ಚಿಕ್ಕಮಗಳೂರು: ಈದ್ಗಾ ಮೈದಾನದಲ್ಲಿ ಚುನಾವಣಾ ಪ್ರಚಾರ; ಮುಜುಗರಕ್ಕೀಡಾದ ಕಾಂಗ್ರೆಸ್ ಅಭ್ಯರ್ಥಿ
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮತ್ತು ಪರಿಶೀಲನೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಸದ್ಯ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಪ್ರಚಾರ ಕಾರ್ಯ ಚುರುಕಾಗಿದೆ. ಈ ನಡುವೆ ಎದುರಾಳಿಗಳನ್ನು ಸೋಲಿಸಲು ಅಭ್ಯರ್ಥಿಗಳು ನಾನಾ ತಂತ್ರಗಳ ಮೊರೆ ಹೋಗುತ್ತಿದ್ದಾರೆ.
ಇದೇ ವೇಳೆ ಚಿಕ್ಕಮಗಳೂರಿನಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವಾರಿಗೆ ಶುಭಾಶಯ ಕೋರಲು ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ. ತಮ್ಮಯ್ಯ ಈದ್ಗಾ ಮೈದಾನಕ್ಕೆ ತೆರಳಿದ್ದರು. ಆಗ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಾಗ್ವಾದ ನಡೆದ ಪ್ರಸಂಗ ನಡೆಯಿತು.

ರಂಜಾನ್ ಹಬ್ಬದ ಹಿನ್ನೆಲೆ ಚಿಕ್ಕಮಗಳೂರಿನ ಕೆಇಬಿ ಸರ್ಕಲ್‌ನಲ್ಲಿರುವ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸಲು ಜಮಾಯಿಸಿದ್ದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ. ತಮ್ಮಯ್ಯ ಮುಸ್ಲಿಂ ಸಮುದಾಯದವರಿಗೆ ಹಬ್ಬದ ಶುಭಾಶಯ ತಿಳಿಸಲು ಬಂದ ವೇಳೆ ಒಂದು ಗುಂಪು ವಿರೋಧ ವ್ಯಕ್ತಪಡಿಸಿತು.
ಮುಸ್ಲಿಮರ ಸಮಾಧಾನಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಮುಂದಾದರು. ಆಗ ಸ್ಥಳದಿಂದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ. ತಮ್ಮಯ್ಯ ಕಾಲ್ಕಿತ್ತರು. ಅಲ್ಪಸಂಖ್ಯಾತರ ಅಸಮಾಧಾನದಿಂದ ಕಾಂಗ್ರೆಸ್ ಅಭ್ಯರ್ಥಿ ಮುಜುಗರಕ್ಕೀಡಾಗಬೇಕಾಯಿತು.

ಒಂದು ಗುಂಪು ಅಸಮಾಧಾನ ವ್ಯಕ್ತಪಡಿಸಿದ ನಂತರ, ಅಲ್ಲಿದ್ದ ಮತ್ತೊಂದು ಗುಂಪಿನ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸಮುದಾಯದ ಕೆಲ ಮುಖಂಡರು ಪರಿಸ್ಥಿತಿಯನ್ನು ನಿಯಂತ್ರಿಸಲು ಯಶಸ್ವಿಯಾದರು.
ಪ್ರಾರ್ಥನೆ ಸಲ್ಲಿಸಿ ಈದ್ಗಾ ಮೈದಾನದಿಂದ ಹೊರ ಬಂದ ಕೂಡಲೇ ಮುಸ್ಲಿಂ ಸಮುದಾಯದ ದೊಡ್ಡ ಗುಂಪೊಂದು ಎಚ್.ಡಿ. ತಮ್ಮಯ್ಯ ಅವರನ್ನು ಹೆಗಲ ಮೇಲೆ ಹೊತ್ತು ಜೈಕಾರ ಹಾಕಿ ಸಂಭ್ರಮಿಸಿದರು. ಈ ವೇಳೆ ಮುಸ್ಲಿಂ ಮುಖಂಡರು ಮತ್ತು ಕಾಂಗ್ರೆಸ್ ನಾಯಕರು ಇದ್ದರು.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಎಚ್.ಡಿ. ತಮ್ಮಯ್ಯ ನಡುವೆ ನೇರಾನೇರ ಹಣಾಹಣಿ ಏರ್ಪಟ್ಟಿದೆ. ಕೆಲವು ತಿಂಗಳುಗಳ ಹಿಂದೆ ಎಚ್.ಡಿ. ತಮ್ಮಯ್ಯ ಬಿಜೆಪಿಯಲ್ಲಿದ್ದರು. ಸಿ.ಟಿ. ರವಿ ವಿರುದ್ಧ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.
ಚಿಕ್ಕಮಗಳೂರಿನ ಸ್ಥಳೀಯ ಕಾರ್ಯಕರ್ತರ ವಿರೋಧದ ನಡುವೆಯೂ ಕಾಂಗ್ರೆಸ್ ಪಕ್ಷ ಎಚ್.ಡಿ. ತಮ್ಮಯ್ಯ ಅವರಿಗೆ ಟಿಕೆಟ್ ನೀಡಿದೆ. ಚುನಾವಣೆಯಲ್ಲಿ ಮಾಜಿ ಆಪ್ತರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನಾವಾಗಿದೆ.

ಅಧಿಕಾರಕ್ಕಾಗಿ ಶೃಂಗೇರಿ ಶಾರದಾಂಬೆ ಮೊರೆ ಹೋದ ಡಿಕೆಶಿ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠದ ಯಾಗ ಶಾಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕುಟುಂಬ ಭಾನುವಾರ 10ಕ್ಕೂ ಹೆಚ್ಚು ಪುರೋಹಿತರಿಂದ ಯಾಗ ನಡೆಯಲಿದೆ.
ಅಧಿಕಾರಕ್ಕಾಗಿ ರಾಜ-ಮಹಾರಾಜರು ವಿಶೇಷ ಚಂಡಿಕಾ ಯಾಗ ನಡೆಸುತ್ತಿದ್ದರು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಅಭ್ಯರ್ಥಿ ರೇಸ್‌ನಲ್ಲಿ ಡಿ.ಕೆ. ಶಿವಕುಮಾರ್ ಸಹ ಇದ್ದಾರೆ. ಹೀಗಾಗಿ ಶೃಂಗೇರಿ ಮಠದಲ್ಲಿನ ಹೋಮ ಮಹತ್ವ ಪಡೆದುಕೊಂಡಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬ 2018ರಲ್ಲಿ 11 ದಿನ ಅತಿರುದ್ರ ಮಹಾಯಾಗ ನಡೆಸಿತ್ತು. ಇದೀಗ ಡಿಕೆಶಿ ಕುಟುಂಬದಿಂದ ಶೃಂಗೇರಿ ಪೀಠದಲ್ಲಿ ಚಂಡಿಕಾಯಾಗ ನಡೆಯುತ್ತಿದೆ.












Click it and Unblock the Notifications