ಚಿಕ್ಕಮಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ದಿನೇಶ್ ಗುಂಡೂರಾವ್ ಭೇಟಿ
ಚಿಕ್ಕಮಗಳೂರು, ಆಗಸ್ಟ್ 17: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಚಿಕ್ಕಮಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರು.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಮಳೆಯಿಂದ ಹಾನಿಗೊಳಗಾದ ಜಾಗಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರ ಜೊತೆ ಮಾಜಿ ಸಚಿವೆ ಮೋಟಮ್ಮ, ಬಿ.ಎಲ್. ಶಂಕರ್ ಅವರು ಕೂಡ ಇದ್ದರು.

ಇದೇ ಸಮಯದಲ್ಲಿ ಪರಿಹಾರ ಕೇಂದ್ರಗಳಿಗೂ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಗುಂಡೂರಾವ್ ಅವರ ಬಳಿ ಸಂತ್ರಸ್ತರು ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು. ಈಚೆಗಷ್ಟೆ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ನೆರವಿಗಾಗಿ ಕೆಪಿಸಿಸಿಯಿಂದ ಎರಡು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದರು.












Click it and Unblock the Notifications