• search
 • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂಕಷ್ಟದಲ್ಲಿದ್ದ ಗುರುಗಳಿಗೆ ಹಳೇ ವಿದ್ಯಾರ್ಥಿಗಳಿಂದ ಆರ್ಥಿಕ ಸಹಾಯ

By ಚಿಕ್ಕಮಗಳೂರು ಪ್ರತಿನಿಧಿ
|

ಚಿಕ್ಕಮಗಳೂರು, ಸೆಪ್ಟೆಂಬರ್ 6: ತಾವು ಓದಿ ಬೆಳೆದು, ಉನ್ನತ ಹುದ್ದೆಗೇರಿದ ವಿದ್ಯಾರ್ಥಿಗಳು ತಮ್ಮ ಗುರು ವೃಂದ ಸಂಕಷ್ಟದಲ್ಲಿದೆ ಎಂದು ತಿಳಿದು ಹಳೇ ವಿದ್ಯಾರ್ಥಿಗಳು ಶಿಕ್ಷಕರಿಗೆ ಚಿಕ್ಕಮಗಳೂರಿನಲ್ಲಿ ಆರ್ಥಿಕ ಸಹಾಯ ಮಾಡಿದ್ದಾರೆ.

   Namma Metro ಇಂದಿನಿಂದ ಪುನರಾರಂಭ, ಆದರೆ ಷರತ್ತುಗಳು ಅನ್ವಯ | Oneindia Kannada

   ಸೆಪ್ಟೆಂಬರ್ 5 ರಂದು ಶಿಕ್ಷಕ ದಿನಾಚರಣೆಯ ಅಂಗವಾಗಿ 20 ಶಿಕ್ಷಕರಿಗೆ ತಲಾ ಮೂರು ಸಾವಿರ ಬರುವಂತೆ 60 ಸಾವಿರ ರುಪಾಯಿ ಹಣ ನೀಡಿರುವ ಅಪರೂಪದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನಲ್ಲಿ ನಡೆದಿದೆ.

   ಗುರು ಪರಂಪರೆಗೆ ಹೊಸ ಭಾಷ್ಯ: ನಿವೃತ್ತರಾದ ನೆಚ್ಚಿನ ಶಿಕ್ಷಕನಿಗೆ ವಿಶಿಷ್ಟ ಗುರುದಕ್ಷಿಣೆ

   ಕಡೂರಿನ ಬ್ರೈಟ್ ಫ್ಯೂಚರ್ ಇಂಗ್ಲೀಷ್ ಶಾಲೆಯ ಹಳೇ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ. ಕೊರೊನಾ ವೈರಸ್ ಕಾಲದಲ್ಲಿ ಕಳೆದ ಐದಾರು ತಿಂಗಳಿಂದ ಖಾಸಗಿ ಶಾಲೆಯ ಶಿಕ್ಷಕರು ತೀವ್ರ ಸಂಕಷ್ಟದಲ್ಲಿದ್ದಾರೆ.

   ಶಾಲಾ ಆಡಳಿತ ಮಂಡಳಿ ಕೂಡ ಶಿಕ್ಷಕರಿಗೆ ಅರ್ಧ ಸಂಬಳ ನೀಡಿತ್ತು. ಹಾಗಾಗಿ, ಹಳೇ ವಿದ್ಯಾರ್ಥಿಗಳು ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ. ಈ ಶಾಲೆಯಲ್ಲಿ ಓದಿದ್ದ ವಿದ್ಯಾರ್ಥಿಗಳು ಅಮೆರಿಕಾ, ಜರ್ಮನಿಯಲ್ಲಿದ್ದಾರೆ. ಕೆಲವರು ವೈದ್ಯರು, ಎಂಜಿನಿಯರ್ ಸಹ ಆಗಿದ್ದಾರೆ.

   ಉತ್ತಮ ಸ್ಥಾನದಲ್ಲಿರುವ ಸುಮಾರು 30 ವಿದ್ಯಾರ್ಥಿಗಳು ಹಣ ಹಾಕಿ ಶಿಕ್ಷಕರ ನೆರವಿಗೆ ಬಂದಿದ್ದಾರೆ. ಇದೇ ವೇಳೆ ಶಾಲೆಯ ಬೋಧಕೇತರ ವರ್ಗದ 18 ಜನರಿಗೂ ಒಂದು ತಿಂಗಳ ಸಾಮಾಗ್ರಿಯ ಕಿಟ್ ವಿತರಿಸಿದ್ದಾರೆ. ವಿದ್ಯಾರ್ಥಿಗಳ ಪ್ರೀತಿ ಹಾಗೂ ಗೌರವಕ್ಕೆ ಆಡಳಿತ ಮಂಡಳಿ, ಶಿಕ್ಷಕ ವೃಂದ ಕೂಡ ಶ್ಲಾಘಿಸಿದೆ.

   English summary
   On September 5, 60,000 rupees Financial Assistance Gived to 20 teachers of as part of the Teacher's Day celebration In Kaduru, Chikkamagaluru District.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X