ಚಿಕ್ಕಮಗಳೂರಿನಲ್ಲಿ ಹಾಡಹಗಲೇ ಗುಂಡಿನ ದಾಳಿ: ನಡುರಸ್ತೆಯಲ್ಲೇ ಇಬ್ಬರು ಸಾವು

ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.

ಚಿಕ್ಕಮಗಳೂರು, ಫೆಬ್ರವರಿ 20: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಕೊಲೆ ಪ್ರಕರಣಗಳು ಕೂಡ ಮಿತಿ ಮೀರುತ್ತಿದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾಡುಹಗಲೇ ಇಬ್ಬರು ಯುವಕರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ.

ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟವರನ್ನು ಪ್ರಕಾಶ್(30) ಹಾಗೂ ಪ್ರವೀಣ್(33) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ರಮೇಶ್ ಎಂದು ತಿಳಿದಿದು ಬಂದಿದ್ದು, ಈತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಸಾವನ್ನಪ್ಪಿದ ಪ್ರಕಾಶ್ ಹಾಗೂ ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ.

Firing On Bike Riders At Chikkamagaluru

ಹಾಡಹಗಲೇ ಗುಂಡಿಕ್ಕಿ ಇಬ್ಬರನ್ನು ಕೊಲೆ ಮಾಡಿದ ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಗುಂಡಿನ ದಾಳಿ ನಡೆಸಿದ ರಮೇಶ್‌ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ಯ ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಗುಂಡಿನ ದಾಳಿ ನಡೆಸಿದ ಆರೋಪಿ ರಮೇಶ್‌ಗೆ ಬಂದೂಕು ಎಲ್ಲಿಂದ ಸಿಕ್ಕಿತು ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಅಥವಾ ಯಾವ ಬಂದೂಕನ್ನು ಆರೋಪಿ ರಮೇಶ್‌ ಬಳಿಸಿದ್ದಾರೆ. ಆತ ಬಳಸಿದ ಗನ್‌ಗೆ ಪರವಾನಗಿ ಇದೆಯಾ..? ಕೊಲೆಯ ಹಿಂದಿನ ಕಾರಣಗಳ ಬಗ್ಗೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಹಾಡಹಗಲೇ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ. ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+