ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಬಿ ಹರಿಯುತ್ತಿದೆ ಕುಮಾರಧಾರಾ; ಕುಕ್ಕೆ ಸುಬ್ರಹ್ಮಣ್ಯದಲ್ಲಿ ತೀರ್ಥ ಸ್ನಾನ ಅಸಾಧ್ಯ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಆಗಸ್ಟ್ 6: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತುರ್ತು ಎಚ್ಚರಿಕೆ ಸಂದೇಶ ರವಾನಿಸಿದೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಳೆ ಸುರಿಯುತ್ತಿದ್ದು, ಮಂಗಳವಾರ ಮುಂಜಾನೆ ಮಳೆ ಮುಂದುವರಿದಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ, ಕುಮಾರಧಾರಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಸುಳ್ಯ, ಸುಬ್ರಹ್ಮಣ್ಯ, ಕುಲ್ಕುಂದ, ಕುದುರೆಮಜಲು, ನೂಜಿಲ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ.

Due To Heavy Rain; Flood Situation In Shri Kshethra Kukke Subrahmanya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆಗೊಂಡಿದೆ. ಕಳೆದೆರಡು ದಿನಗಳಿಂದ ಈ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ವರ್ಷ ಮೊದಲ ಬಾರಿಗೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರಿಗೆ ಸ್ನಾನಘಟ್ಟದಲ್ಲಿ ತೀರ್ಥ ಸ್ನಾನ ಮಾಡಲು ಸಾಧ್ಯವಾಗದ ಪರಿಸ್ಥಿತಿ ಸೃಷ್ಟಿಯಾಗಿದೆ.

Due To Heavy Rain; Flood Situation In Shri Kshethra Kukke Subrahmanya

ಸ್ನಾನಘಟ್ಟದ ಮೇಲೆ ಹರಿಯುತ್ತಿರುವ ನೀರಿನಲ್ಲೇ ಭಕ್ತಾದಿಗಳು ತೀರ್ಥಸ್ನಾನವನ್ನು ಮಾಡುತ್ತಿದ್ದಾರೆ. ಉಪ್ಪಿನಂಗಡಿ- ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಹೊಸ್ಮಠ ಸೇತುವೆಯ ಮೇಲೂ ನದಿ ನೀರು ಹರಿಯುತ್ತಿದೆ. ಈ ಪರಿಣಾಮ ಸೇತುವೆ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಿದೆ.

English summary
Due to heavy rain flood situation in Karnataka's famous pilgrimage Shri Kshethra Kukke Subrahmanya. Here is the complete detail
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X