ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪ ಸರ್ಕಾರಿ ವೈದ್ಯರಿಂದಲೇ ಮಗು ಮಾರಾಟ? ನಾಲ್ವರ ಮೇಲೆ FIR ದಾಖಲು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಡಿಸೆಂಬರ್ 01: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪುಟ್ಟ ಮಗುವನ್ನು ಮಾರಾಟ ಮಾಡಿದ ವೈದ್ಯ ಹಾಗೂ ದಾದಿಯರು ಸೇರಿದಂತೆ ನಾಲ್ವರ ಮೇಲೆ ಎಫ್ ಐ ಆರ್ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವತಿಯೊಬ್ಬಳು ಇದೇ ಮಾರ್ಚ್ 14ರಂದು ಹೆರಿಗೆ ನೋವಿನಿಂದ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಆಕೆಗೆ ಹೆಣ್ಣು ಮಗು ಜನಿಸಿತ್ತು. ಆದರೆ, ಆ ಯುವತಿಗೆ ಮದುವೆಯಾಗದ ಕಾರಣ ಕೊಪ್ಪ ತಾಲೂಕು ಆಸ್ಪತ್ರೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಬಾಲಕೃಷ್ಣ, ನಿನಗೆ ಮಗು ಸಾಕಲು ಆಗುವುದಿಲ್ಲ. ಮಗುವನ್ನು ಇಲ್ಲೇ ಬಿಟ್ಟು ಹೋಗು ಎಂದಿದ್ದರು. ಮದುವೆಗೂ ಮುಂಚೆ ಮಗು ಜನಿಸಿದ್ದರಿಂದ ಹೆದರಿದ ಯುವತಿ ಮಗುವನ್ನು ಯಾರಿಗಾದರೂ ಕೊಡುವಂತೆ ಹೇಳಿದ್ದಳು. ವೈದ್ಯ ಬಾಲಕೃಷ್ಣ ಮಗುವನ್ನು ತಮಿಳುನಾಡಿನಿಂದ ಬಂದು ಶೃಂಗೇರಿಯಲ್ಲಿ ವಾಸವಿರುವ ಪ್ರೇಮಾ ಎಂಬುವರಿಗೆ ಮಾರಾಟ ಮಾಡಿದ್ದರು. ಮಗುವಿನ ತಾಯಿ ಯುವತಿಗೆ ವೈದ್ಯರು 5000 ಹಣ ನೀಡಿದ್ದರು.

ಆದರೆ, ಈಗ 8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಮಗುವಿನ ತಾಯಿ ವೈದ್ಯ ಬಾಲಕೃಷ್ಣ ಹಾಗೂ ಇಬ್ಬರು ದಾದಿಯರಾದ ಶೋಭಾ ಹಾಗೂ ರೇಷ್ಮಾ ವಿರುದ್ಧ ಠಾಣೆಯಲ್ಲಿ ದೂರು ನೀಡಿದ್ದಾಳೆ. ವೈದ್ಯರು ನನಗೆ 5000 ಹಣ ನೀಡಿ ನನ್ನ ಮಗುವನ್ನು 50 ಸಾವಿರಕ್ಕೂ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದ್ದಾರೆ ಎಂದು ದೂರು ನೀಡಿದ್ದಾಳೆ.

ಎರಡು ದಿನದ ಶಿಶು ಕದ್ದು 80 ಸಾವಿರಕ್ಕೆ ಮಾರಾಟಎರಡು ದಿನದ ಶಿಶು ಕದ್ದು 80 ಸಾವಿರಕ್ಕೆ ಮಾರಾಟ

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಗುವನ್ನು ಚಿಕ್ಕಮಗಳೂರಿನ ಬಾಲಮಂದಿರಕ್ಕೆ ಬಿಟ್ಟಿದ್ದಾರೆ. ಮಗುವಿನ ತಾಯಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಶಿವಮೊಗ್ಗಾದ ಎನ್.ಜಿ.ಓ‌. ಸಂಸ್ಥೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.

Recommended Video

Political Popcorn with Lavanya : Dr BL Shankar, ನನ್ ಜೀವನದಲ್ಲಿ ನಾನು ಮಾಡಿದ ಎರಡು ತಪ್ಪು ಯಾವುದು ಗೊತ್ತಾ??
Chikkamgaluru: FIR On Doctor And Two Nurse For Selling Baby From Koppa Hospital

ಪ್ರಕರಣ ಬೆಳಕಿಗೆ ಬಂದದ್ದು: 8 ತಿಂಗಳ ಬಳಿಕ ಆರೋಗ್ಯ ಹದಗೆಟ್ಟ ಕಾರಣ ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಾದ ಮಗುವಿನ ತಾಯಿ ಮಾನಸಿಕ ಖಿನ್ನತೆಯಿಂದ ಮಗು-ಮಗು ಎಂದು ಕನವರಿಸುತ್ತಿದ್ದಳು. ಆಸ್ಪತ್ರೆ ವೈದ್ಯರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ವೈದ್ಯರು ಶಿವಮೊಗ್ಗದ ಮಕ್ಕಳ ಪಾಲನಾ ಕೇಂದ್ರದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಹೆರಿಗೆ ರಿಜಿಸ್ಟ್ರಾರ್ ನಲ್ಲಿ ಸುಳ್ಳು ಬರೆದರು: ಮಾರ್ಚ್ 14 ರಂದು ಹೆರಿಗೆಯಾದರೂ ಕೇಸ್ ಶೀಟ್ ನಲ್ಲಿ ಶುಶ್ರೂಶಕಿಯರು ಹೆರಿಗೆಯ ಮಾಹಿತಿ ಬರೆದಿಲ್ಲ. ಅವರ ಹೆಸರಿಗೆ ಮಗುವಿನ ಜನನ ಪ್ರಮಾಣ ಪತ್ರ ಸಿಗುವಂತೆ ಮಾಡಲು ಅದೇ ಕೇಸ್ ಶೀಟ್ ನಲ್ಲಿ ಬೇರೊಬ್ಬರ ಹೆಸರು ಬರೆದಿದ್ದಾರೆ. ಈ ಎಲ್ಲಾ ಅಂಶಗಳ ಆಧಾರದ ಮೇಲೆ ಕೊಪ್ಪ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಘಾನವಿ ನೀಡಿದ ದೂರಿನ ಅನ್ವಯ ವೈದ್ಯ ಬಾಲಕೃಷ್ಣ, ಶುಶ್ರೂಶಕಿ ಶೋಭಾ, ರೇಷ್ಮಾ ಹಾಗೂ ಮಗುವನ್ನ ಖರೀದಿಸಿದ ಪ್ರೇಮಾ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

English summary
An FIR has been lodged on four including doctor and nurses for selling a baby from koppa government hospital in Chikkamagaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X