BPL ಕಾರ್ಡುದಾರರ ಖಾತೆಗೆ ಹಣ ಹಾಕಿ, ಅವರೇ ಅಕ್ಕಿ ಕೊಂಡುಕೊಳ್ಳುತ್ತಾರೆ: ಸಿದ್ದರಾಮಯ್ಯಗೆ ಸಿ.ಟಿ.ರವಿ ಟಾಂಗ್‌

ಕೇಂದ್ರದ ಒಪ್ಪಿಗೆ ಆಧಾರದಲ್ಲಿ ನಾವು ಜುಲೈ 1ರಿಂದ 10 ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಬಳಿಕ ಕೇಂದ್ರ ಸರ್ಕಾರ ಉಲ್ಟಾ ಹೊಡೆಯುತ್ತಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇದಕ್ಕೆ ಇಂದು ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಸುಳ್ಳುರಾಮಯ್ಯ ಅಲ್ಲಾ ಅನ್ನುವುದಾದರೆ ಎಫ್‌ಸಿಐ ಕಮಿಟ್ಮೆಂಟ್ ಲೆಟರ್ ತೋರಿಸಲಿ ಎಂದು ಸವಾಲು ಹಾಕಿದರು. ಹಾಗೆಯೇ ಸುಮ್ಮನೆ ಆರೋಪ ಮಾಡುವುದನ್ನು ಬಿಟ್ಟು ಜನರಿಗೆ ಹಣ ಕೊಡಿ, ಅಕ್ಕಿ ತೆಗೆದುಕೊಳ್ಳುತ್ತಾರೆ ಎಂದರು.

ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಅಕ್ಕಿ ಕಳಿಸುತ್ತೇವೆ ನಿಮ್ಮ ಹೆಸರು ಹಾಕಿಕೊಂಡು ಕೊಡಿ ಅಂತಾ ಕೇಂದ್ರದಿಂದ ಲೆಟರ್ ಕಳಿಸಿಲ್ಲ. ಹಾಗಾದರೆ ಸಿಎಂ ಸಿದ್ದರಾಮಯ್ಯ ಕಮಿಟ್ಮೆಂಟ್ ಲೆಟರ್ ಎಲ್ಲಿದೆ ಎಂದು ತೋರಿಸಲಿ. ಎಫ್.ಸಿ.ಐ. ನಿಮಗೆ ಅಗತ್ಯವಿರುವ ಅಕ್ಕಿಯನ್ನು ಕಳಿಸುತ್ತೇವೆ ಎಂದು ಹೇಳಿದ್ದಾರಾ?. ಆದರೆ ಲೆಟರ್ ತೋರಿಸಿ, ತನ್ನ ಕೈನಲ್ಲಿ ಆಗದಿರುವುದಕ್ಕೆ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಈಗಲೇ ಶುರು ಮಾಡಿದ್ದೀರ ಎಂದು ವಾಗ್ದಾಳಿ ನಡೆಸಿದರು.

Deposit money to BPL card holders account says ct ravi to Siddaramaiah

ನಾನು ಸಿದ್ದರಾಮಯ್ಯ ಅವರು ನಾಲ್ಕೈದು ತಿಂಗಳ ಬಳಿಕ ಆರೋಪ ಮಾಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಆರೋಪ ಮಾಡುವುದನ್ನು ಈಗಲೇ ಶುರು ಮಾಡಿದ್ದಾರೆ. ಜುಲೈ 1ರಿಂದ ಅಕ್ಕಿ ಉಚಿತ ಎಂದು ಭಾಷಣ ಮಾಡಿ, ಈಗ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದೀರ. ನೀವು ಎಲ್ಲಾ ಬಿ.ಪಿ.ಎಲ್. ಕಾರ್ಡುದಾರರ ಖಾತೆಗೆ ಹಣ ಹಾಕಿ, ಅವರೇ ಅಕ್ಕಿ ಕೊಂಡುಕೊಳ್ಳುತ್ತಾರೆ ಎಂದು ತಿರುಗೇಟು ನೀಡಿದರು.

ಆಕಾಶವೇನು ಕಳಚಿ ಬಿದ್ದಿಲ್ಲ, ಹಣ ಕೊಟ್ಟರೆ ಅಕ್ಕಿ ಸಿಗುತ್ತದೆ. ಮೊದಲು ಹಣ ಹಾಕಿ ಆಮೇಲೆ ಮಾತಾಡಿ. ಹಾಗೆಯೇ ಕೊಟ್ಟರೆ ನಾನು ಕೊಟ್ಟೆ ಅನ್ನೋದು, ಕೊಡದಿದ್ದರೆ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಇವರ ಕೆಲಸ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+