ಚಿಕ್ಕಮಗಳೂರು; ವಾರಾಂತ್ಯದ ಕರ್ಫ್ಯೂಗೆ ಉತ್ತಮ ಬೆಂಬಲ

ಚಿಕ್ಕಮಗಳೂರು, ಏಪ್ರಿಲ್ 25; ಕೋವಿಡ್ ಸೋಂಕು ಹರಡುವಿಕೆ ತಡೆಯಲು ಸರ್ಕಾರ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕರ್ಫ್ಯೂಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಜನಸಂಚಾರ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು ರಸ್ತೆಗಳೆಲ್ಲ ಖಾಲಿ ಖಾಲಿಯಾಗಿ ಬಿಕೋ ಎನ್ನುತ್ತಿವೆ. ಭಾನುವಾರ ಬೆಳಗ್ಗೆ 6 ರಿಂದ 10 ಗಂಟೆಯವರೆಗೂ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು.

ಹಾಲು, ಹಣ್ಣು, ಹೂವು, ದಿನಸಿ ಸೇರಿದಂತೆ ಇತರೆ ವಸ್ತುಗಳ ಖರೀದಿಗೆ ಜನರು ಆಗಮಿಸಿದ್ದರು. ಭಾನುವಾರವಾದ ಹಿನ್ನಲೆಯಲ್ಲಿ ಹಾಲು, ಹಣ್ಣು ಖರೀದಿಗಿಂತ ಮೀನು, ಮಾಂಸ, ಮೊಟ್ಟೆ ಖರೀದಿಗೆ ಜನರು ಮುಗಿಬಿದಿದ್ದರು.‌ ಚಿಕನ್‌, ಮೀನು, ಮಾಂಸದ ಅಂಗಡಿ ಮುಂದೆ ಜನರು ಸಾಲುಗಟ್ಟಿ ನಿಂತಿದ್ದರು.

 Good Response For Weekend Curfew In Chikkamagaluru

10 ಗಂಟೆ ಬಳಿಕ ಪೋಲಿಸರು ಎಲ್ಲಾ ಅಂಗಡಿ ಬಂದ್ ಮಾಡಿಸಿದ್ದರಿಂದ ಕೆಲವರಿಗೆ ಮೀನು, ಮಾಂಸ ಸಿಕ್ಕದೆ ನಿರಾಸೆಯಿಂದ ಮನೆ ಕಡೆಗೆ ಹೆಜ್ಜೆ ಹಾಕಿದರು. 11 ಗಂಟೆ ವೇಳೆಗೆ ಗಿಜುಗುಡುತ್ತಿದ್ದ ಮಾರುಕಟ್ಟೆಗಳೆಲ್ಲ ಸ್ತಬ್ದಗೊಂಡವು. ಕೆಎಸ್‌ಆರ್‌ಟಿಸಿ ಬಸ್‌ಗಳಿದ್ದರೂ ಪ್ರಯಾಣಿಕರು ನಿಲ್ದಾಣದ ಕಡೆ ಸುಳಿಯಲಿಲ್ಲ.

ಆಟೋ, ಟ್ಯಾಕ್ಸಿ ವಾಹನಗಳು 10ಗಂಟೆಯ ವರೆಗೂ ಸಂಚಾರ ನಡೆಸಿದವು. 10 ಗಂಟೆಯ ನಂತರ ಸಂಚಾರ ಸಂಪೂರ್ಣ ಸ್ಥಗಿತವಾಯಿತು. ಔಷಧಿ ಅಂಗಡಿ, ಪೆಟ್ರೋಲ್ ಬಂಕ್, ಆಸ್ಪತ್ರೆ ಹೊರತು ಪಡಿಸಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.

 Good Response For Weekend Curfew In Chikkamagaluru

ಸೋಮವಾರ ಬೆಳಗ್ಗೆ 6 ಗಂಟೆಯ ತನಕ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಸೋಮವಾರ ರಾತ್ರಿ 9 ರಿಂದ ಪುನಃ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+