Breaking: ಮನೆ ಮನೆಗೆ ತೆರಳಿ ಪಡಿ ಸಂಗ್ರಹ ಮಾಡಿದ ಸಿ.ಟಿ.ರವಿ
ಚಿಕ್ಕಮಗಳೂರು, ಡಿ.07 : ದತ್ತಜಯಂತಿ ಹಿನ್ನೆಲೆ ಶಾಸಕ ಸಿ.ಟಿ.ರವಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ್ದಾರೆ. ನಗರದ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ಭಿಕ್ಷಾಟನೆ ಮೂಲಕ ಮಾಲಾಧಾರಿಗಳಿಂದ ಪಡಿಸಂಗ್ರಹ ನಡೆದಿದೆ.
ಪಡಿ ಸಂಗ್ರಹಕ್ಕೆ ಮನೆಗೆ ಬಂದ ದತ್ತಮಾಲಾಧಾರಿಗಳಿಗೆ ಸಾರ್ವಜನಿಕರು ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ -ಬೆಲ್ಲ ನೀಡಿ ಸ್ವಾಗತಿಸಿದರು. ಬುಧವಾರ ಮನೆಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿಗಳು ಗುರುವಾಋ ಇರುಮುಡಿ ರೂಪದಲ್ಲಿ ಅದನ್ನ ದತ್ತಪೀಠಕ್ಕೆ ಕೊಂಡೊಯ್ದು ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಿದ್ದಾರೆ.
20ಕ್ಕೂ ಹೆಚ್ಚು ಮಾಲಾಧಾರಿಗಳ ಜೊತೆಗೆ ಶಾಸಕ ಸಿ.ಟಿ. ರವಿ ಪಡಿ ಸಂಗ್ರಹ ಮಾಡಿದರು. ಬುಧವರಾ ಮಧ್ಯಾಹ್ನ ನಗರದಲ್ಲಿ 30 ಸಾವಿರಕ್ಕೂ ಅಧಿಕ ದತ್ತ ಭಕ್ತರಿಂದ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ, ಮುಂಜಾಗೃತ ಕ್ರಮವಾಗಿ ಶೋಭಾಯಾತ್ರೆ ತೆರಳುವ ಮಾರ್ಗದಲ್ಲಿ ಪಾರ್ಕಿಂಗ್ ಕ್ಯಾನ್ಸಲ್ ಮಾಡಿದ್ದು, ಬೆಳಗ್ಗೆಯಿಂದಲೂ ಪೊಲೀಸರು ಕಾವಲಿದ್ದು, ಖಾಕಿ ಪಡೆ ಜಿಲ್ಲಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.

ಮಧ್ಯಾಹ್ನ ನಗರದಲ್ಲಿ ಶೋಭಾಯಾತ್ರೆ ನಡೆಯಲಿದ್ದು, ನಾಳೆ ದತ್ತಪಾದುಕೆ ದರ್ಶನ ನಡೆಯಲಿದೆ. ಹಾಗಾಗಿ, ಹಿಂದೂ ಸಂಘಟನೆಗಳು ನಗರವನ್ನ ಕೇಸರಿಮಯವನ್ನಾಗಿಸಿದ್ದಾರೆ. ಜಿಲ್ಲೆಯಲ್ಲಿ 4,500ಕ್ಕೂ ಅಧಿಕ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಐಜಿಪಿ ಚಂದ್ರಗುಪ್ತ ಮಂಗಳವಾರ ರಾತ್ರಿ ಚಿಕ್ಕಮಗಳೂರು ಭೇಟಿ ನೀಡಿ ಭದ್ರತಾ ಕ್ರಮಗಳ ಪರಿಶೀಲನೆ ನಡೆಸಿದ್ದಾರೆ.
47 ವರ್ಷಗಳಿಂದ ದತ್ತಪೀಠದ ಉಮೇದುವಾರಿಕೆ ಹಾಗೂ ಹಿಂದೂ ಅರ್ಚಕರಿಗಾಗಿ ಹಿಂದೂ ಸಂಘಟನೆಗಳು ಹೋರಾಡುತ್ತಿದ್ದವು. ಈ ಬಾರಿ ಹಿಂದೂ ಅರ್ಚಕರು ದತ್ತ ಪೀಠದಲ್ಲಿ ಪೂಜೆ ನಡೆಸಲಿದ್ದಾರೆ. ರಾಜ್ಯ ಸರ್ಕಾರ ನೇಮಿಸಿರುವ ತಾತ್ಕಾಲಿಕ ಅರ್ಚಕರು ಮೂರು ದಿನಗಳು ದತ್ತಾತ್ರೇಯ ಸ್ವಾಮಿಗೆ ಪೂಜಾ - ಕೈಂಕರ್ಯ ನಡೆಸಲಿದ್ದಾರೆ.












Click it and Unblock the Notifications