ಚಿಕ್ಕಮಗಳೂರಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ
ಚಿಕ್ಕಮಗಳೂರು, ಅಕ್ಟೋಬರ್, 07: ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ ನಡೆದಿದೆ.
ದೇವೀರಮ್ಮ (64) ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಕಡೂರಿನ ಗ್ರಾಮೀಣ ಕೂಟದಿಂದ ಫೈನಾನ್ಸ್ 78 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಅರ್ಥಿಕ ಸಂಕಷ್ಟದಿಂದ ಒಂದು ತಿಂಗಳಿನಿಂದ ಸಾಲದ ಕಂತನ್ನು ಮರುಪಾವತಿ ಮಾಡಿರಲಿಲ್ಲ. ಒಂದು ತಿಂಗಳಿನಿಂದ ಪ್ರತಿ ವಾರ ಫೈನಾನ್ಸ್ಗೆ ಸಾಲ ಮರುಪಾವತಿ ಮಾಡದ ಹಿನ್ನೆಲೆ ದೇವೀರಮ್ಮ ಅವರ ಮನೆ ಬಳಿ ಬಂದು ಕಿರುಕುಳ ನೀಡಿದ ಆರೋಪ ಫೈನಾನ್ಸ್ ಸಿಬ್ಬಂದಿ ವಿರುದ್ಧ ಕೇಳಿಬಂದಿದೆ.

ಉಳಿದ ಬಾಕಿ ಮೊತ್ತ ಕಟ್ಟುವಂತೆ ಒತ್ತಡ ಹೇರಿದ್ದಾರೆ. ಅಲ್ಲದೆ ಅವರ ಕಚೇರಿಗೆ ಮಹಿಳೆ ಕರೆಸಿ ಇಡೀ ದಿನ ಫೈನಾನ್ಸ್ ಕಚೇರಿಯಲ್ಲಿ ಹಣ ಕಟ್ಟುವಂತೆ ಒತ್ತಡ ಹೇರಿದ್ದಾರೆ. ಸಿಬ್ಬಂದಿ ಕಿರುಕುಳಕ್ಕೆ ಮನನೊಂದ ದೇವೀರಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಗ್ರಾಮಿಣ ಕೂಟ ಫೈನಾನ್ಸ್ ಸಿಬ್ಬಂದಿ ಶಂಕರ್ ನಾಯಕ್, ಉಷಾ, ರುಬೀನಾ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಇಂತಹ ಘಟನೆಗಳು ಇದೇ ಮೊದಲ ಬಾರಿ ಅಲ್ಲ. ಈಗಾಗಲೇ ಹಲವೆಡೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ನಡೆದಿರುವ ಉದಾಹರಣೆಗಳು ಇವೆ. ಆದ್ದರಿಂದ ಇಂತಹ ಘಟನೆಗಳು ಸಂಭವಿಸದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
(ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನಿಮಗೆ ಬೆಂಬಲ ಬೇಕಾದರೆ ಅಥವಾ ಯಾರೊಂದಿಗಾದರೂ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬೇಕಿದ್ದರೇ ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಸಹಾಯವಾಣಿಗಳು: ಆಸ್ರ: 022 2754 6669; ಸ್ನೇಹ ಇಂಡಿಯಾ ಫೌಂಡೇಶನ್: +914424640050 ಮತ್ತು ಸಂಜೀವಿನಿ: 011-24311918, ರೋಶ್ನಿ ಫೌಂಡೇಶನ್: ಸಂಪರ್ಕ: 040-66202001, 040-66202000, ಒಂದು ಜೀವನ: ಸಂಪರ್ಕ ಸಂಖ್ಯೆ: 78930 78930, SEVA: ಸಂಪರ್ಕ ಸಂಖ್ಯೆ: 09441778290 )












Click it and Unblock the Notifications