Fengal Cyclone: ಚಿಕ್ಕಮಗಳೂರು ಪ್ರವಾಸ ಹೋಗುವವರು ಗಮನಿಸಿ

ಚಿಕ್ಕಮಗಳೂರು, ಡಿಸೆಂಬರ್ 03: ಕರ್ನಾಟಕದ ವಿವಿಧ ಜಿಲ್ಲೆಯಲ್ಲಿ 'ಫೆಂಗಲ್' ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್ 4ರ ತನಕ ಮುಳೆಯ ಮುನ್ಸೂಚನೆ ನೀಡಲಾಗಿದೆ. ಆದ್ದರಿಂದ ಪ್ರವಾಸವನ್ನು ಕೈಗೊಳ್ಳುವ ಜನರು ಮಳೆಯ ಬಗ್ಗೆ ಮಾಹಿತಿ ತಿಳಿದು ಸಂಚಾರ ನಡೆಸಬೇಕು ಎಂದು ಮನವಿ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆಗುವ ಸಾಧ್ಯತೆಯಿದ್ದು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಾರ್ಯಾಲಯ, ಚಿಕ್ಕಮಗಳೂರು ಪ್ರಕಟಣೆ ಮೂಲಕ ಜನರಿಗೆ ಎಚ್ಚರದಿಂದ ಇರುವಂತೆ ಮನವಿ ಮಾಡಿದೆ.

Fengal Cyclone Advisory Note For Chikkamagaluru Tourists

ಆರೆಂಜ್ ಅಲರ್ಟ್‌: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ 2 ದಿನಗಳು ದಿನಾಂಕ 03/12/2024ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ 04/12/2024 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಬೇಕಿದ್ದು, ಸಾರ್ವಜನಿಕರಿಗೆ ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ಕೆಲವು ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸುವುದು. ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ ಕಟ್ಟೆಗಳಿಗೆ ತೆರಳತಕ್ಕದ್ದಲ್ಲ.

ಮಳೆಯಿಂದಾಗಿ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರ ವಹಿಸುವುದು. ಈ ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ಮನವಿ ಮಾಡಲಾಗಿದ್ದು, ತುರ್ತು ಸಂದರ್ಭದಲ್ಲಿ ಕಂಟ್ರೋಲ್ ರೂಂ ಅನ್ನು ದೂರವಾಣಿ ಸಂಖ್ಯೆ 08262-238950 ಮೂಲಕ ಸಂಪರ್ಕಿಸಬಹುದು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಅರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೈಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ 03-12-2024 ರಂದು ರಜೆ ಘೋಷಿಸಲಾಗಿದೆ.

ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ, ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ ತೋಡುಗಳ ಮತ್ತು ವಿದ್ಯುತ್ ಕಂಬ/ ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+