Get Updates
Get notified of breaking news, exclusive insights, and must-see stories!

ಚಿಕ್ಕಮಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾದ ಸಿ.ಟಿ.ರವಿ: ಕಿಡ್ನಿಯಲ್ಲಿ ಕಲ್ಲು ಇರುವುದಾಗಿ ವೈದ್ಯರ ಸ್ಪಷ್ಟನೆ

ಚಿಕ್ಕಮಗಳೂರು, ಏಪ್ರಿಲ್‌, 16: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಶಾಸಕ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಅವರ ಆಶ್ರಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡ ಕಾರಣ, ಸಿ.ಟಿ.ರವಿ ಕೂಡಲೇ ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ತೆರಳಿದ್ದಾರೆ.

 CT Ravi was admitted to hospital in Chikkamagaluru

ನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ ವೈದ್ಯರು, ಕಿಡ್ನಿ ಸ್ಟೋನ್‌ನಿಂದ ಹೊಟ್ಟೆ ನೋವು ಆಗಿದೆ. ಅವರನ್ನು 11 ಗಂಟೆ ಬಳಿಕ ಡಿಸ್ಚಾರ್ಜ್ ಮಾಡಲಾಗುತ್ತದೆ. ಹಾಗೆಯೇ ಅವರು ಇಂದು ಒಂದು ದಿನ ವಿಶ್ರಾಂತಿಯಲ್ಲಿ ಇರಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ.

ಕಲಬುರಗಿಯಲ್ಲಿ ಕಾರು ಅಪಘಾತ

ಇತ್ತೀಚೆಗಷ್ಟೇ ಮಾಜಿ ಸಚಿವ, ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ‌ ಬಾಬುರಾವ್ ಚಿಂಚನಸೂರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಶುಕ್ರವಾರಾ ರಾತ್ರಿ ಕಲಬುರಗಿ ಆಕಾಶವಾಣಿ ಕೇಂದ್ರದ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿತ್ತು.

ಅಪಘಾತದಲ್ಲಿ ಬಾಬುರಾವ್ ಚಿಂಚನಸೂರ್ ಅವರ ಕಾಲು ಮತ್ತು ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಬಾಬುರಾವ್ ಚಿಂಚನಸೂರ್ ಅವರನ್ನು ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಾದಗಿರಿಯಿಂದ ಕಲಬುರಗಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿಯೂ ಲಭ್ಯವಾಗಿತ್ತು.

ನಿದ್ದೆಯ ಮಂಪರಿನಲ್ಲಿದ್ದ ಚಾಲಕ ರಸ್ತೆಯ ಮಧ್ಯೆ ಇರುವ ಗುಂಡಿಯನ್ನು ನೋಡದೆ ಕಾರು ಚಲಾಯಿಸಿದ ಕಾರಣ ಗುಂಡಿಯಲ್ಲಿ ಸಿಲುಕಿ ಸ್ಕಿಡ್​ ಆಗಿದೆ. ಹೀಗಾಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಕಾರು ಬಿದ್ದ ರಭಸಕ್ಕೆ ಬಾಬುರಾವ್ ಚಿಂಚನಸೂರ್ ಅವರ ತಲೆ ಹಾಗೂ ಕಾಲಿಗೆ ಗಾಯಗಳಾಗಿವೆ. ಘಟನೆಯಲ್ಲಿ ಚಾಲಕ ಮತ್ತು ಗನ್​ಮ್ಯಾನ್​ಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಘಟನೆ ಬಳಿಕ ಸ್ಥಳೀಯರ ಸಹಾಯದಿಂದ ಬಾಬುರಾವ್ ಚಿಂಚನಸೂರ್ ಅವರನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿರುವ ಬಾಬುರಾವ್ ಚಿಂಚನಸೂರ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿದು ಬಂದಿದೆ. ಶುಕ್ರವಾರ ಚುನಾವಣಾ ಪ್ರಚಾರ ಮುಗಿಸಿ ಯಾದಗಿರಿಯಿಂದ ಕಲಬುರಗಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರ್​ನಲ್ಲಿ ಇಬ್ಬರು ಚಾಲಕರು, ಓರ್ವ ಗನ್ ಮ್ಯಾನ್ ಸೇರಿದಂತೆ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಬಾಬುರಾವ್ ಚಿಂಚನಸೂರ್ ಯಾದಗಿರಿ ಜಿಲ್ಲೆಯ ಗುರುಮಠಕಲ್ ವಿಧಾನಸಭಾ ಕ್ಷೇತ್ರದ‌ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಮೊದಲ ಬಾರಿಗೆ ಇಲ್ಲಿ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿಗೆ ಟಿಕೆಟ್‌ ನೀಡಲಾಗಿದೆ. ಇತ್ತೀಚೆಗಷ್ಟೇ ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕ, ಬಾಬುರಾವ್ ಚಿಂಚನಸೂರ್ ವಿಧಾನ ಪರಿಷತ್ ಸದಸ್ಯರಾಗಿ ಒಂದೂವರೆ ವರ್ಷಗಳ ಕಾಲ ಅಧಿಕಾರ ಬಾಕಿ ಇದ್ದರು, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಅವರನ್ನು ಗುರುಮಠಕಲ್ ವಿಧಾನಸಭಾ ಕ್ಷೇತ್ರದದಿಂದ ಕಾಂಗ್ರೆಸ್ ಕಣಕ್ಕಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+