ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಚಿಕ್ಕಮಗಳೂರು ಮಳೆ: ಮುನ್ನೆಚ್ಚರಿಕೆ ಕ್ರಮವಾಗಿ 4 ದಿನ ಶಾಲೆಗಳಿಗೆ ರಜೆ ಘೋಷಣೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 5: ಮಲೆನಾಡಿನಲ್ಲಿ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ. ಸತತ ಎರಡು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಹೆಚ್ಚಾಗಿ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮುನ್ನಚ್ಚೆರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ 4 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಜಿಲ್ಲಾಡಳಿತ ಕಾರ್ಯಾಲಯ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯಲ್ಲಿ ತೀವ್ರವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಜುಲೈ 4 ರಿಂದ ಜುಲೈ 9ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಉತ್ತರಕನ್ನಡದಲ್ಲಿ ಮಳೆ ಆರ್ಭಟ: ಜು.6ರಂದು ಶಾಲಾ-ಕಾಲೇಜುಗಳಿಗೆ ರಜೆಉತ್ತರಕನ್ನಡದಲ್ಲಿ ಮಳೆ ಆರ್ಭಟ: ಜು.6ರಂದು ಶಾಲಾ-ಕಾಲೇಜುಗಳಿಗೆ ರಜೆ

ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ ಆಂಬಳೆ ಹಾಗೂ ಲಕ್ನಾ ಹೋಬಲಿ ಹೊರತಪಡಿಸಿ ಉಳಿದ ಭಾಗ, ಮೂಡಿಗೆರೆ, ಕೊಪ್ಪ, ಶೃಂಗೇರಿ,ಕಳಸ ಹಾಗೂ ಎನ್ಆರ್‌ ಪುರ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜೆಗಳ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಮುಂಬರುವ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಳ್ಳಲು ಸೂಚಿಸಲಾಗಿದೆ.

Chikkamagaluru DC Ramesh announced 4 days holiday for schools amid heavy Rain

ಸೋಮವಾರ ಹೊಸಪೇಟೆಯಲ್ಲಿ ಶಾಲೆಯಿಂದ ಮನೆಗೆ ಮರುಳುವಾಗ ಕೆಸರಾಗಿದೆ ಎಂದು ಕಾಲು ತೊಳೆಯಲು ಹಳ್ಳಕ್ಕೆ ಇಳಿದಿದ್ದ ಸುಪ್ರಿತಾ ಎಂಬ 7 ವರ್ಷದ ಮಗು ನೀರಿನಲ್ಲಿ ಕೊಚ್ಚಿ ಹೋದ ನಂತರ ಜಿಲ್ಲಾಡಳಿತ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಕೆಎನ್‌ ರಮೇಶ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Chikkamagaluru DC Ramesh announced 4 days holiday for schools amid heavy Rain

ಇನ್ನು ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕಿಗಾಗಿ ಅಗ್ನಿ ಶಾಮಕ ಸಿಬ್ಬಂದಿ ಅಗ್ನಿಶಾಮಕ ಸಿಬ್ಬಂದಿ ಬೋಟ್‌ ಮತ್ತು ಹಗ್ಗಗಳ ಸಹಾಯದಿಂದ ಹಳ್ಳಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೂ ಎರಡನೇ ದಿನವೂ ಕೂಡ 36 ಸಿಬ್ಬಂದಿ ಹುಡಕಾಟ ನಡೆಸಿದರೂ ಬಾಲಕಿ ಪತ್ತೆಯಾಗದಿರುವುದು ದೊಡ್ಡ ತಲೆನೋವು ತಂದಿದೆ.

English summary
Following heavy rainfall, Chikkamagaluru deputy commissioner Ramesh has declared 4 days holiday for primary and high schools
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X