ಕಿಡಿಗೇಡಿಗಳ ದುಷ್ಕೃತ್ಯ: 50 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ
ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹಿರೇಗೌಜ ಗ್ರಾಮಕ್ಕೆ ಹೊಂದಿಕೊಂಡಿರುವ ಹಿರೇಗೌಜ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಮಾರು 50 ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಚಿಕ್ಕಮಗಳೂರು, ಮಾರ್ಚ್ 4: ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕೆನ್ನಾಲಿಗೆಗೆ 50 ಎಕರೆ ಮೀಸಲು ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ಹಿರೇಗೌಜ ಗ್ರಾಮ ಸಮೀಪದಲ್ಲಿ ವರದಿಯಾಗಿದೆ.
ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹಿರೇಗೌಜ ಗ್ರಾಮಕ್ಕೆ ಹೊಂದಿಕೊಂಡಿರುವ ಹಿರೇಗೌಜ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಮಾರು 50 ಎಕರೆ ಅರಣ್ಯ ಪ್ರದೇಶ ಕ್ಷಣ ಮಾತ್ರದಲ್ಲಿ ಸುಟ್ಟು ಬೂದಿಯಾಗಿದೆ. ಬೆಂಕಿ ಹತ್ತಿದ್ದ ವೇಳೆ ತೀವ್ರ ಗಾಳಿ ಬೀಸಿದ್ದರಿಂದ ಅರಣ್ಯಕ್ಕೆ ಭಾರೀ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ಆರಿಸಲು ಹರಸಾಹಸ ಪಟ್ಟಿದ್ದಾರೆ. ಆದರೂ ಬೆಂಕಿ ನಿಯಂತ್ರಣಕ್ಕೆ ಬಾರದ ಪರಿಣಾಮ ಸುಮಾರು 50 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಸತತ ಕಾರ್ಯಾಚರಣೆ ಬಳಿಕ ಸಂಜೆ ವೇಳೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಘಟನೆಯಲ್ಲಿ ಅಪಾರ ಪ್ರಮಾಣದಲ್ಲಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.
ಅಪರಿಚಿತ ವಾಹನ ಡಿಕ್ಕಿ: ಪೊಲೀಸ್ ಠಾಣೆ ಮುಂಭಾಗವೇ ಯುವಕ ಸಾವು
ಚಿಕ್ಕಮಗಳೂರು: ಪೊಲೀಸ್ ಠಾಣೆ ಮುಂಭಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದ ನಿವಾಸಿ ಶ್ರೀನಿವಾಸ್(30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶ್ರೀನಿವಾಸ್ ತರೀಕೆರೆ ಪೊಲೀಸ್ ಸ್ಟೇಷನ್ ಮುಂಭಾಗದಲ್ಲಿ ನಡೆದು ಹೋಗುವಾಗ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮೃತ ಯುವಕ ಶ್ರೀನಿವಾಸ್‌ಗೆ ವಿವಾಹವಾಗಿದ್ದು ಇಬ್ಬರು ಚಿಕ್ಕ ಮಕ್ಕಳಿದ್ದಾರೆ ಎನ್ನಲಾಗಿದೆ.
ಯುವಕನಿಗೆ ಡಿಕ್ಕಿ ಹೊಡೆದ ಲಾರಿ ಯಾವುದು ಎಂದು ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ಲಾರಿ ಏಕಾಏಕಿ ಡಿಕ್ಕಿಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ಕೂಡಲೇ ಆತನನ್ನ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದರೂ ಕೂಡ ದುರಾದೃಷ್ಟವಶಾತ್ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ತರೀಕೆರೆ ಪೊಲೀಸರು ಯುವಕನಿಗೆ ಡಿಕ್ಕಿಯೊಡೆದ ಲಾರಿ ಅಥವಾ ಬೇರೆ ವಾಹನ ಯಾವುದು ಎನ್ನುವುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications