ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದತ್ತ ಜಯಂತಿಗೆ ಕಾಫಿನಾಡಲ್ಲಿ ಸರ್ಪಗಾವಲು, ಜಿಲ್ಲಾದ್ಯಂತ ಪೊಲೀಸರ ಹದ್ದಿನಕಣ್ಣು

|
Google Oneindia Kannada News

ಚಿಕ್ಕಮಗಳೂರು, ಡಿ. 05: ಕಾಫಿನಾಡಲ್ಲಿ ದತ್ತ ಜಯಂತಿ ಸಂಭ್ರಮ ಮನೆ ಮಾಡಿದೆ. ಡಿಸೆಂಬರ್ 6 ರಿಂದ ಮೂರ ದಿನಗಳ ಕಾಲ ನಡೆಯಲಿರುವ ದತ್ತಜಯಂತಿ ಹಿನ್ನೆಲೆ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಭಕ್ತಾಧಿಗಳ ಅನುಕೂಲಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾಹಿತಿ ನೀಡಿದ್ದಾರೆ. ಸುಗಮ ಸಂಚಾರ ದೃಷ್ಠಿಯಿಂದ ರಸ್ತೆ ದುರಸ್ಥಿ ಕಾರ್ಯವೂ ಪೂರ್ಣಗೊಂಡಿದೆ. ತಾತ್ಕಾಲಿಕ ಆರೋಗ್ಯ ಸೌಲಭವನ್ನು ಒದಗಿಸಲು 3 ದಿನದ ಮಟ್ಟಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗುವುದು.

ರಾಮನಗರ: ಜಿಲ್ಲಾ ಪಂಚಾಯತ್ ಆಡಳಿತ ವ್ಯವಸ್ಥೆಯನ್ನು ಪ್ರಶಂಸಿಸಿದ 16 ದೇಶದ ಪ್ರತಿನಿಧಿಗಳು ರಾಮನಗರ: ಜಿಲ್ಲಾ ಪಂಚಾಯತ್ ಆಡಳಿತ ವ್ಯವಸ್ಥೆಯನ್ನು ಪ್ರಶಂಸಿಸಿದ 16 ದೇಶದ ಪ್ರತಿನಿಧಿಗಳು

ಹೊನ್ನಮ್ಮನ ಹಳ್ಳದಲ್ಲಿ ಭಕ್ತರು ಸ್ನಾನ ಮಾಡಲು ಮೆಟ್ಟಿಲು, ಕಟ್ಟೆ ನಿರ್ಮಾಣ ಮಾಡಲಾಗಿದೆ. ದತ್ತ ಜಯಂತಿ ಮುಗಿಯುವವರೆಗೂ ನಿರಂತರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

Datta Jayanti 2022: Datta Jayanti celebrations in chikkamagaluru

ಭಕ್ತರು ಬೆಟ್ಟಕ್ಕೆ ತೆರಳಲು ಅನುಕೂಲವಾಗುವಂತೆ ಖಾಸಗಿ ಸಂಘ ಸಂಸ್ಥೆಯವರೊಂದಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕುಡಿಯುವ ನೀರು ಶೌಚಾಲಯ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 6 ರಿಂದ 8 ವರೆಗೆ ದತ್ತ ಜಯಂತಿ ನಡೆಯಲಿದ್ದು, 6 ರಂದು ಅನುಸೂಯ ಜಯಂತಿ ನಡೆಯಲಿದೆ. ಅಂದು ಬೋಳರಾಮೇಶ್ವರ ದೇವಸ್ಥಾನದಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುವರೆಗೂ ಮೆರವಣಿಗೆ ನಡೆಯಲಿದೆ. ಸುಮಾರು 5 ರಿಂದ 6 ಸಾವಿರ ಜನರು ಸೇರುವ ಮಾಹಿತಿ ಇದೆ. ಡಿ. 7ರಂದು ನಗರದ ಕಾಮಧೇನು ಗಣಪತಿ ದೇವಸ್ಥಾನ ಆವರಣದಿಂದ ಆಜಾದ್‍ಪಾರ್ಕ್ ವೃತ್ತದವರೆಗೂ ಶೋಭಾಯಾತ್ರೆ ನಡೆಯಲಿದ್ದು, 30 ಸಾವಿರಕ್ಕೂ ಅಧಿಕ ಜನ ಸೇರುವ ಬಗ್ಗೆ ಮಾಹಿತಿ ಇದೆ. ಡಿ. 8ರಂದು ದತ್ತಪೀಠದಲ್ಲಿ ದತ್ತಪಾದುಕೆ ದರ್ಶನ ನಡೆಯಲಿದೆ.

ಈ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕೈಗೊಳ್ಳಲಾಗಿದೆ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕ್ಯಾಮೆರಾ, ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ದತ್ತ ಜಯಂತಿ ಕಾರ್ಯಕ್ರಮಗಳ ದಿನದಂದು ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಮಾರ್ಪಡುಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Datta Jayanti 2022: Datta Jayanti celebrations in chikkamagaluru

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡು ಸಮುದಾಯಗಳ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟರ್ ಹಾಕದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನ್ಯ ಧರ್ಮ ಜನರ ಭಾವನೆಗೆ ಧಕ್ಕೆಯಾಗುಂತಹ ಘೋಷಣೆಗಳನ್ನು ಕೂಗದಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಗಿರಿ ಭಾಗದ ಪ್ರವಾಸಿಗರಿಗೆ ನಿರ್ಬಂಧ :

ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 5ರ ಬೆಳಿಗ್ಗೆ 6 ಗಂಟೆಯಿಂದ ಡಿ. 9ರ ಬೆಳಿಗ್ಗೆ 10 ಗಂಟೆಯವರೆ ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.

English summary
Datta Jayanti 2022: The district administration has made all preparations throughout the chikkamagaluru district. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X