ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಚಿಕ್ಕಮಗಳೂರು ಜಿಲ್ಲೆಯ ಈ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು, ಜುಲೈ, 24: ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿನ ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸೋಮವಾರ (ಜುಲೈ 24) ಜಿಲ್ಲೆಯ ಐದು ತಾಲೂಕು, ಚಿಕ್ಕಮಗಳೂರು ತಾಲೂಕಿನ ಐದು ಹೋಬಳಿಯ ಶಾಲೆಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ರಜೆ ಘೋಷಣೆ ಮಾಡಿದ್ದಾರೆ.
ಮಳೆ ಹೆಚ್ಚಾದ ಹಿನ್ನೆಲೆ ಮುಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ ತಾಲೂಕಿನ ಶಾಲೆ ಸೇರಿದಂತೆ, ತಾಲೂಕಿನ ಮಲೆನಾಡು ಭಾಗದ ಐದು ಹೋಬಳಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿದ್ದಾರೆ.

ಹಾಗೇಯೆ ಭಾರೀ ಮಳೆ ಹಿನ್ನೆಲೆ ಉತ್ತರಕನ್ನಡ ಜಿಲ್ಲೆಯ ಎಲ್ಲ ನದಿಗಳು ತುಂಬಿ ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿವೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಶಾಲಾ, ಕಾಲೇಜು, ಅಂಗನವಾಡಿಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಸುರಿಯುತ್ತಿರುವ ಮಳೆ ಮುಂದುವರೆದಿದೆ. ಇಂದು ಕೂಡ ಭಾರೀ ಮಳೆಯಾಗುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಹಳ್ಳ, ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣ ಸೇತುವೆಗಳು ಮುಳುಗಡೆಯಾಗಿದ್ದರಿಂದ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.












Click it and Unblock the Notifications