ಜೋಕಾಲಿ ಆಡಲು ಹೋಗಿ ಜೀವ ಕಳೆದುಕೊಂಡ ಬಾಲಕಿ
ಚಿಕ್ಕಮಗಳೂರು, ಜೂನ್ 17: ಜೋಕಾಲಿ ಆಡಲು ಹೋಗಿ ಬಾಲಕಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡ ಘಟನೆ ಚಿಕ್ಕಮಗಳೂರಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ನಡೆದಿದೆ.
ಉಯ್ಯಾಲೆ ಆಡಲೆಂದು ಮನೆಯಲ್ಲಿ ಕಟ್ಟಿದ್ದ ವೇಲ್, ಆಟ ಆಡುತ್ತಿದ್ದ ಸಂದರ್ಭ ಕುತ್ತಿಗೆಗೆ ಸುತ್ತಿಕೊಂಡು ಬಾಲಕಿ ಸಾವನ್ನಪ್ಪಿದ್ದಾಳೆ. 4ನೇ ತರಗತಿಯಲ್ಲಿ ಓದುತ್ತಿದ್ದ ನಿಸರ್ಗ (9) ಮೃತ ಬಾಲಕಿ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಶಾಲೆಗೆ ಅಂದು ರಜೆ ಇದ್ದಿದ್ದರಿಂದ ಮನೆಯಲ್ಲೇ ಆಟವಾಡುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ.

ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications