ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೀಪಾವಳಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿ.ಟಿ ರವಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ನವೆಂಬರ್ 14: ಬಹುತೇಕ ದೀಪಾವಳಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿದ್ದು, ಬಿಜೆಪಿ ವರಿಷ್ಠರು ಬಿಹಾರದ ವಿದ್ಯಮಾನಗಳಲ್ಲಿ ಇರುವುದರಿಂದ ಮುಖ್ಯಮಂತ್ರಿಗಳಿಗೆ ವರಿಷ್ಠರ ಭೇಟಿ ಸಾಧ್ಯವಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ವೆ

ಹಬ್ಬದ ಬಳಿಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಹೋಗಿ ಸಮಾಲೋಚನೆ ನಡೆಸಿ ವಿಸ್ತರಣೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ ರವಿ ತಿಳಿಸಿದರು.

ನಾನು ಬಕೆಟ್ ಹಿಡಿಯುವ ರಾಜಕಾರಣಿ ಅಲ್ಲ; ಸಿ.ಟಿ.ರವಿನಾನು ಬಕೆಟ್ ಹಿಡಿಯುವ ರಾಜಕಾರಣಿ ಅಲ್ಲ; ಸಿ.ಟಿ.ರವಿ

ಚಿಕ್ಕಮಗಳೂರು ತಾಲ್ಲೂಕಿನ ಬಿಂಡಿಗೆ ದೇವಿರಮ್ಮನ ಬೆಟ್ಟದಲ್ಲಿ ಮಾತನಾಡಿದ ಅವರು, ಸಿಎಂ ಮನದಲ್ಲಿ ಪುನರ್ ರಚನೆಯ ಯೋಜನೆ ಇದೆ. ಪುನರ್ ರಚನೆ ಅಥವಾ ವಿಸ್ತರಣೆಯೇ ಎಂಬುದು ವರಿಷ್ಠರ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ, ಜೊತೆಗೆ ಶೀಘ್ರದಲ್ಲೇ ಚಿಕ್ಕಮಗಳೂರಿಗೆ ಉಸ್ತುವಾರಿ ಸಚಿವರು ಬರುತ್ತಾರೆ ಎಂದರು.

Chikkamagaluru: Extension Of Cabinet After Deepavali Festival: CT Ravi

ಬಿಹಾರದಲ್ಲಿ ನಾಲ್ಕನೇ ಬಾರಿಗೆ ನಿತಿಶ್ ಕುಮಾರ್ ಸರ್ಕಾರ ಜನ ಮನ್ನಣೆ ಗಳಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಅವರು ಅದನ್ನು ಸಾಧಿಸಿದ್ದಾರೆ. ಪ್ರಧಾನಿ ಹಾಗೂ ನಿತೀಶ್ ಕುಮಾರ್ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರ ಬಂದಿದೆ. ಬಿಹಾರ ಜನರ ಕನಸನ್ನು ನನಸು ಮಾಡಲು ಶಕ್ತಿ ತುಂಬುವಂತಹ ಕೆಲಸವನ್ನು ಎನ್ ಡಿಎ ಮಾಡುತ್ತದೆ ಎಂದು ಹೇಳಿದರು.

ಮೂರು ರಾಜ್ಯಗಳ ಉಸ್ತುವಾರಿ ಕುರಿತಂತೆ ಮಾತನಾಡಿ, ಪಕ್ಷ ಕೊಡುವ ಜವಾಬ್ದಾರಿಗೆ ಜೀವ ತುಂಬುವ ಕೆಲಸ ಮಾಡುತ್ತೇನೆ. 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಸಂಭ್ರಮ ನೆಲೆಸಿದೆ.

Recommended Video

ದೀಪಾವಳಿ ಸಮಯದಲ್ಲಿ ಮೋದಿ ಮಾಡಿದ್ದಾದರೂ ಏನು? | Oneindia Kannada

ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಜಗತ್ತಿನ ಜನ ಸಂಭ್ರಮಿಸಿದ್ದಾರೆ. ಇದೊಂದು ಶುಭ ಸಂಕೇತ. ಆಯೋಧ್ಯೆಯಲ್ಲಿ ಮತ್ತೆ ವೈಭವ ಮರುಕಳಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

English summary
BJP national general secretary CT Ravi said the cabinet could be expanded after of the Deepavali festival.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X