ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದತ್ತಪೀಠ ವಿವಾದ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು,ಆ.22. ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಹಾಗಾಗಿ ಸದ್ಯ ಈ ಹಿಂದೆ ಇದ್ದಂತೆಯೇ ಪೂಜಾ ವಿಧಿ ವಿಧಾನಗಳು ಮುಂದುವರಿಯಲಿದೆ.

ಈ ಮಧ್ಯೆ ಸರ್ಕಾರ ಹೈಕೋರ್ಟ್‌ಗೆ ಮೆಮೋ ಸಲ್ಲಿಸಿ, ದತ್ತಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ಕೈಗೊಂಡಿರುವ ನಿರ್ಣಯದ ಕುರಿತು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ದತ್ತಪೀಠಕ್ಕೆ ಅರ್ಚಕರ ನೇಮಕ: ಸಂಪುಟ ಉಪ ಸಮಿತಿ ರಚಿಸಲು ಸರ್ಕಾರ ಆದೇಶದತ್ತಪೀಠಕ್ಕೆ ಅರ್ಚಕರ ನೇಮಕ: ಸಂಪುಟ ಉಪ ಸಮಿತಿ ರಚಿಸಲು ಸರ್ಕಾರ ಆದೇಶ

ಸರ್ಕಾರಿ ವಕೀಲರ ಮೆಮೋ ಪರಿಗಣಿಸಿದ ನ್ಯಾಯಪೀಠ, ಸರ್ಕಾರವು ಅದರ ಪ್ರತಿಯನ್ನು ಮೇಲ್ಮನವಿದಾರರಿಗೆ ಒದಗಿಸಬೇಕು. ಸರ್ಕಾರದ ನಿರ್ಧಾರಕ್ಕೆ ಅರ್ಜಿದಾರರಿಗೆ ಯಾವುದಾದರೂ ಆಕ್ಷೇಪಣೆಯಿದ್ದರೆ ಸಲ್ಲಿಸಬಹುದು ಎಂದು ಸೂಚಿಸಿ ಅರ್ಜಿ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು.

Datta Peeta row: Karnataka High Court ordered to maintain status quo

ಅಲ್ಲದೆ, ಸಮಿತಿಯ ನಿರ್ಣಯವು ಈ ಮೇಲ್ಮನವಿ ಕುರಿತ ವಿಭಾಗೀಯ ಪೀಠದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. ಒಂದೊಮ್ಮೆ ಈ ಅವಧಿಯಲ್ಲಿ ಸರ್ಕಾರವು ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಾನದಲ್ಲಿ ಯಾವುದೇ ಮಾರ್ಪಾಡು ಮಾಡಿದರೆ, ಆ ಕುರಿತು ಪ್ರಶ್ನಿಸಿ ಸೂಕ್ತ ಅರ್ಜಿ ಸಲ್ಲಿಸಲು ಪಕ್ಷಗಾರರಿಗೆ ಅವಕಾಶವಿದೆ ಎಂದು ತಿಳಿಸಿ 2022ರ ಮೇ 31ರಂದು ಹೊರಡಿಸಿರುವ ಆದೇಶವು ಸೆ.5ರವರೆಗೆ ಮುಂದುವರಿಯುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ವರದಿ ಅನುಮೋದನೆ: ಸರ್ಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಮೆಮೋ ಸಲ್ಲಿಸಿ, 2021ರ ಸೆ.28ರ ಹೈಕೋರ್ಟ್ ಏಕಸದಸ್ಯಪೀಠದ ಆದೇಶದಂತೆ ಸರ್ಕಾರ ರಚಿಸಿದ್ದ ಸಚಿವ ಸಂಪುಟ ಉಪ ಸಮಿತಿಯನ್ನು ಪ್ರಕರಣವನ್ನು ಮರು ಪರಿಶೀಲನೆ ನಡೆಸಿ 2022ರ ಜೂ.30ರಂದು ವರದಿ ಸಲ್ಲಿಸಿತ್ತು. ವರದಿಯಲ್ಲಿ 10 ಶಿಫಾರಸು ಮಾಡಲಾಗಿದ್ದು, ಅದನ್ನು ಸಚಿವ ಸಂಪುಟ ಅನುಮೋದಿಸಿದೆ ಎಂದರು.

Datta Peeta row:

ಅಲ್ಲದೆ, ಸಚಿವ ಸಂಪುಟ ಉಪ ಸಮಿತಿಯ ವರದಿ ಆಧರಿಸಿ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಸಂಪ್ರದಾಯಗಳದಂತೆ ಪೂಜಾ ವಿಧಿ ವಿಧಾನ ನೆರವೇರಿಸುವುದಕ್ಕೆ ಅವಕಾಶ ಕಲ್ಪಿಸಲು 2022ರ ಜು.1ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಮತ್ತು ಅರ್ಚಕರನ್ನು ನೇಮಿಸಲು 2022 ಜು.19ರಂದು ಆದೇಶಿಸಲಾಗಿದೆ. ಹಾಗೆಯೇ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನಿಸಿ ಆ.13ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದರು.


ಪ್ರಕರಣದ ಹಿನ್ನೆಲೆ: ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ 2018ರಲ್ಲಿ ಆದೇಶಿಸಿತ್ತು. ಅದನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯಪೀಠ, ಪ್ರಕರಣವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ಎಂದು 2021ರ ಸೆ.28ರಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿದ್ದೀನ್ ಮೇಲ್ಮನವಿ ಸಲ್ಲಿಸಿದ್ದಾರೆ.

English summary
Datta Peeta row: Karnataka High Court ordered to maintain status quo in regard to daily rituals
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X