• search
 • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚೇತನಹಳ್ಳಿಯಲ್ಲಿ ಪಂಚಭೂತಗಳಲ್ಲಿ ಲೀನವಾದ ಗಂಗಯ್ಯ ಹೆಗ್ಡೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News
   ಕೆಫೆ ಕಾಫಿ ಡೇ ಮಾಲೀಕ ವಿ.ಜಿ.ಸಿದ್ದಾರ್ಥ ಅವರ ತಂದೆ ವಿಧಿವಶ | Oneindia Kannada

   ಚಿಕ್ಕಮಗಳೂರು, ಆಗಸ್ಟ್ 26: ಉದ್ಯಮಿ ದಿ.ಸಿದ್ಧಾರ್ಥ ಹೆಗ್ಡೆ ಅವರ ತಂದೆ ಗಂಗಯ್ಯ ಹೆಗ್ಡೆ ನಿನ್ನೆ ವಿಧಿವಶರಾಗಿದ್ದು, ಇಂದು ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟ್ ನಲ್ಲಿ ಗಂಗಯ್ಯ ಹೆಗ್ಡೆ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

   ಸಿದ್ಧಾರ್ಥ ಅವರ ಅಂತ್ಯಕ್ರಿಯೆ ನಡೆಸಿದ್ದ ಸ್ಥಳದ ಪಕ್ಕದಲ್ಲಿಯೇ ಗಂಗಯ್ಯ ಹೆಗ್ಡೆ ಅವರ ಅಂತಿಮ ವಿಧಿ ವಿಧಾನವನ್ನೂ ನೆರವೇರಿಸಲಾಯಿತು.

    ವಿ. ಜಿ. ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ ವಿಧಿವಶ ವಿ. ಜಿ. ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ ವಿಧಿವಶ

   ಗಂಗಯ್ಯ ಹೆಗ್ಡೆ ಅವರ ಅಣ್ಣನ ಮಗ ಸೇನಾನಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಿದ್ದು, ಪಂಚಭೂತಗಳಲ್ಲಿ ಗಂಗಯ್ಯ ಹೆಗ್ಡೆ ಅವರು ಲೀನವಾದರು.

   ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗಂಗಯ್ಯ ಹೆಗ್ಡೆ ಅವರು, ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗಂಗಯ್ಯ ಹೆಗ್ಡೆ (94) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

   ಮಗ ಸತ್ತ ತಿಂಗಳೊಳಗೇ ಅಪ್ಪನ ಸಾವು; ಇಂದು ಸಿದ್ಧಾರ್ಥ ತಂದೆ ಗಂಗಯ್ಯ ಹೆಗ್ಡೆ ಅಂತ್ಯಕ್ರಿಯೆಮಗ ಸತ್ತ ತಿಂಗಳೊಳಗೇ ಅಪ್ಪನ ಸಾವು; ಇಂದು ಸಿದ್ಧಾರ್ಥ ತಂದೆ ಗಂಗಯ್ಯ ಹೆಗ್ಡೆ ಅಂತ್ಯಕ್ರಿಯೆ

   ಅಂತ್ಯಕ್ರಿಯೆಯಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ, ಶಾಸಕ ಟಿ.ಡಿ.ರಾಜೇಗೌಡ ಭಾಗಿಯಾಗಿದ್ದರು.

   English summary
   Gangaiah Hegde, father of businessman Siddhartha funeral was held today at Chetanahalli Estate in Moodigere Taluk.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X