ಪ್ರವಾಸಿಗರ ಗಮನಕ್ಕೆ; ಚಿಕ್ಕಮಗಳೂರು ಈ ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು, ಡಿಸೆಂಬರ್ 14; ವಾರಾಂತ್ಯ ಮತ್ತು ಕ್ರಿಸ್‌ಮಸ್ ರಜೆ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಮಹತ್ವದ ಮಾಹಿತಿಯೊಂದಿದೆ. ಡಿಸೆಂಬರ್ 22 ರಿಂದ 27ರ ತನಕ ಕಾಫಿನಾಡಿನ ಕೆಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾಡಳಿತ ಈ ಕುರಿತು ಆದೇಶ ಹೊರಡಿಸಿದೆ. ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಿರಲಿದೆ.

December 24 To 26 Tourist Entry Banned For Chikkamagaluru Tourist Spot

ಡಿಸೆಂಬರ್ 22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಡಿಸೆಂಬರ್ 24, 25 ಮತ್ತು 26ರಂದು ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಡಿಸೆಂಬರ್ 26ರಂದು 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರವಾಸಕ್ಕೆ ನಿರ್ಬಂಧ ಹೇರಲಾಗಿದೆ. ಜಿಲ್ಲಾಡಳಿತದ ಈ ಆದೇಶದಿಂದ ವಾರಾಂತ್ಯ ಮತ್ತು ಕ್ರಿಸ್‌ಮಸ್ ರಜೆಯ ಸಂದರ್ಭದಲ್ಲಿ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಜನರು ಭೇಟಿ ನೀಡುವಂತಿಲ್ಲ.

2023ನೇ ಸಾಲಿನ ದತ್ತಜಯಂತಿ ಕಾರ್ಯಕ್ರಮ ಡಿಸೆಂಬರ್ 17ರಿಂದ 26ರವರೆಗೆ ನಡೆಯಲಿದೆ. ದತ್ತಜಯಂತಿಗಾಗಿ ಆಗಮಿಸುವ ಭಕ್ತರು, ಪ್ರವಾಸಿಗರ ವಾಹನಗಳಿಂದ ಉಂಟಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಜಿಲ್ಲಾಡಳಿತದ ಆದೇಶ; ಚಿಕ್ಕಮಗಳೂರು ತಾಲ್ಲೂಕು, ಐ.ಡಿ. ಪೀಠ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ದಿನಾಂಕ 24/12/2023 ರಿಂದ 26/12/2023 ರವರೆಗೆ 'ದತ್ತಜಯಂತಿ' ಕಾರ್ಯಕ್ರಮ ನಡೆಯಲಿದ್ದು, ಸದರಿ ಕಾರ್ಯಕ್ರಮದ ದಿನಗಳಲ್ಲಿ ಈ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಾಲಾಧಾರಿ ಭಕ್ತಾಧಿಗಳು ವಾಹನಗಳ ಮುಖಾಂತರ ಆಗಮಿಸುತ್ತಾರೆ.

ಐ.ಡಿ. ಪೀಠಕ್ಕೆ ತೆರಳುವ ರಸ್ತೆಯು ತುಂಬಾ ಕಿರಿದಾಗಿದ್ದು ವಾಹನ ದಟ್ಟಣೆ ಹಾಗೂ ಹೆಚ್ಚಿನ ಜನ ಸಂದಣಿಯಾಗಿ ಅನಾನುಕೂಲವಾಗುವ ಸಂಭವವಿರುತ್ತದೆ. ಆದ್ದರಿಂದ ದಿನಾಂಕ 22/12/2023 ರಿಂದ 27/12/2023 ರವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಐ. ಡಿ. ಪೀಠ, ಗಾಳಿಕೆರೆ ಮತ್ತು ಮಾಣಿಕ್ಯಧಾರಾ ಪ್ರದೇಶಗಳಿಗೆ ಸಾವಜನಿಕರು/ ಪ್ರವಾಸಿಗರು ಪ್ರವಾಸ ಕೈಗೊಳ್ಳುವುದನ್ನು ತಾತ್ಕಾಲಿಕವಾಗಿ ಮುಂದೂಡಲು ಪ್ರವಾಸಿಗರಲ್ಲಿ ಹಾಗೂ ಸಾರ್ವಜನಿಕರಲ್ಲಿ ಜಿಲ್ಲಾಡಳಿತವು ಮನವಿ ಮಾಡಿದೆ.

ಡಿಸೆಂಬರ್ 23 ಶನಿವಾರ, ಡಿಸೆಂಬರ್ 24 ಭಾನುವಾರ, ಡಿಸೆಂಬರ್ 25ರ ಸೋಮವಾರ ಕ್ರಿಸ್‌ಮಸ್ ರಜೆ ಇದೆ. ಸರಣಿ ರಜೆಗಳು ಮತ್ತು ವಾರಾಂತ್ಯವಾದ ಕಾರಣ ಪ್ರವಾಸ ಹೋಗುವವರ ಸಂಖ್ಯೆ ಹೆಚ್ಚಿರುತ್ತದೆ. ಬಹಳಷ್ಟು ಜನರು ಚಿಕ್ಕಮಗಳೂರು ಪ್ರವಾಸ ಕೈಗೊಳ್ಳುವ ಆಲೋಚನೆಯಲ್ಲಿದ್ದರು. ಆದರೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+