ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಹೆಣ್ಣು ಹುಲಿ ಮೃತ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಅಕ್ಟೋಬರ್ 28: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿಯ ತೇಗೂರು ಗುಡ್ಡದ ಬಳಿ ಹೆಣ್ಣು ಹುಲಿ ಮೃತಪಟ್ಟಿರುವುದು ಮಂಗಳವಾರ ಬೆಳಕಿಗೆ ಬಂದಿದೆ.

ಸುಮಾರು 5 ರಿಂದ 6 ವರ್ಷ ಪ್ರಾಯದ ಹೆಣ್ಣು ಹುಲಿ ಕಳೆದ ಮೂರು ದಿನಗಳ ಹಿಂದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಯಾವ ಕಾರಣದಿಂದ ಹುಲಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿಲ್ಲ.

ಚಿಕ್ಕಮಗಳೂರು: ಅಕ್ರಮವಾಗಿ ಹಸು-ಎಮ್ಮೆ ಸಾಗಾಟ ಮಾಡುತ್ತಿದ್ದವರ ಬಂಧನಚಿಕ್ಕಮಗಳೂರು: ಅಕ್ರಮವಾಗಿ ಹಸು-ಎಮ್ಮೆ ಸಾಗಾಟ ಮಾಡುತ್ತಿದ್ದವರ ಬಂಧನ

ಮರಣೋತ್ತರ ಪರೀಕ್ಷೆ ಬಳಿಕ ಹುಲಿಯ ಸಾವಿಗೆ ನಿಜವಾದ ಕಾರಣ ಏನೆಂದು ತಿಳಿದು ಬರಲಿದೆ. ಶಿವಮೊಗ್ಗದಿಂದ ವೈದ್ಯರು ಆಗಮಿಸಬೇಕಾಗಿರುವ ಹಿನ್ನೆಲೆಯಲ್ಲಿ ಮೃತ ಹುಲಿ ಮರಣೋತ್ತರ ಪರೀಕ್ಷೆ ಬುಧವಾರ ನಡೆಯಲಿದೆ ಎಂದು ಚಿಕ್ಕಮಗಳೂರು ವಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

 Chikkamagaluru: Female Tiger Died In Bhadra Sanctuary

ಆಕಸ್ಮಿಕವಾಗಿ ಸಾವನ್ನಪ್ಪಿರುವ ಹೆಣ್ಣು ಹುಲಿಯನ್ನ ನೋಡಲು ಸ್ಥಳೀಯ ಜನರು ಹಾಗೂ ಅರಣ್ಯ ಸಿಬ್ಬಂದಿಗಳು ಬಂದಿದ್ದರು. ಜನವಸತಿ ಇರುವ ಪ್ರದೇಶದಲ್ಲಿ ಹುಲಿ ಸಾವು ಭೀತಿಯನ್ನು ಹುಟ್ಟಿಸಿದೆ.

 Chikkamagaluru: Female Tiger Died In Bhadra Sanctuary

Recommended Video

Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

ಇತ್ತೀಚಿಗೆ ಮಂಗಳೂರು ಬಳಿಯ ಪಿಲಿಕುಳ ಜೈವಿಕ ಉದ್ಯಾನ ವನದ ಹಳೆ ತಲೆಮಾರಿನ ಹುಲಿ ವಿಕ್ರಂ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದನ್ನು ನೆನಪಿಸಿಕೊಳ್ಳಬಹುದು. ವಿಕ್ರಂ ಹುಲಿ ನಾಲ್ಕು ವರ್ಷವಿದ್ದಾಗ, 2003ರಲ್ಲಿ ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಿಂದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಗಿತ್ತು.

English summary
The died of a female tiger near Tegooru hill in Chikkamagaluru district has come to light on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X