜನವರಿ 13: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಅವರು ಅಕ್ರಮವಾಗಿ ಸಾವಿರಾರು ಕೋಟಿ ರೂಪಾಯಿ ಆಸ್ತಿ ಸಂಪಾದಿಸಿದ್ದಾರೆಂದು ಇತ್ತೀಚೆಗೆ ಆರೋಪ ಮಾಡಿದ್ದ ಕೆಪಿಸಿಸಿ ವಕ್ತಾರ ಮೈಸೂರಿನ ಲಕ್ಷ್ಮಣ್ ವಿರುದ್ಧ ಗುರುವಾರ ನಗರದ 2ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.

ಗುರುವಾರ ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ತೆರಳಿದ ಸಿ.ಟಿ.ರವಿ, ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಮಾನನಷ್ಟ ಮಾಡಿದ್ದಾರೆಂದು ಆರೋಪಿಸಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದರು.

ಪ್ರಕರಣ ದಾಖಲಿಸಿಕೊಂಡ ನ್ಯಾಯಾಲಯ ಜನವರಿ 21ರಂದು ಸಿ.ಟಿ.ರವಿ ಹಾಗೂ ಸಾಕ್ಷಿದಾರರಿಂದ ಹೇಳಿಕೆ ಪಡೆಯಲು ದಿನ ನಿಗದಿ ಮಾಡಿದೆ.

CT Ravi Filed A Defamation Case Against M. Lakshman

ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಹಲವು ಬಾರಿ ಶಾಸಕ ಸಿ.ಟಿ.ರವಿ ಅವರು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಸರಕಾರಿ ಕಾಮಗಾರಿಗಳ ಗುತ್ತಿಗೆಯನ್ನು ಸಿ.ಟಿ.ರವಿಯವರ ಸಂಬಂಧಿಯೊಬ್ಬರು ಪಡೆದುಕೊಂಡು ಕಳಪೆ ಕಾಮಗಾರಿ ನಡೆಸಿ ಹಣ ಕೊಳ್ಳೆ ಹೊಡೆಯುತ್ತಿದ್ದಾರೆಂದು ಬಹಿರಂಗವಾಗಿ ಆರೋಪ ಮಾಡಿದ್ದರು.

ಸದ್ಯ ಸಿ.ಟಿ.ರವಿ ಅವರು ತಮ್ಮ ಮೇಲಿನ ಆರೋಪಕ್ಕೆ ಪ್ರತಿಯಾಗಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಕಾನೂನು ಹೋರಾಟಕ್ಕಿಳಿದಿದ್ದು, ಈ ವಿಚಾರ ಯಾವ ಹಂತಕ್ಕೆ ಮುಟ್ಟಲಿದೆ ಎಂಬುದು ಸಾರ್ವಜನಿಕರಲ್ಲಿ ವ್ಯಾಪಕ ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, "ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಯಾರ ಮೇಲೆ ಏನು ಬೇಕಾದರೂ ಹೇಳಬಹುದು ಎನ್ನುವಂತಹ ಮನಸ್ಥಿತಿಗೆ ಕೆಲವರು ಬಂದಿದ್ದಾರೆ. ಸುಳ್ಳು ಆರೋಪ ಮಾಡಿದ ಮೇಲೂ ಭಂಡತನದಿಂದ ಅದನ್ನು ಸಮರ್ಥಿಸಿಕೊಳ್ಳುವ ಕೆಟ್ಟ ಮನಸ್ಥಿತಿ ಅವರಲ್ಲಿದೆ. ಅವರ ಹೇಳಿಕೆಯಿಂದ ಸಾರ್ವಜನಿಕರಲ್ಲಿ ತನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಿದ್ದು, ಇದಕ್ಕೆ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಲು ಮುಂದಾಗಿದ್ದೇನೆ" ಎಂದರು.

English summary
BJP National General Secretary CT Ravi filed a defamation case against KPCC spokesperson Lakshman. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X