ನೇಗಿಲಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು
ಚಿಕ್ಕಮಗಳೂರು, ಆಗಸ್ಟ್ 15: ಹೊಲಕ್ಕೆ ನೇಗಿಲು ತೆಗೆದುಕೊಂಡು ಹೋಗುತ್ತಿದ್ದ ಸಮಯ ನೇಗಿಲಿಗೆ, ತೂಗಾಡುತ್ತಿದ್ದ ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ಬಿಬಿಎಂಪಿ ಗುತ್ತಿಗೆರ ನೌಕರ ಸಾವು
ಚಂದ್ರಪ್ಪ ( 47) ಮೃತ ರೈತ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ತನ್ನ ತೋಟಕ್ಕೆ ರೈತ ನೇಗಿಲು ಹಿಡಿದುಕೊಂಡು ಹೋಗುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ.
ಘಟನೆಗೆ ಮೆಸ್ಕಾಂ ಸಿಬ್ಬಂದಿಯ ಬೇಜವಾಬ್ದಾರಿಯೇ ಕಾರಣ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ. ಕೆಳಗೆ ಜೋತು ಬಿದ್ದ ವಿದ್ಯುತ್ ತಂತಿಯನ್ನು ಮೇಲಕ್ಕೆ ಎತ್ತಲು ಎಷ್ಟು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ.
ಶಿಕಾರಿಪುರದಲ್ಲಿ ವಿದ್ಯುತ್ ತಂತಿ ತುಳಿದು ರೈತ ಸಾವು
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.