ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿಂದೂವಾಗಿ ಚರ್ಚ್, ಮಸೀದಿಗೂ ಕೂಡ ಹೋಗಬಹುದು, ದೇವನೊಬ್ಬ ನಾಮ ಹಲವು: ಸಿ.ಟಿ. ರವಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿಸೆಂಬರ್ 27: "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರ ಬದಲಾವಣೆ ವಿಚಾರ ಗಾಳಿಸುದ್ದಿ," ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ ಸ್ಪಷ್ಟಪಡಿಸಿದರು.

ಚಿಕ್ಕಮಗಳೂರು ನಗರದಲ್ಲಿ ಈ ಕುರಿತು ಮಾತನಾಡಿದ ಸಿ.ಟಿ. ರವಿ, "ಮಂಗಳವಾರ ಬಿಜೆಪಿ ಕಾರ್ಯಕಾರಿಣಿ ಸಭೆಯ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಅವಲೋಕನ ಹಾಗೂ ಇತ್ತೀಚೆಗೆ ನಡೆದ ಚುನಾವಣೆ ಹಾಗೂ ನಮ್ಮ ಪ್ರಣಾಳಿಕೆಯಲ್ಲಿ ನಾವು ಈಡೇರಿಸಿರುವ ಅಂಶಗಳು ಹಾಗೂ ಈಡೇರಿಸಬೇಕಾದ ಅಂಶಗಳ ಬಗ್ಗೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆ ಎದುಸಬೇಕಾದ ರಾಜಕೀಯ ತಂತ್ರಗಳ ಅವಲೋಕನ ನಡೆಯಲಿದೆ," ಎಂದರು.

"ಸಭೆಯಲ್ಲಿ ಯಾವುದೇ ಸಚಿವರ ಮೌಲ್ಯಮಾಪನ ಹಾಗೂ ಸ್ಥಾನ ಬದಲಾವಣೆಯ ಕುರಿತು ಚರ್ಚೆ ನಡೆಯುವುದಿಲ್ಲ. ಬದಲಾಗಿ ಪಕ್ಷದ ಸಂಘಟನೆ ಹಾಗೂ ರಾಜ್ಯ ಸರ್ಕಾರದ ಬಗ್ಗೆ ಅವಲೋಕನ ನಡೆಯಲಿದೆ. ರಾಜ್ಯಾಧ್ಯಕ್ಷರ ಹುದ್ದೆ ಅಥವಾ ಸಿಎಂ ಬದಲಾವಣೆ ವಿಚಾರ ಆಧಾರ ರಹಿತವಾಗಿದ್ದು, ಈ ಚರ್ಚೆ ಅಪ್ರಸ್ತುತವಾಗಿದೆ. ಈ ಬಗ್ಗೆ ನಿರ್ಣಯ ಮಾಡಬೇಕಾದದ್ದು ಪಾರ್ಲಿಮೆಂಟರಿ ಬೋರ್ಡ್‍," ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ct ravi refutes rumours of cm and bjp president change in karnataka

ರಾಜ್ಯಾಧ್ಯಕ್ಷರ ಹುದ್ದೆಗೆ ನಿಮ್ಮ ಹೆಸರು ಕೇಳಿ ಬರುತ್ತಿದೆ ಎಂಬ ಮಾತಿಗೆ ಉತ್ತರಿಸಿದ ಅವರು, ಗಾಳಿ ಸುದ್ದಿಗಳು ಆಗಾಗ ಹರಿದು ಬರುತ್ತಿರುತ್ತದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ನೀಡಿದ ಹುದ್ದೆಯಲ್ಲಿ ಆನಂದವಾಗಿದ್ದೇನೆ. ಪಕ್ಷ ಹೇಳಿದ ಹಾಗೆ ನಡೆದುಕೊಳ್ಳುವ ಶಿಸ್ತಿನ ಸಿಪಾಯಿ ನಾನು, ಪಕ್ಷ ಕೊಟ್ಟ ಕಾರ್ಯ, ಜವಾಬ್ದಾರಿಯನ್ನು ನಾನು ನಿರ್ವಹಿಸುತ್ತಿದ್ದು ಈಗ ಬರುತ್ತಿರುವುದು ಗಾಳಿ ಸುದ್ದಿ ಎಂದರು.

ಸರ್ಕಾರದ ನೈಟ್ ಕರ್ಫ್ಯೂಗೆ ಅಸಮಾಧಾನ
ಓಮಿಕ್ರಾನ್‌ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ, ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ತಮ್ಮದೇ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ. ರವಿ ಅಸಮಾಧಾನ ವ್ಯಕ್ತಪಡಿಸಿದರು.

ct ravi refutes rumours of cm and bjp president change in karnataka

ಸರ್ಕಾರ ಕೂಡ ಜನರನ್ನು ಅನಗತ್ಯ ಭಯಕ್ಕೆ ಒಳಪಡಿಸಬಾರದು, ಸದ್ಯ ಜನ ಜೀವನ ಸಹಜ ಸ್ಥಿತಿಯಲ್ಲಿದೆ, ಆದರೆ ಎಚ್ಚರ ವಹಿಸಬೇಕು. ಅನಗತ್ಯ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸರ್ಕಾರದ ನಿರ್ಣಯದ ವಿರುದ್ಧ ಸಿ.ಟಿ. ರವಿ ಚಾಟಿ ಬೀಸಿದರು.

ಸರ್ವಧರ್ಮ ಸಮನ್ವಯತೆಯ ಪಾಠ ಮಾಡಿದ ಸಿ.ಟಿ. ರವಿ
ಅಲ್ಲಾ, ಈಶ್ವರ, ಜೀಸಸ್‌ರನ್ನು ದೇವರೆಂದು ಒಪ್ಪಿಕೊಂಡರೆ ಜಗತ್ತಿನಲ್ಲಿ ಯಾವುದೇ ಸಂಘರ್ಷ ಇರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸರ್ವಧರ್ಮ ಸಮನ್ವಯತೆಯ ಪಾಠ ಮಾಡಿದರು.

ಒಬ್ಬ ಹಿಂದೂವಾಗಿ ಜೀಸಸ್, ಅಲ್ಲಾನನ್ನು ದೇವರು ಎಂದು ಒಪ್ಪಿಕೊಳ್ಳಬಹುದು. ಹಿಂದೂವಾಗಿ ಚರ್ಚ್, ಮಸೀದಿಗೂ ಕೂಡ ಹೋಗಬಹುದು. ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವವಿದೆ.

ct ravi refutes rumours of cm and bjp president change in karnataka

ಇಸ್ಲಾಂ ಆದ ತಕ್ಷಣ ಮಸೀದಿ ಹೊರತುಪಡಿಸಿ ದೇವಸ್ಥಾನದ ಬಾಗಿಲು ಬಂದ್ ಆಗುತ್ತದೆ. ಇಸ್ಲಾಂ, ಕ್ರಿಶ್ಚಿಯನ್ ಧರ್ಮಗಳಲ್ಲಿ ಉಳಿದ ದೇವರುಗಳ ಅಸ್ತಿತ್ವದ ಬಗ್ಗೆ ನಿರಾಕರಣೆ ಇದೆ. ಈ ವಿಚಾರದಲ್ಲಿ ಎರಡು ಧರ್ಮಗಳು ಆಲೋಚನೆ ಮಾಡಿದರೆ ಉತ್ತಮ ಎಂದು ಹೇಳಿದರು.

ಎಷ್ಟು ಮತಿ ಇದೆಯೋ ಅಷ್ಟು ಮತ ಅನ್ನುವ ಮುಕ್ತತೆಗೆ ಅವಕಾಶ ಸಿಗುತ್ತದೆ. ಜಗತ್ತಿನಲ್ಲಿ ಶಾಂತಿ ನೆಲೆಸಲು ಇರುವ ಅಡೆತಡೆಗಳನ್ನು ನಿವಾರಿಸುವುದಕ್ಕೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಆಲೋಚನೆ ಮಾಡಿದರೆ ಜಗತ್ತು ಸುಖವಾಗಿರುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದರು.

English summary
BJP National Chief Secretary CT Ravi refutes rumours of CM and BJP President change in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X