ಚಿಕ್ಕಮಗಳೂರಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಿಕ್ಷಣ ಸಚಿವ

ಚಿಕ್ಕಮಗಳೂರು, ಆಗಸ್ಟ್‌ 04: ಇಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್​, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ಎರಡು ದಿನಗಳ ಹಿಂದೆ ಇಲ್ಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆಡಿಯೋ ಮೂಲಕ ಆನ್ ಲೈನ್ ಶಿಕ್ಷಣದ ಬಗ್ಗೆ ಅಳಲು ತೋಡಿಕೊಂಡಿದ್ದ. ಇಲ್ಲಿನ ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಸಮಸ್ಯೆಗಳ ಕುರಿತು ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದ. ಈ ಆಡಿಯೋಗೆ ಸ್ಪಂದಿಸಿದ ಸಚಿವ ಸುರೇಶ್ ಕುಮಾರ್ ಇಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿದ್ದರು.

ಇಲ್ಲಿನ ವಿದ್ಯಾರ್ಥಿಗಳೊಂದಿಗೆ ಕುಳಿತು ಮಾತನಾಡಿದರು. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಸಚಿವರ ಮುಂದೆ ವಿದ್ಯಾರ್ಥಿಗಳೂ ತಮ್ಮ ಸಮಸ್ಯೆಗಳು, ಅಗತ್ಯ ಸೌಲಭ್ಯಗಳ ಕುರಿತು ಮಾತನಾಡಿದರು. ಶೀಘ್ರವಾಗಿ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.

 Education Minister Visited Chikkamagaluru And Interacted With Students

ಇದೇ ಸಂದರ್ಭ ಜಿಲ್ಲೆಯ ಭೈರೇದೇವರು, ಕಿತ್ಲೇಗುಳಿ,ಹೊರಳೆ, ಮೆಣಸಿನ ಹಾಡ್ಯ ಗ್ರಾಮಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+