ಆಟೋ ನಿಲ್ದಾಣ ನಿರ್ಮಾಣಕ್ಕೆ ತಡೆ: ಬಿಜೆಪಿ ಗುಂಪುಗಳ ನಡುವೆ ಕಿತ್ತಾಟ
ಚಿಕ್ಕಮಗಳೂರು, ಮಾರ್ಚ್ 27: ಉಪಸಭಾಪತಿ ಎಂ.ಕೆ.ಪ್ರಾಣೇಶ್ ಅವರು ತನ್ನ ಎಂಎಲ್‍ಸಿ ಅನುದಾನದಲ್ಲಿ ಪಟ್ಟಣದ ಶಾಸಕರ ಕಚೇರಿ ಎದುರು ಆಟೋ ಸ್ಟಾಂಡ್ ನಿರ್ಮಾಣಕ್ಕೆ 4.5 ಲಕ್ಷ ರೂಪಾಯಿ ಹಣ ಮೀಸಲಿರಿಸಿದ್ದು, ಸೋಮವಾರ ಬೆಳಗ್ಗೆ ಗುತ್ತಿಗೆದಾರ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಜಿ.ಬಿ.ಧರ್ಮಪಾಲ್ ಆಟೋ ನಿಲ್ದಾಣ ನಿರ್ಮಾಣಕ್ಕೆ ತಡೆ ಹಾಕಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಆಟೋ ಚಾಲಕರು ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆಯಿತು. ಇಲ್ಲಿ ತಾಲೂಕು ಕಚೇರಿ ಹಾಗೂ ಪಟ್ಟಣಕ್ಕೆ ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡಲಾಗಿದೆ. ಮಾನವೀಯತೆ ದೃಷ್ಟಿಯಿಂದ ಆಟೋ ನಿಲ್ಲಿಸಲು ಅನುವು ಮಾಡಿಕೊಡಲಾಗಿದೆ.

ಈಗಾಗಲೇ ಪಟ್ಟಣದ ಎಲ್ಲಾ ರಸ್ತೆಗಳು ಕಿರಿದಾಗಿದೆ. ಈ ರಸ್ತೆಯೊಂದೆ ಅಗಲವಾಗಿ ಉಳಿದಕೊಂಡಿದೆ. ಅದನ್ನಾದರೂ ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇಲ್ಲಿ ಯಾವುದೇ ಕಟ್ಟಡ ಹಾಗೂ ಆಟೋ ನಿಲ್ದಾಣ ನಿರ್ಮಿಸಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ಚಾಲಕರೂ ಸ್ಥಳದಲ್ಲೇ ಪ್ರತಿಭಟನೆ ನಡೆಸಿ, ಅನೇಕ ವರ್ಷದಿಂದ ಇಲ್ಲಿ ಆಟೋ ಚಾಲಕರು ತಮ್ಮ ಆಟೋ ನಿಲ್ಲಿಸಿ ಬಾಡಿಗೆ ಮಾಡಲಾಗುತ್ತಿತ್ತು. ಆಟೋ ಸ್ಟಾಂಡ್ ನಿರ್ಮಿಸಲು ಉಪ ಸಭಾಪತಿ ಅವರಿಗೆ ಮನವಿ ಮಾಡಿಕೊಂಡಾಗ ಎಂಎಲ್‍ಸಿ ಅನುದಾನದಲ್ಲಿ ಹಣ ಮೀಸಲಿರಿಸಿದ್ದರು. ಸೋಮವಾರ ಕಾಮಗಾರಿ ನಡೆಸುವ ವೇಳೆ ಪಟ್ಟಣ ಪಂಚಾಯತಿ ಅಧ್ಯಕ್ಷರು ತಡೆದಿದ್ದಾರೆ. ಹಾಗಾಗಿ ಮುಂದಿನ ದಿನದಲ್ಲಿ ಆಟೋ ಸಂಘದಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಘಟನೆ ನೋಡುತ್ತಿದ್ದ ಖಾಸಗಿ ವ್ಯಕ್ತಿಯೋರ್ವರಿಗೆ ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ತಲುಪಿತು. ಗಲಾಟೆ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಲಭೆ ನಿಯಂತ್ರಿಸಲು ಹರ ಸಾಹಸಪಟ್ಟರು. ಇದೀಗ ಶಾಸಕರು ಹಾಗೂ ಉಪಸಭಾಪತಿ ಬಣದ ಕಿತ್ತಾಟದಿಂದಾಗಿ ಶಾಸಕರ ಕಚೇರಿ ಎದುರು ಆಟೋ ನಿಲ್ದಾಣ ನಿರ್ಮಿಸಲಾಗುತ್ತಿದೆ ಎಂದು ಘಟನೆಗೆ ರೆಕ್ಕೆಪುಕ್ಕ ಹುಟ್ಟಿಕೊಳ್ಳಲು ಆರಂಭಿಸಿದೆ.
ಸಿ.ಟಿ.ರವಿ ಕ್ಯಾಲೆಂಡರ್ ಜೊತೆ ಮದ್ಯ, ಲಾಂಗ್ ಪತ್ತೆ!
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚಿಕ್ಕಮಗಳೂರು ನಗರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಗಿಫ್ಟ್ ಪಾಲಿಟಿಕ್ಸ್ ಗರಿಗೆದರುತ್ತಿದೆ. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್‌ನಲ್ಲಿ ತಡ ರಾತ್ರಿ ಬ್ರೇಕ್ ಡೌನ್ ಆಗಿ ಕಾರು ಅಪಘಾತಕ್ಕೀಡಾಗಿದೆ. ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿ, ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್ ಹಾಗೂ ಲಾಂಗ್ ಪತ್ತೆಯಾಗಿದೆ.
ಅಪಘಾತಕ್ಕೀಡಾದ ಕಾರನ್ನು ಸ್ಥಳೀಯರು ತಳ್ಳಲು ಮುಂದಾದಾಗ ಚಾಲಕ ಹಾಗೂ ಸ್ಥಳದಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಆಗ ಕಾರಿನಲ್ಲಿ ಪತ್ತೆಯಾದ ಮದ್ಯ, ಲಾಂಗ್, ಸಿ.ಟಿ.ರವಿ ಭಾವಚಿತ್ರ ಇರುವ ಕ್ಯಾಲೆಂಡರ್ ಪತ್ತೆಯಾಗಿದೆ. ಸ್ಥಳೀಯರು ಮದ್ಯ, ಕ್ಯಾಲೆಂಡರ್, ಲಾಂಗ್‌ಗಳನ್ನು ಕಾರಿನಿಂದ ಹೊರತೆಗೆದು ಆಕ್ರೋಶ ಹೊರಹಾಕ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದ್ಯದ ಬಾಟಲಿ, ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್ ಹಾಗೂ ಲಾಂಗ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.












Click it and Unblock the Notifications