ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ಳಂಬೆಳಿಗ್ಗೆ ಮೂಡಿಗೆರೆಯಲ್ಲಿ ರಾಜಾರೋಷವಾಗಿ ಓಡಾಡಿ ಆತಂಕ ತಂದ ಆನೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಅಕ್ಟೋಬರ್ 31: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮತ್ತೆ ಕಾಡಾನೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿವೆ.

ಕೆಸರಿನ ಹೊಂಡದಲ್ಲಿ ಬಿದ್ದಿದ್ದ ಕಾಡಾನೆಯನ್ನು ಎತ್ತಿದ ಗ್ರಾಮಸ್ಥರು: ವೈರಲ್ ವಿಡಿಯೋಕೆಸರಿನ ಹೊಂಡದಲ್ಲಿ ಬಿದ್ದಿದ್ದ ಕಾಡಾನೆಯನ್ನು ಎತ್ತಿದ ಗ್ರಾಮಸ್ಥರು: ವೈರಲ್ ವಿಡಿಯೋ

ಇಂದು ಬೆಳ್ಳಂಬೆಳಿಗ್ಗೆ ಒಂಟಿ ಸಲಗವೊಂದು ಮೂಡಿಗೆರೆಯ ಕುಂಬರಡಿ ಗ್ರಾಮದಲ್ಲಿ ರಾಜಾರೋಷವಾಗಿ ಓಡಾಟ ನಡೆಸಿದೆ. ಮೂರು ದಿನಗಳ ಹಿಂದೆಯಷ್ಟೇ ಅರಣ್ಯ ಇಲಾಖೆ ಅಧಿಕಾರಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ನಡೆದಿತ್ತು. ಮೂಡಿಗೆರೆ ಉಪವಲಯ ಅರಣ್ಯಾಧಿಕಾರಿ ಚೇತನ್ ಎಂಬುವವರು ದಾಳಿಯಿಂದ ಪಾರಾಗಿದ್ದರು, ಅವರ ಕಾಲಿಗೆ ಗಂಭೀರವಾಗಿ ಪೆಟ್ಟಾಗಿತ್ತು.

Elephant Roaming In Mudigere Brings Fear In People

ಇದೀಗ ಮತ್ತೆ ಆನೆಗಳು ಸುಳಿದಾಡುತ್ತಿರುವುದು ಆತಂಕವನ್ನು ಹೆಚ್ಚಿಸಿವೆ. ಕಡಿದಾದ ತೋಟಗಳ ನಡುವೆ ಆನೆಗಳು ಓಡಾಡುತ್ತಿವೆ. ಕಳೆದ ಕೆಲವು ದಿನಗಳಿಂದ ಕುಂಬರಡಿ, ಗೌಡಳ್ಳಿ, ಬೈರಾಪುರ ಗ್ರಾಮಗಳಲ್ಲಿ ಕಾಡಾನೆಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದವು. ಈ ರೀತಿ ಆನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಹೊರಗೆ ಬರಲೂ ಹೆದರುವಂತಾಗಿದೆ.

English summary
The elephant appeared in mudigere brings fear in the people
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X