ಹುಲಿ ಚರ್ಮದ ಮೇಲೆ ಕುಳಿತಿರುವ ಫೋಟೋ ವೈರಲ್: ದತ್ತಪೀಠದ ಶಾಖಾದ್ರಿ ನಿವಾಸಕ್ಕೆ ನೋಟಿಸ್
ಚಿಕ್ಕಮಗಳೂರು, ಅಕ್ಟೋಬರ್ 29: ದತ್ತಪೀಠದ ಶಾಖಾದ್ರಿ ನಿವಾಸದಲ್ಲಿ ಚಿರತೆ-ಜಿಂಕೆ ಚರ್ಮ ಪತ್ತೆ ಪ್ರಕರಣ ಸಂಬಂಧಿಸಿದಂತೆ ಇದೀಗ ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಶಾಖಾದ್ರಿ ನಿವಾಸಕ್ಕೆ ಅರಣ್ಯಾಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ವಿಚಾರಣೆಗೆ ಹಾಜರಾಗಲು ಸೂಚಿಸಿ ಶಾಖಾದ್ರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇನ್ನು ಮನೆಯಲ್ಲಿ ಪತ್ತೆಯಾದ ಚಿರತೆ, ಜಿಂಕೆ ಚರ್ಮದ ಮಾಹಿತಿ ದಾಖಲೆ ನೀಡುವಂತೆ ಸೂಚನೆ ನೀಡಲಾಗಿದೆ.

ಇನ್ನು ಚಿಕ್ಕಮಗಳೂರು ವಲಯ ಅರಣ್ಯಾಧಿಕಾರಿ ಮೋಹನ್ ಅವರಿಂದ ನೋಟಿಸ್ ಜಾರಿ ಮಾಡಲಾಗಿದೆ. ಬಾಬಾ ಬುಡನ್ ಸ್ವಾಮಿ ದರ್ಗಾದ ಶಾಖಾದ್ರಿ ಗೌಸ್ ಮೊಹಿದ್ದೀನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ದತ್ತಪೀಠದ ಶಾಖಾದ್ರಿ ಹುಲಿ ಚರ್ಮದ ಮೇಲೆ ಕುಳಿತಿರುವ ಫೋಟೋ ವೈರಲ್..!
ಕಾಫಿನಾಡಿನಲ್ಲಿ ವಿನಯ್ ಗುರೂಜಿ ಬಳಿಕ ಮತ್ತೊಂದು ಹುಲಿ ಚರ್ಮದ ಪ್ರಕರಣ ಬೆಳಕಿಗೆ ಬಂದಿದ್ದು, ಇನಾಂ ದತ್ತಾತ್ರೇಯ ಬಾಬಬುಡನ್ ಗಿರಿ ಶಾಖಾದ್ರಿಯೂ ಹುಲಿ ಚರ್ಮದ ಮೇಲೆ ಕುಳಿತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಾಜ್ಯದಲ್ಲಿ ಹುಲಿ ಉಗುರು-ಚರ್ಮದ ಕಂಟಕ ಮುಂದುವರಿದ್ದು, ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಬುಡನ್ ಗಿರಿಯಲ್ಲಿ ಅನಧಿಕೃತವಾಗಿ ವಾಸವಿರುವ ಶಾಖಾದ್ರಿ ಕುಟುಂಬದವರ ಬಳಿಯೂ ಹುಲಿ ಚರ್ಮವಿದೆ. ಶಾಖಾದ್ರಿ ಮೇಲೂ ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ದೂರು ನೀಡಲು ಶ್ರೀರಾಮಸೇನೆಯ ಜಿಲ್ಲಾ ಘಟಕ ಮುಂದಾಗಿದೆ. ಅವರ ಮೇಲೂ ಸೂಕ್ತ ಕ್ರಮ ಕೈಗೊಳ್ಳಲುವಂತೆ ಡಿ.ಎಫ್.ಓ.ಗೆ ಶ್ರೀರಾಮಸೇನೆ ಮನವಿ ಮಾಡಿದರು.

ಇನ್ನು ಈ ಬಗ್ಗೆ ಪ್ರತಿ ಕ್ರಿಯೆ ನೀಡಿರುವ ಶ್ರೀರಾಮಸೇನೆ ಮುಖಂಡ ರಂಜಿತ್ ಶೆಟ್ಟಿ ಶಾಖಾದ್ರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅರಣ್ಯಾಧಿಕಾರಿ ಗಳು ಈ ಕೂಡಲೇ ದಾಳಿ ಮಾಡಿ ಹುಲಿ ಚರ್ಮ ವನ್ನ ವಶಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು.












Click it and Unblock the Notifications