ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತ ಯುವಕನಿಗೆ ಪಿಎಸ್ಐ ಮೂತ್ರ ಕುಡಿಸಿದ ಪ್ರಕರಣಕ್ಕೆ ಮತ್ತೊಂದು ತಿರುವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮೇ 22: ಚಿಕ್ಕಮಗಳೂರು ಜಿಲ್ಲೆ ಕಿರುಗುಂದ ಗ್ರಾಮದ ದಲಿತ ಯುವಕನ ಮೇಲೆ ಗೋಣಿಬೀಡು ಪೊಲೀಸ್ ಠಾಣಾಧಿಕಾರಿ ದೌರ್ಜನ್ಯ ಎಸಗಿದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ದೌರ್ಜನ್ಯದ ಸಂದರ್ಭದಲ್ಲಿ ಗೋಣಿಬೀಡು ಪೊಲೀಸ್ ಠಾಣಾಧಿಕಾರಿಯು ದಲಿತ ಯುವಕನಿಗೆ ಮೂತ್ರ ಕುಡಿಸಿದ್ದಲ್ಲದೇ, ಮೂತ್ರವನ್ನು ನಾಲಿಗೆಯಿಂದ ನೆಕ್ಕಿಸಿಸುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾರೆಂದು ನೊಂದ ಯುವಕ ಹೇಳಿಕೆ ನೀಡಿದ್ದಾನೆ.

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ ಅಮಾನವೀಯ ಕೃತ್ಯದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ಐ ಅಮಾನವೀಯ ಕೃತ್ಯ

ಘಟನೆಯ ವಿವರ

ಕಿರುಗುಂದ ಗ್ರಾಮದ ವಿವಾಹಿತ ಮಹಿಳೆ ಹಾಗೂ ಆಕೆಯ ಪತಿಯ ನಡುವಿನ ಜಗಳದ ವಿಚಾರಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ ಯಾವುದೇ ದೂರು ಇಲ್ಲದೇ ಅದೇ ಗ್ರಾಮದ ದಲಿತ ಸಮುದಾಯದ ಯುವಕ ಪುನೀತ್(22) ಎಂಬ ಯುವಕನ ಮೇಲೆ ಶಂಕೆಗೊಂಡು ಮೇ 10ರಂದು ಆತನನ್ನು ಗೋಣಿಬೀಡು ಠಾಣೆಗೆ ಕರೆದೊಯ್ದಿದ್ದರು.

Chikkamagaluru: Dalit youth Puneet Has Demanded The Suspend Of Gonibeedu PSI Arjun

ಈ ವೇಳೆ ಯುವಕ ಪುನೀತ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಹೊರಿಸಿದ ಠಾಣಾಧಿಕಾರಿ ಅರ್ಜುನ್, ಮಹಿಳೆಯೊಂದಿಗಿನ ಸಂಬಂಧವನ್ನು ಒಪ್ಪಿಕೊಂಡು ಆಕೆಯನ್ನು ಬಚ್ಚಿಟ್ಟಿರುವುದಾಗಿ ಒಪ್ಪಿಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಪುನೀತ್‌ನನ್ನು ಠಾಣೆಯ ಕೊಠಡಿಯೊಂದರಲ್ಲಿ ತಲೆಕೆಳಗೆ ಮಾಡಿ ನೇತು ಹಾಕಿ ಪಿಎಸ್ಐ ಹಲ್ಲೆ ನಡೆಸಿದ್ದರು.

ನಂತರ ಜಾತಿ ವಿಚಾರಿಸಿ ಜಾತಿ ನಿಂದನೆ ಮಾಡಿದ್ದಾರೆ. ನಂತರ ಅಂದು ರಾತ್ರಿ 10 ಗಂಟೆಗೆ ಮನೆಗೆ ಕಳುಹಿಸಿದ್ದಾರೆಂದು ಆರೋಪಿಸಿ ನೊಂದ ಯುವಕ ಎಸ್ಪಿ, ಐಜಿ, ಡಿಐಜಿಗೆ ಪತ್ರ ಬರೆದು ತನಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದ್ದರು.

Chikkamagaluru: Dalit youth Puneet Has Demanded The Suspend Of Gonibeedu PSI Arjun

ಈ ದೂರಿನ ಮೇರೆಗೆ ಚಿಕ್ಕಮಗಳೂರು ಎಸ್ಪಿ, ಘಟನೆ ಸಂಬಂಧ ತನಿಖೆ ನಡೆಸಲು ಡಿವೈಎಸ್ಪಿ ಒಬ್ಬರನ್ನು ನೇಮಿಸಿದ್ದರು. ಬಳಿಕ ಗೋಣಿಬೀಡು ಠಾಣಾಧಿಕಾರಿ ಅರ್ಜುನ್ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಿದ್ದ ಚಿಕ್ಕಮಗಳೂರು ಎಸ್ಪಿ ಎಂ.ಎಚ್ ಅಕ್ಷಯ್, ಗೋಣಿಬೀಡು ಠಾಣೆಗೆ ಮಹಿಳಾ ಪಿಎಸ್ಐ ಒಬ್ಬರನ್ನು ನೇಮಿಸಿದ್ದರು.

ಈ ಬೆಳವಣಿಗೆಗಳ ಬಳಿಕ ಮೂಡಿಗೆರೆ ತಾಲೂಕಿನ ದಲಿತ ಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು, ಎಸ್ಪಿ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿ ಪಿಎಸ್ಐ ಅರ್ಜುನ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದರು. ಆದರೆ ಈ ಸಂಬಂಧ ಚಿಕ್ಕಮಗಳೂರು ಎಸ್ಪಿ ಯಾವುದೇ ಕ್ರಮಕೈಗೊಂಡಿರಲಿಲ್ಲ.

Chikkamagaluru: Dalit youth Puneet Has Demanded The Suspend Of Gonibeedu PSI Arjun

ನೊಂದ ಯುವಕನ ಆಗ್ರಹವೇನು?

ಈ ಬೆಳವಣಿಗೆಗಳ ಮಧ್ಯೆ ಪಿಎಸ್ಐ ಅರ್ಜುನ್ ಅವರಿಂದ ದೌರ್ಜನ್ಯಕ್ಕೊಳಗಾದ ಯುವಕ ಪುನೀತ್, ಪಿಎಸ್ಐ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು, ಪಿಎಸ್ಐ ಹಲ್ಲೆ ಮಾಡಿರುವುದಲ್ಲದೇ ಠಾಣೆಯಲ್ಲಿ ಕುಡಿಯಲು ನೀರು ಕೇಳಿದ್ದಕ್ಕೆ ಮೂತ್ರವನ್ನು ಕುಡಿಸಿದ್ದಾರೆಂದು ಆರೋಪಿಸಿದ್ದಾನೆ.

"ಮೇ 10ರಂದು ಯಾವುದೇ ದೂರು ಇಲ್ಲದಿದ್ದರೂ 112 ವಾಹನದಲ್ಲಿ ಬಂದು ನನ್ನನ್ನು ಗೋಣಿಬೀಡು ಠಾಣೆಗೆ ಕರೆದೊಯ್ದಿದ್ದರು. ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಒಪ್ಪಿಕೊಳ್ಳುವಂತೆ ಹೇಳಿದ್ದರು. ಆದರೆ ನಾನು ಒಪ್ಪಿಕೊಳ್ಳದಿದ್ದಾಗ ತಲೆಕೆಳಗೆ ಮಾಡಿ ಠಾಣೆಯಲ್ಲಿ ಕಟ್ಟಿ ಹಾಕಿ ಹಲ್ಲೆ ಮಾಡಿದರು'' ಎಂದು ಹೇಳಿದ್ದಾರೆ.

ಹಲ್ಲೆಯಿಂದ ನಿತ್ರಾಣಗೊಂಡಿದ್ದ ವೇಳೆ ಕುಡಿಯಲು ನೀರು ಕೇಳಿದಾಗ, ಪೊಲೀಸ್ ಠಾಣೆಯಲ್ಲೇ ಇದ್ದ ಕಳ್ಳತನದ ಆರೋಪಿಯಿಂದ ನನ್ನ ಬಾಯಿಗೆ ಮೂತ್ರ ಮಾಡಿಸಿದ್ದಾರೆ. ನಂತರ ಮೂತ್ರವನ್ನು ನೆಕ್ಕಿಸಿದ್ದಾರೆ ಈ ಸಂಬಂಧ ಎಸ್ಪಿ, ಐಜಿ, ಡಿಐಜಿ ಹಾಗೂ ಮಾನವ ಹಕ್ಕು ಆಯೋಗಕ್ಕೂ ದೂರು ನೀಡಿದ್ದರೂ, ಪಿಎಸ್ಐ ವಿರುದ್ಧ ಯಾವುದೇ ಕಾನೂನು ಕ್ರಮಕೈಗೊಂಡಿಲ್ಲ ಎಂದು ನೊಂದ ದಲಿತ ಯುವಕ ತಿಳಿಸಿದ್ದಾನೆ.

"ಪೊಲೀಸ್ ಠಾಣಾಧಿಕಾರಿಯನ್ನು ಅಮಾನತು ಮಾಡದೇ ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಪಿಎಸ್ಐ ಹಲ್ಲೆ, ಅಮಾನವೀಯ ಹಿಂಸೆಯಿಂದ ನಾನು ಮಾನಸಿಕವಾಗಿ, ದೈಹಿಕವಾಗಿ ನೊಂದಿದ್ದು, ತನಗೆ ನ್ಯಾಯ ಕೊಡಿಸಿ'' ಎಂದು ಪುನೀತ್ ಆಗ್ರಹಿಸಿದ್ದಾನೆ.

Recommended Video

ಶಿವಾಜಿನಗರ ಪೋಲಿಸ್ ಠಾಣೆ ಎದುರು ನಡೆದ ಘಟನೆ | Oneindia Kannada

English summary
Gonibidu police station officer assaulting on Dalit youth in Kirugunda in Chirukkamagaluru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X