ಡಿ. 24 ರಿಂದ 26ರ ತನಕ ಚಿಕ್ಕಮಗಳೂರಿಗೆ ಭೇಟಿ ನೀಡುವವರ ಗಮನಕ್ಕೆ
ಚಿಕ್ಕಮಗಳೂರು, ಡಿಸೆಂಬರ್ 20; ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ನಡೆಯುವ ದತ್ತ ಜಯಂತಿ 2023ರ ಕಾರ್ಯಕ್ರಮಗಳು ಆರಂಭವಾಗಿವೆ. ದತ್ತ ಭಕ್ತರು ಮಾಲೆ ಧಾರಣೆ ಮಾಡಿಕೊಂಡು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. 10 ದಿನಗಳ ದತ್ತಜಯಂತಿ ಅಂಗವಾಗಿ ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಡಿಸೆಂಬರ್ 24 ರಿಂದ 26ರ ತನಕ 2023ರ ದತ್ತ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಚಿಕ್ಕಮಗಳೂರು ನಗರದ ಕೆಲವು ಮುಖ್ಯ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ಮತ್ತು ಸಂಚಾರವನ್ನು ನಿಷೇಧಿಸಿ, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗವನ್ನು ನಿಗದಿಪಡಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಡಿಸೆಂಬರ್ 24ರ ಭಾನುವಾರ ಚಿಕ್ಕಮಗಳೂರು ನಗರದಲ್ಲಿ ಸಾವಿರಾರು ಮಹಿಳೆಯರು ಬೃಹತ್ ಸಂಕೀರ್ತನ ಯಾತ್ರೆ ನಡೆಸಲಿದ್ದಾರೆ. ದತ್ತಪೀಠದಲ್ಲಿ ಅನುಸೂಯ ಜಯಂತಿ ಆಚರಿಸಲಿದ್ದಾರೆ. ಡಿಸೆಂಬರ್ 25ರ ಸೋಮವಾರದಂದು ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ.
ಡಿಸೆಂಬರ್ 26ರಂದು ರಾಜ್ಯದ ಮೂಲೆ ಮೂಲೆಗಳಿಂದ ಬರುವ 25,000ಕ್ಕೂ ಅಧಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಉಂಟಾಗುವ ಸಂಚಾರದಟ್ಟಣೆ ಗಮನದಲ್ಲಿಟ್ಟುಕೊಂಡು ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶ; ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ ದಿನಾಂಕ 24/12/2023 ರಿಂದ 26/12/2023ರ ವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವು ಮುಖ್ಯ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ಮತ್ತು ಸಂಚಾರವನ್ನು ನಿಷೇಧಿಸಿ, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗವನ್ನು ಕಲ್ಪಿಸುವ ಕುರಿತು ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ತಾಲೂಕು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಕಾರ್ಯಕ್ರಮವನ್ನು ನಡೆಸಲಿದ್ದು, ಈ ಸಂಬಂಧವಾಗಿ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ದತ್ತಮಾಲಾಧಾರಿಗಳು, ಬಜರಂಗದಳ ಮತ್ತು ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರುಗಳು, ರಾಜಕೀಯ ಮುಖಂಡರು, ಮಠಾಧೀಶರುಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಆದೇಶ ಹೇಳಿದೆ.
ಪೊಲೀಸ್ ಅಧೀಕ್ಷಕರು ಚಿಕ್ಕಮಗಳೂರು ಅವರಉಲ್ಲೇಖದಂತೆ 24/12/2023ರಂದು ಅನುಸೂಯ ಜಯಂತಿಯ ಪ್ರಯುಕ್ತ ನಡೆಯಲಿರುವ ಸಂಕೀರ್ತನಾ ಯಾತ್ರೆ ಮತ್ತು ದಿನಾಂಕ 25/12/2022 ರಂದು ಸಂಕೀರ್ತನಾ ಯಾತ್ರೆ ಮತ್ತು ಶೋಭಾಯಾತ್ರೆ ಮೆರವಣಿಗೆಯು ಇಂದಿರಾಗಾಂಧಿ ರಸ್ತೆ, ಆರ್.ಜಿ.ರಸ್ತೆ, ಬಸವನಹಳ್ಳಿ ರಸ್ತೆ, ಎಂ.ಜಿ.ರಸ್ತೆಯ ಮೂಲಕ ಆಜಾದ್ ಪಾರ್ಕ್ ವರೆಗೆ ಸಾಗುವುದರಿಂದ ಕೆಲವು ಮುಖ್ಯ ರಸ್ತೆಗಳಲ್ಲಿ ವಾಹನ ನಿಲುಗಡೆ ಮತ್ತು ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಮತ್ತು ಅಪಘಾತಗಳು ಸಂಭವಿಸದಂತೆ ಹಾಗೂ ಮೆರವಣಿಗೆ ಸಾಗುವ ಸಂದರ್ಭದಲ್ಲಿ ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಿದೆ.
ಸದರಿ ರಸ್ತೆಗಳಲ್ಲಿ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗವನ್ನು ನಿಗದಿಪಡಿಸುವುದು ಸೂಕ್ತವೆಂದು ಮನಗಂಡು ಈ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ) (5)ರ ಅಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಎಲ್ಲಾ ರೀತಿಯ ವಾಹನಗಳ ನಿಲುಗಡೆ ಮತ್ತು ಸಂಚಾರವನ್ನು ನಿಷೇಧಿಸಿ, ಸದರಿ ವಾಹನಗಳ ನಿಲುಗಡೆ ಮತ್ತು ಸಂಚಾರಕ್ಕೆ ಬದಲಿ ಮಾರ್ಗವನ್ನು ನಿಗದಿಪಡಿಸಿ ಆದೇಶಿಸಿದ್ದಾರೆ.
ಬದಲಿ ಮಾರ್ಗದ ವಿವರ ಇಲ್ಲಿದೆ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications