Gruha Lakshmi Scheme: ಮಹಿಳೆಯರೇ ಎಚ್ಚರ..! ಚಿಕ್ಕಮಗಳೂರಿನಲ್ಲಿ ಗೃಹಲಕ್ಷ್ಮಿ ನಕಲಿ ಅರ್ಜಿಗಳ ಮಾರಾಟ

ಚಿಕ್ಕಮಗಳೂರು, ಜುಲೈ 18: ನಾಳೆ ಜುಲೈ(19)ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗುವ ಮುನ್ನವೇ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ನಕಲಿ ಅರ್ಜಿಗಳು ಮಾರಾಟವಾಗುತ್ತಿವೆ. ಈ ಬಗ್ಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

ನಕಲಿ ನೋಂದಣಿ ಪತ್ರ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿರುವ ನಕಲಿ ಅರ್ಜಿಗಳನ್ನು ಶೃಂಗೇರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೈಬರ್ ಸೆಂಟರ್ ಗಳಲ್ಲಿ 100 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Gruha Lakshmi Scheme

ನಕಲಿ ಪತ್ರದಲ್ಲಿ ಫಲಾನುಭವಿಗಳ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯ ವಿವರಗಳನ್ನು ಕೇಳಿದ್ದಾರೆ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ವಿದ್ಯುತ್ ತಂತಿ ತಗುಲಿ ಹೊತ್ತಿ ಉರಿದ ಮರ

ಚಿಕ್ಕಮಗಳೂರು: ರಸ್ತೆ ಬದಿ ಒಣಗಿ ನಿಂತಿದ್ದ ಮರಕ್ಕೆ ವಿದ್ಯುತ್ ತಂತಿ ತಗಲಿ ಬೆಂಕಿ ಹತ್ತಿ ಮರ ಉರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿ ಓಣಿ ಗ್ರಾಮದಲ್ಲಿ ನಡೆದಿದೆ.

ಈ ಮಾರ್ಗ ರಾಜ್ಯ ಹೆದ್ದಾರಿಯಾಗಿದ್ದು, ಮೂಡಿಗೆರೆಯಿಂದ ಕೊಟ್ಟಿಗೆಹಾರ ಮುಖಾಂತರ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸಕ್ಕೆ ಹೋಗುವ ಸಾವಿರಾರು ವಾಹನಗಳು ನಿತ್ಯ ಓಡಾಡುತ್ತವೆ. ಮರ ಹೊತ್ತಿ ಉರಿದ ಬಳಿಕ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು.

ತುಂಡಾದ ವಿದ್ಯುತ್ ತಂತಿ ರಸ್ತೆಯಲ್ಲಿ ಸಂಚರಿಸುವ ಯಾವುದಾದರೂ ವಾಹನದ ಮೇಲೆ ಬಿದ್ದಿದ್ದರೆ ವಾಹನ ಕೂಡ ವಿದ್ಯುತ್ ತಂತಿಯಿಂದ ಹೊತ್ತಿ ಉರಿಯುವ ಸಾಧ್ಯತೆ ಇತ್ತು. ಆದರೆ, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಎಂಬುವರು ಮರ ಹೊತ್ತಿ ಉರಿಯುವುದನ್ನು ಕಂಡು ಕೂಡಲೇ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ವಿದ್ಯುತ್ ತಂತಿಗೆ ಅಡ್ಡ ಇರುವ ಮರಗಳನ್ನು ತೆರವುಗೊಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+