2015ರಲ್ಲಿ ಹತ್ಯೆಯಾದ ವಿಶ್ವನಾಥ್ ಶೆಟ್ಟಿ ಮಗನ ಓದಿನ ಜವಾಬ್ದಾರಿ ವಹಿಸಿಕೊಂಡ ಹರ್ಷನ ಸಹೋದರಿ
ಚಿಕ್ಕಮಗಳೂರು, ಏಪ್ರಿಲ್ 1: ಶಿವಮೊಗ್ಗದಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಹರ್ಷನ ಸಹೋದರಿ ಅಶ್ವಿನಿಯು 2015ರಲ್ಲಿ ಶಿವಮೊಗ್ಗದಲ್ಲಿ ಹತ್ಯೆಯಾಗಿದ್ದ ಮತ್ತೋರ್ವ ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿಯ ಮಗ ಯಶಸ್ ಓದಿನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಯಶಸ್ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಮೃತ ವಿಶ್ವನಾಥ್ ಶೆಟ್ಟಿ ಪತ್ನಿಯ ತಾಯಿ (ಅಜ್ಜಿ) ಜೊತೆ ಇದ್ದು, ಕೊಪ್ಪದಲ್ಲೇ 8ನೇ ತರಗತಿ ಓದುತ್ತಿದ್ದಾನೆ. 2015ರ ಫೆಬ್ರವರಿ 19ರಂದು ಶಿವಮೊಗ್ಗದಲ್ಲಿ ನಡೆದ ಪಿಎಫ್ಐ ಸಮಾವೇಶ ಮುಗಿಸಿಕೊಂಡು ಹೋಗುವಾಗ ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ ದುಷ್ಕರ್ಮಿಗಳು ವಿಶ್ವನಾಥ್ ಶೆಟ್ಟಿಯನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಸಾವಿನ ಕೆಲ ತಿಂಗಳ ಬಳಿಕ ಪತ್ನಿ ಕೂಡ ಸಾವನ್ನಪ್ಪಿದ್ದರು.
ಶಿವಮೊಗ್ಗ; ಹರ್ಷ ಹತ್ಯೆ, 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ
ವಿಶ್ವನಾಥ್ ಶೆಟ್ಟಿಯ ಮಗ ಯಶಸ್ ಅಪ್ಪ-ಅಮ್ಮ ಇಬ್ಬರೂ ಇಲ್ಲದೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ಅಜ್ಜಿಯ ಜೊತೆ ವಾಸವಿದ್ದಾನೆ. ಶುಕ್ರವಾರ ಅವರ ಮನೆಗೆ ಭೇಟಿ ನೀಡಿದ ಮೃತ ಹರ್ಷ ಸಹೋದರಿ ಅಶ್ವಿನಿ, ಆ ಬಾಲಕನ ಓದಿನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವನ ಓದಿನ ಜೊತೆ ಬೇರೆ ಯಾವುದೇ ರೀತಿಯ ಸಮಸ್ಯೆ ಇದ್ದರೂ ನಾನೇ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ನಿಮಗೆ ಏನಾದರೂ ಬೇಕಾದರೆ ನನಗೆ ಕರೆ ಮಾಡಿ. ಅಜ್ಜಿ ಹಾಗೂ ಯಶಸ್ ಅವರ ಇಬ್ಬರ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ವಿಶ್ವನಾಥ್ ಶೆಟ್ಟಿ ಪತ್ನಿಯ ತಂಗಿ ಕೂಲಿ ಕೆಲಸ ಮಾಡಿಕೊಂಡು ಯಶಸ್ ಹಾಗೂ ಅಜ್ಜಿಯನ್ನು ನೋಡಿಕೊಳ್ಳುತ್ತಿದ್ದರು.
ಮಗ ರಾತ್ರಿ ಬೇಗ ಮಲಗುವಂತೆ ಮಾಡಪ್ಪಾ...; ಹೀಗೊಂದು ತಂದೆಯ ಬಿನ್ನಹ
ಭಕ್ತರು ಕಾಣಿಕೆ ಹುಂಡಿಗೆ ಚಿನ್ನ- ಬೆಳ್ಳಿಯ ಒಡವೆಗಳನ್ನು ಹಾಕಿ ಹರಕೆ ತೀರಿಸುತ್ತಾರೆ. ಆದರೆ, ಭಕ್ತನೋರ್ವ ಕಾಣಿಕೆ ಹುಂಡಿಯಲ್ಲಿ ಮಗ ರಾತ್ರಿ ಹೊತ್ತು ಬೇಗ ಮಲಗುವಂತೆ ಮಾಡು ಭಗವಂತ ಎಂದು ಪತ್ರ ಬರೆದು ಕಾಣಿಕೆ ಹುಂಡಿಯಲ್ಲಿ ಹಾಕಿರುವ ಅಪರೂಪದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.

ಕಳಸೇಶ್ವರ ಸ್ವಾಮಿ ಹಾಗೂ ಪರಿವಾರ ದೇವರುಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿತು. ಕಾಣಿಕೆ ಹುಂಡಿಯಲ್ಲಿ ಭಕ್ತನೋರ್ವ ಮಗನ ಇಡೀ ಬದುಕನ್ನೇ ಬದಲಿಸಪ್ಪಾ ಎಂದು ಪತ್ರ ಬರೆದು ಬೇಡಿಕೊಂಡಿದ್ದಾನೆ. ಮಗನ ಹೆಸರು ಬರೆದಿರುವ ಅಪ್ಪ, ಮಗನ ಕುಡಿತ ಚಟ ಬಿಡಿಸಿ ಒಳ್ಳೆಯ ಬುದ್ಧಿ ಕೊಡು. ಬೇಗ ಕೆಲಸ ಸಿಗುವಂತೆ ಮಾಡು. ಅವನ ಕುಡಿತದ ಚಟ ಹೋಗಲಾಡಿಸು.
Recommended Video
ಅವನು ಭಾರೀ ಮುಂಗೋಪಿ, ಅದನ್ನೂ ಕಡಿಮೆ ಮಾಡು. ಚಂಚಲ ಸ್ವಭಾವ ತೊಲಗಿಸು, ರಾತ್ರಿ ಹೊತ್ತು ಬೇಗ ಮಲಗುವಂತೆ ಮಾಡು. ಅವನಿಗಿರುವ ಭಯವನ್ನು ಹೋಗಲಾಡಿಸಿ ಧೈರ್ಯ ತುಂಬು, ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಬುದ್ಧಿ ಕೊಡು. ಮೊಮ್ಮಕ್ಕಳಿಗೂ ವಯಸ್ಸಿಗೆ ತಕ್ಕಂತೆ ಬುದ್ಧಿ ಕೊಡು. ಮಗಳ ಸಂಸಾರವನ್ನೂ ಚೆನ್ನಾಗಿ ಕಾಪಾಡು ತಂದೆ ಎಂದು ಬರೆದಿದ್ದಾನೆ. ಪತ್ರವನ್ನು ನೋಡಿದ ಅಧಿಕಾರಿಗಳು ನಸುನಕ್ಕು ಪತ್ರವನ್ನು ತೆಗೆದಿಟ್ಟು ಹಣ ಏಣಿಕೆ ಕಾರ್ಯ ಮುಂದುವರೆಸಿದರು.