ಶಿವಮೊಗ್ಗ ಲೋಕಸಭೆ ಉಪಚುನಾವಣೆ: ಟಿಕೆಟ್ ಗೊಂದಲಕ್ಕೆ ತೆರೆ ಎಳೆದ ಈಶ್ವರ್ ಖಂಡ್ರೆ
ಚಿಕ್ಕಮಗಳೂರು, ಅಕ್ಟೋಬರ್.14: ಅಂತೂ ಶಿವಮೊಗ್ಗ ಲೋಕಸಭೆ ಉಪಚುನಾವಣೆ ಟಿಕೆಟ್ ಗೊಂದಲ ವಿಚಾರಕ್ಕೆ ಭಾಗಶಃ ತೆರೆಬಿದ್ದಿದೆ. ಹೌದು, ಇದೀಗ ಟಿಕೆಟ್ ಗೊಂದಲಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತೆರೆ ಎಳೆದಿದ್ದಾರೆ.
ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದ್ದು, ವರಿಷ್ಟರ ಜೊತೆ ಚರ್ಚಿಸಿ ಇಂದು ಭಾನುವಾರ (ಅ.14) ಸಂಜೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ.
ಈ ವಿಚಾರವನ್ನು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿಎಸ್ ವೈ ಪುತ್ರ ಬಿ.ವೈ ರಾಘವೇಂದ್ರ ಸ್ಪರ್ಧಿಸುವುದು ಖಚಿತವಾಗಿದೆ.

ಆದರೆ, ಕಾಂಗ್ರೆಸ್ ಪಕ್ಷದಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಅಂತಿಮವಾಗಿರಲಿಲ್ಲ. ಹೀಗಾಗಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಕುತೂಹಲವಿತ್ತು. ಆದರೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವ ಸಾಧ್ಯತೆ ಇರುವುದರಿಂದ ಸದ್ಯದ ಗೊಂದಲಕ್ಕೆ ತಡೆಯೊಡ್ಡಿದಂತಾಗಿದೆ.












Click it and Unblock the Notifications