ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಡ್ರಗ್ ಮಾಫಿಯಾ; ಯಾರು ಒತ್ತಡ ತಂದರೂ ಮಣಿಯುವುದಿಲ್ಲ"

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಸೆಪ್ಟೆಂಬರ್ 4: "ಡ್ರಗ್ ಮಾಫಿಯಾ ಇಂದು ನಿನ್ನೆಯದಲ್ಲ. ಆಗಾಗ ಇದನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದರೂ ಬೇರು ಸಮೇತ ಕಿತ್ತುಹಾಕಲು ಸಾಧ್ಯವಾಗಿಲ್ಲ. ಈಗ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ" ಎಂದು ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಕುರಿತು ಪ್ರತಿಕ್ರಿಯಿಸಿದ್ದಾರೆ ಸಚಿವ ಸಿ.ಟಿ. ರವಿ.

Recommended Video

Drugs ದಂಧೆ ಕಾರ್ಯಚರಣೆಗೆ ಬ್ರೇಕಿಲ್ಲ: Home Minister | Oneindia Kannada

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಡ್ರಗ್ ಮಾಫಿಯಾ ಜಾಲಕ್ಕೆ ಸಂಬಂಧಿಸಿದಂತೆ 84ಕ್ಕೂ ಹೆಚ್ಚು ಜನರ ವಿಚಾರಣೆ ಮಾಡಲಾಗಿದೆ. ಈ ವಿಷಯದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಂಡಿಲ್ಲ. ಮಾಫಿಯಾದಲ್ಲಿ ಯಾರೇ ತೊಡಗಿಕೊಂಡಿದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯುವ ಜನರನ್ನು ಪಿಡುಗಿನಿಂದ ಮುಕ್ತಗೊಳಿಸಬೇಕೆಂಬ ಜವಾಬ್ದಾರಿ ಸರ್ಕಾರದ ಮೇಲಿದೆ" ಎಂದು ಹೇಳಿದರು.

 Government Wont Compromise In Drug Mafia Investigation Said Minister CT Ravi

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ; ಸಚಿವ ಸಿ.ಟಿ.ರವಿ ಏನಂದರು?ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ; ಸಚಿವ ಸಿ.ಟಿ.ರವಿ ಏನಂದರು?

" ಈ ಜಾಲ ರಾಜ್ಯಕ್ಕೆ ಸೀಮಿತವಾಗಿಲ್ಲ, ಹೊರರಾಜ್ಯ, ಹೊರದೇಶಗಳ ಸಂಪರ್ಕ ಕೂಡ ಇದೆ. ಕೆಲವೆಡೆ ಭಯೋತ್ಪಾದಕರ ಜೊತೆ ತಳುಕು ಹಾಕಿಕೊಂಡಿದೆ. ರಾಜಕಾರಣಿಗಳ, ಸಿನಿಮಾ ನಟ-ನಟಿಯರನ್ನು ತಳುಕು ಹಾಕಿಕೊಂಡಿದೆ. ಜೊತೆಗೆ ತನಿಖಾ ತಂಡದ ಮೇಲೆ ಒತ್ತಡ ತರುವಂತಹ ಕೆಲಸ ನಡೆಯುತ್ತಿದೆ. ಆದರೆ ಸರ್ಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಯಾರೇ ಇದ್ದರೂ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ" ಎಂದು ಸ್ಪಷ್ಟಪಡಿಸಿದರು.

English summary
More than 84 people have been investigated in the drug mafia network. The government has not compromised in this regard said Minister CT Ravi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X