Datta Jayanti : ಮಾಲಾಧಾರಣೆ ಮಾಡುವ ಮೂಲಕ ದತ್ತಜಯಂತಿಗೆ ಚಾಲನೆ
ಚಿಕ್ಕಮಗಳೂರು, ನ.28: ದತ್ತ ಭಕ್ತರು ದತ್ತಮಾಲೆ ಧರಿಸುವ ಮೂಲಕ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ವತಿಯಿಂದ ಹಮ್ಮಿಕೊಂಡಿರುವ ದತ್ತ ಜಯಂತಿ ಕಾರ್ಯಕ್ರಮಕ್ಕೆ ಸೋಮವಾರದಿಂದ ವಿದ್ಯುಕ್ತ ಚಾಲನೆ ಸಿಕ್ಕಿದೆ.
ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಗಣಪತಿ ಹೋಮ ನೆರವೇರಿಸಿ ದತ್ತಮೂರ್ತಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ದತ್ತಗೀತೆಗಳನ್ನು ಪಠಿಸುವ ಮೂಲಕ ನೂರಾರು ಭಕ್ತರು ದತ್ತಮಾಲೆಯನ್ನು ಧರಿಸಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ದತ್ತಮಾಲೆಯನ್ನು ಧರಿಸಿದರು.
ದತ್ತಜಯಂತಿ ಕಾರ್ಯಕ್ರಮ ಸೋಮವಾರದಿಂದ ಆರಂಭವಾಗಿದ್ದು, ಡಿಸೆಂಬರ್ 8ರ ವರೆಗೂ ನಡೆಯಲಿದೆ. ಡಿಸೆಂಬರ್ 6ರಂದು ಮಹಿಳೆಯರಿಂದ ಅನುಸೂಯ ಜಯಂತಿ, ಶೋಭಾಯಾತ್ರೆ ಹಾಗೂ ದತ್ತ ಪಾದುಕೆ ದರ್ಶನ ನಡೆಯಲಿದೆ. ಡಿಸೆಂಬರ್ 7ರಂದು ದತ್ತಭಕ್ತರಿಂದ ಭೀಕ್ಷಾಟನೆ, ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾ ಯಾತ್ರೆ ನಡೆಯಲಿದೆ.

ಡಿಸೆಂಬರ್ 8ರಂದು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ದತ್ತಭಕ್ತರು ದತ್ತಿಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯುವ ಮೂಲಕ ದತ್ತಜಯಂತಿ ಕಾರ್ಯಕ್ರಮ ತೆರೆ ಬೀಳಲಿದೆ.
ದತ್ತಮಾಲೆ ಧರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ, "ದತ್ತಪೀಠ ವಿಚಾರ ಸಂಬಂಧ ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶದ ಮೇರೆಗೆ ಸಚಿವ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಿತ್ತು. ಸಮಿತಿ ಶಿಫಾರಸನ್ನು ಪರಿಗಣಿಸಿ ರಾಜ್ಯ ಸರ್ಕಾರ ಆಡಳಿತ ಮಂಡಳಿಯನ್ನು ರಚಿಸಿದೆ" ಎಂದರು.
ದತ್ತಪೀಠಕ್ಕೆ ನ್ಯಾಯ ಕೊಡಿಸುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ಈ ವರ್ಷದ ದತ್ತ ಜಯಂತಿ ಹಿಂದೂ ಅರ್ಚಕರ ಪೂಜೆಯೊಂದಿಗೆ ಯಾವುದೇ ವಿವಾದಕ್ಕೆ ಅವಕಾಶವಿಲ್ಲದಂತೆ ನೆರವೇರಲಿದೆ. ಬಾಬಾಬುಡನ್ ದರ್ಗಾದಲ್ಲಿ ಮುಜಾವರ್‍ರಿಂದ ಪೂಜೆಯಾದರೇ, ದತ್ತಪೀಠದಲ್ಲಿ ಹಿಂದೂ ಅರ್ಚಕರಿಂದ ಪೂಜೆ ನಡೆಯಲಿದೆ. ಹಿಂದೂ ಅರ್ಚಕರ ನೇಮಕ ಸಂಬಂಧ ಇರುವ ಅಡೆತಡೆಗಳನ್ನು ನಿವಾರಿಸುವ ಕೆಲಸವನ್ನು ಮಾಡಲಾಗಿದೆ. ಆಡಳಿತ ಮಂಡಳಿ ಅರ್ಚಕರ ನೇಮಕ ಕೈಗೊಳ್ಳಲಿದೆ ಎಂದರು.

ದತ್ತಪೀಠದಲ್ಲಿ ನಿರಂತರ ಹಿಂದೂ ಅರ್ಚಕರಿಂದ ಪೂಜೆ ಸಂಬಂಧ ಆಡಳಿತ ಮಂಡಳಿ ಸಭೆ ಸೇರಿ ನಿರ್ಣಾಯ ತಗೆದುಕೊಂಡ ನಂತರ ಪೂರ್ಣಾವಧಿ ಅರ್ಚಕರ ನೇಮಕ ಪ್ರಕ್ರಿಯೇ ನಡೆಯಲಿದೆ. ತಾತ್ಕಾಲಿಕ ಅರ್ಚಕರನ್ನು ನೇಮಕ ಮಾಡಿ ಪೂಜೆ ಪ್ರಾರಂಭಿಸುವ ಕೆಲಸವನ್ನು ಆಡಳಿತ ಮಂಡಳಿ ಮಾಡಲಿದೆ ಎಂದು ಮಾಹಿತಿ ನೀಡಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications