ದತ್ತಜಯಂತಿ ವೇಳೆ ನ್ಯಾಯಾಲಯದ ಆದೇಶಗಳನ್ನು ಗಾಳಿಗೆ ತೂರಲಾಗಿದೆ: ಗೌಸ್ ಮೊಯಿವುದ್ದಿನ್ ಆರೋಪ
ಚಿಕ್ಕಮಗಳೂರು, ಡಿ.11: ದತ್ತಜಯಂತಿ ಆಚರಣೆ ಸಂದರ್ಭದಲ್ಲಿ ನ್ಯಾಯಾಲಯದ ಆದೇಶಗಳನ್ನು ಗಾಳಿಗೆ ತೂರಲಾಗಿದೆ. ಜಿಲ್ಲಾಡಳಿತ ಇದನ್ನು ನೋಡಿಕೊಂಡು ಕಣ್ಮುಚ್ಚಿ ಕೊಳಿತುಕೊಂಡಿದೆ ಎಂದು ಕೋಮು ಸೌಹಾರ್ದ ವೇದಿಕೆ ಸಂಚಾಲಕ ಗೌಸ್ ಮೊಯಿವುದ್ದಿನ್ ಆರೋಪಿಸಿದ್ದಾರೆ.
ಶನಿವಾರ ನಗರದಲ್ಲಿ ಮಾತನಾಡಿದ ಅವರು, ದತ್ತಜಯಂತಿ ಸಂದರ್ಭದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲು ನ್ಯಾಯಾಲಯದ ಆದೇಶದಂತೆ ಸರ್ಕಾರ ಇಬ್ಬರು ಅರ್ಚಕರನ್ನು ನೇಮಕ ಮಾಡಿದೆ. ಆದರೆ, ಈ ಅರ್ಚಕರ ಹೊರತಾಗಿ ಕ್ರಿಮಿನಲ್ ಪ್ರಕರಣ ಹೊಂದಿದವರು ಗುಹೆಯೊಳಗೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ದೂರಿದ್ದಾರೆ.
ನ್ಯಾಯಾಲಯದ ಆದೇಶದಂತೆ ಸಂವರ್ಧನಾ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯಲ್ಲಿ ಎರಡು ಸಮುದಾ ಯಕ್ಕೆ ಸೇರಿದವರ ಸಮ ಸದಸ್ಯರನ್ನು ಒಳಗೊಂಡಿರಬೇಕು. ಇಬ್ಬರು ಮಹಿಳಾ ಸದಸ್ಯರಿರಬೇಕು ಎಂದು ಆದೇಶಿಲಾಗಿದೆ. ಆದರೆ, ಅನ್ಯ ಸಮುದಾಯಕ್ಕೆ ಸೇರಿದ ಏಕವ್ಯಕ್ತಿಯನ್ನು ಮಾತ್ರ ನಿಯೋಜಿಸಲಾಗಿದೆ. ಉಳಿದಂತೆ ಒಂದು ಸಮುದಾಯಕ್ಕೆ ಸೇರಿದ ಸದಸ್ಯರನ್ನು ಮಾತ್ರ ನೇಮಕ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಂವರ್ಧನಾ ಸಮಿತಿಯನ್ನು ನ್ಯಾಯಾಲಯದ ಆದೇಶದಂತೆ ರಚನೆಯಾಗಿಲ್ಲ. ಈ ನಿಟ್ಟಿನಲ್ಲಿ ಸಮಿತಿಯನ್ನು ರದ್ದು ಪಡಿಸುವಂತೆ ಖುದ್ದು ಅರ್ಜಿ ಸಲ್ಲಿಸಿದ್ದೇನೆ ಎಂದ ಅವರು, ದತ್ತಜಯಂತಿ ವೇಳೆ ದತ್ತ ಪಾದುಕೆಗಳಿಗೆ ಪೂಜೆ ಸಲ್ಲಿಸುವ ನಿಟ್ಟಿನಲ್ಲಿ ಸಮಿತಿ ಮನವಿ ಮೇರೆಗೆ ರಾಜ್ಯ ಸರ್ಕಾರ ಇಬ್ಬರು ಅರ್ಚಕರನ್ನು ನೇಮಿಸಿದೆ. ಆದರೆ, ಇಬ್ಬರು ಅರ್ಚಕರನ್ನು ಹೊರತುಪಡಿಸಿ ಇತರರು ಪೂಜೆ ಸಲ್ಲಿಸುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ದೂರಿದ್ದಾರೆ.
ಗುಹೆಯೊಳಗೆ ಚಿತ್ರೀಕರಣ ಮಾಡಬಾರದು ಎಂದು ಆದೇಶವಿದ್ದರು. ಗುಹೆಯ ಚಿತ್ರೀಕರಣದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಿಯಮ ಮೀರಿ ದತ್ತಜಯಂತಿಯನ್ನು ನಡೆಸಿದ್ದರ ಬಗ್ಗೆ ಜಿಲ್ಲಾಧಿ ಕಾರಿಗಳನ್ನು ಪ್ರಶ್ನಿಸಿದರೇ, ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ದತ್ತಜಯಂತಿ ಕಾರ್ಯಕ್ರಮಕ್ಕೂ ಜಿಲ್ಲಾಡಳಿತಕ್ಕೂ ಸಂಬಂಧವಿಲ್ಲ, ಸರ್ಕಾರ ಮತ್ತು ಸಂವರ್ಧನಾ ಸಮಿತಿ ನಡುವೆ ಪೋಸ್ಟ್‍ಮ್ಯಾನ್ ಆಗಿ ಕಾರ್ಯನಿರ್ವಹಿಸುವುದಷ್ಟೇ ಜಿಲ್ಲಾಡಳಿತದ ಕರ್ತವ್ಯ ಎಂದು ಹೇಳುತ್ತಿದ್ದಾರೆ. ಜಿಲ್ಲಾಡಳಿತದ ವರದಿ ಅನುಸಾರವಾಗಿ ಸಮಿತಿ ರಚನೆಯಾಗಿದೆ. ಆದರೆ, ಜಿಲ್ಲಾಡಳಿತ ರಾಜಕೀಯ ಒತ್ತಡಕ್ಕೆ ಮಣಿದು ತನ್ನ ಹೊಣೆಯಿಂದ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಜಿಲ್ಲಾ ಬ್ಯಾರಿ ಒಕ್ಕೂಟದ ಅಧ್ಯಕ್ಷ ಕೆ.ಮಹಮದ್ ಮಾತನಾಡಿ, ದತ್ತ ಜಯಂತಿ ಆಚರಣೆ ವೇಳೆ ಕಾನೂನು ನಿಯಮ ಗಳನ್ನು ಗಾಳಿಗೆ ತೂರಲಾಗಿದೆ. ಇದನ್ನು ನೋಡಿಕೊಂಡು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸುಮ್ಮನೆ ಕುಳಿತಿದೆ ಎಂದಿದ್ದಾರೆ.
ಕಾರ್ಮಿಕರನ್ನು ಪಿಕಪ್ ವಾಹನದಲ್ಲಿ ತುಂಬಿಕೊಂಡು ಬಂದರೇ. ಪೊಲೀಸ್ ಇಲಾಖೆ ಪ್ರಕರಣ ದಾಖಲಿಸುತ್ತದೆ. ಆದರೆ, ದತ್ತಜಯಂತಿಗೆ ಪಿಕಪ್ ವಾಹನದಲ್ಲಿ ಜನರನ್ನು ಕರೆತರಲಾಗಿದೆ. ಬೈಕ್ ಸವಾರರು ಯಾವ ನಿಯಮಗಳನ್ನು ಪಾಲಿಸಿಲ್ಲ. ಪೊಲೀಸ್ ಇಲಾಖೆ ಇವರ ಮೇಲೆ ಯಾವುದೇ ಕಾನೂನು ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ದತ್ತಪೀಠದಲ್ಲಿ ಮೂರು ದಿನಗಳ ಕಾಲ ಅರ್ಚಕರನ್ನು ನೇಮಕ ಮಾಡಲಾಗಿದೆ. ಆದರೆ, ಇದುವರೆಗೂ ಅರ್ಚಕರು ಅಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಹಿಂದೂ ಸಂಘಟನೆಗಳು ಅಳವಡಿಸಿರುವ ಬ್ಯಾನರ್ ಬಂಟಿಂಗ್‍ಗಳನ್ನು ಇದುವರೆಗೂ ತೆರವುಗೊಳಿಸಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎರಡು ಸಮುದಾಯವನ್ನು ಏಕ ಸಮಾನವಾಗಿ ನೋಡಬೇಕು. ಆದರೆ, ಜಿಲ್ಲಾಡಳಿತ ತಾರತಮ್ಯ ಮಾಡುತ್ತಿದೆ ಎಂದಿದ್ದಾರೆ.
ದತ್ತಜಯಂತಿ ಸಂದರ್ಭದಲ್ಲಿನ ಲೋಪಗಳನ್ನು ಜಿಲ್ಲಾಧಿಕಾರಿಗಳ ಬಳಿ ಪ್ರಶ್ನಿಸಿದರೇ ಹಾರಿಕೆ ಉತ್ತರ ನೀಡುತ್ತಾರೆ. ಜಿಲ್ಲಾಡಳಿತಕ್ಕೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications