ಚುರ್ಚೆಗುಡ್ಡದಲ್ಲಿ ಕಾಡ್ಗಿಚ್ಚು: ಬೆಂಕಿ ಆರಿಸಲು 8 ಗಂಟೆಗಳ ನಿರಂತರ ಕಾರ್ಯಾಚರಣೆ
ಚಿಕ್ಕಮಗಳೂರು ತಾಲೂಕಿನ ಮೀಸಲು ಅರಣ್ಯ ಚುರ್ಚೆಗುಡ್ಡ ಅರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚಿನಿಂದ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 60ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಎಂಟು ಗಂಟೆಗಳ ಕಾಲ ನಿರಂತರ ಕಾರ್ಯಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ
ಚಿಕ್ಕಮಗಳೂರು, ಫೆಬ್ರವರಿ 11: ಮೀಸಲು ಅರಣ್ಯಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮೀಸಲು ಅರಣ್ಯ ಚುರ್ಚೆಗುಡ್ಡ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಪಕ್ಕದಲ್ಲೇ ಇರುವ ರಿಸರ್ವ್ ಫಾರೆಸ್ಟ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅರಣ್ಯ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆ ಜಾಗಕ್ಕೆ ಅಗ್ನಿಶಾಮಕ ವಾಹನ ಕೂಡ ಹೋಗಲು ಸಾಧ್ಯವಾಗದ ಹಿನ್ನೆಲೆ ಅಧಿಕಾರಿಗಳೇ ಸೊಪ್ಪನ್ನ ಕೈಯಲ್ಲಿಡಿದು ಬಡಿಯುವ ಮೂಲಕ ಬೆಂಕಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ.
ಈಗಾಗಲೇ ಬಿಸಿಲಿನ ಝಳಕ್ಕೆ ಮರಗಿಡಗಳ ಎಲೆಗಳು ಸಂಪೂರ್ಣವಾಗಿ ಉದುರಿಹೋಗಿವೆ. ಸ್ವಲ್ಪ ಬೆಂಕಿ ಹೊತ್ತಿಕೊಂಡರೂ ಆರಿಸುವು ತೀರಾ ಕಷ್ಟ. ಇಲ್ಲಿನ ಪರಿಸ್ಥಿತಿ ಕೂಡ ಅದೇ ರೀತಿ ಆಗಿತ್ತು. ಬಾದೆ ಹುಲ್ಲು ಹೆಚ್ಚಾಗಿ ಇರುವ ಈ ಪ್ರದೇಶದಲ್ಲಿ ಬೆಂಕಿ ತಗುಲುತ್ತಿದ್ದಂತೆ ಒಣಗಿದ ಹುಲ್ಲು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಅಧಿಕಾರಿಗಳು ಏನೇ ಹರಿಸಾಹಸಪಟ್ಟರೂ ಬೆಂಕಿಯ ಕೆನ್ನಾಲಿಗೆ ಹೆಚ್ಚುತ್ತಲೇ ಹೋಗಿತ್ತು.

ಚಿಕ್ಕಮಗಳೂರು ಹಾಗೂ ಕಡೂರು ಅರಣ್ಯ ವಿಭಾಗದ ಸಿಬ್ಬಂದಿ ಜೊತೆ ಎ.ಸಿ.ಎಫ್. ಆರ್.ಎಫ್.ಓ. ಡಿ.ಎಫ್.ಓ. ಕೂಡ ಬೆಂಕಿ ನಂದಿಸು ಕಾರ್ಯಾರಣೆಯಲ್ಲಿ ಭಾಗಿಯಾಗಿದ್ದರು. ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ ಎಂಟು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಬೆಳಗಿನ ಜಾವ 3.30ರವರೆಗೂ ಬೆಂಕಿ ಆರಿಸಿದ್ದಾರೆ.

ಇನ್ನು ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಅರಣ್ಯ ಪ್ರದೇಶದಲ್ಲೂ ಬೆಂಕಿ ತಗುಲಿದ್ದು ಅಧಿಕಾರಿಗಳು ಇಡೀ ದಿನ ಬೆಂಕಿ ಆರಿಸಿದ್ದಾರೆ. ಕಳಸಾಪುರದಲ್ಲೂ ಕೂಡ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಅರಣ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ಕೆಲ ಪ್ರಾಣಿ-ಪಕ್ಷಿಗಳು ಕೂಡ ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications