ಮೂಡಿಗೆರೆಯಲ್ಲಿ ಕಾರು ಅಪಘಾತ:ಒಂದೇ ಕುಟುಂಬದ 4 ಮಂದಿ ಸಾವು
ಚಿಕ್ಕಮಗಳೂರು, ಫೆಬ್ರವರಿ 18:ಯಕ್ಷಗಾನ ಕಾರ್ಯಕ್ರಮಕ್ಕೆ ತೆರಳಿದ್ದ ಒಂದೇ ಕುಟುಂಬದ 4 ಮಂದಿ ಕಾರು ಅಪಘಾತದಲ್ಲಿ ಮೃತಪಟ್ಟ ಘಟನೆ ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಹಿರೇಬೈಲು ಗ್ರಾಮದ ಸಮೀಪ ಅಪಘಾತ ಸಂಭವಿಸಿದ್ದು, ಕಾರು 80 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಅತ್ಯಂತ ವೇಗದಲ್ಲಿದ್ದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದದರಿಂದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಮಾತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಶ್ವನಾಥ್ (55), ಪುಷ್ಪಾವತಿ (48) ಮತ್ತು ರಾಹುಲ್ ರೈ (58), ಮಮತಾ (51) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಸಂಜು ಶೆಟ್ಟಿ ಎಂಬುವವರನ್ನು ಕಳಸದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಡಿಗೆರೆ ತಾಲೂಕಿನ ಬಾಳೆಹೊಳೆಯಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.












Click it and Unblock the Notifications