ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಕುಮಾರಸ್ವಾಮಿ: ಶಾಸಕರನ್ನು ಹೊರತುಪಡಿಸಿ ಉಳಿದವರಿಗೆ ನೋ ಎಂಟ್ರಿ
ಚಿಕ್ಕಮಗಳೂರು, ನವೆಂಬರ್ 18: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ರೆಸಾರ್ಟ್‌ನತ್ತ ಮುಖ ಮಾಡಿದ್ದು ಚಿಕ್ಕಮಗಳೂರಿನ ರಿಲಾಕ್ಸ್ ಮೂಡ್‌ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿರುವ ಖಾಸಗಿ ರೆಸಾರ್ಟ್ ಕುಮಾರಸ್ವಾಮಿ ವಾಸ್ತವ್ಯ ಹೊಡಿದ್ದಾರೆ.
ಕಳೆದ ರಾತ್ರಿಯೇ ಚಿಕ್ಕಮಗಳೂರಿಗೆ ಆಗಮಿಸಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಇಂದು ಸಂಜೆ ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಇನ್ನು ರೆಸಾರ್ಟ್ ನ ರೂಂನತ್ತ ಯಾರಿಗೂ ಪ್ರವೇಶವಿಲ್ಲ ಎಂದು ರೆಸಾರ್ಟ್ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದಾರೆ.

ಇನ್ನು ನಾಳೆ ಎಂ.ಎಲ್.ಸಿ ಭೋಜೇಗೌಡ ಅವರ ಮಗಳ ನಿಶ್ವಿತಾರ್ಥಕ್ಕಾಗಿ ಹೆಚ್.ಡಿ.ಕುಮಾರಸ್ಚಾಮಿ ಆಗಮಿಸಿದ್ದಾಳೆ. ಸಂಜೆಯೊಳಗೆ ಜೆಡಿಎಸ್ ಶಾಸಕರು ಬರುವ ಸಾಧ್ಯತೆ ಇದ್ದು ಸಂಜೆ ಶಾಸಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ. ಇಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನ, ಸಿಎಂ ಸಿದ್ದು ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್, ಪೋಸ್ಟರ್ ಅಭಿಯಾನ ನಡೆಸಿರೋ ಬಿಜೆಪಿ

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪೋಸ್ಟರ್‌ವಾರ್
ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಕಚೇರಿ ಸೇರಿದಂತೆ ಕೆಇಬಿ ಕಚೇರಿ, ತಾಲೂಕು ಕಚೇರಿಗಳಲ್ಲಿ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಈ ಪೋಸ್ಟರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ.
ರಾಜ್ಯದಲ್ಲಿ ವಿದ್ಯುತ್ ಕಡಿತ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ಇಂಧನ ಇಲಾಖೆ ಸಚಿವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ರಾಜ್ಯವನ್ನು ಕತ್ತಲೆಗೆ ದೂಡಿ ಇಂಧನ ಸಚಿವ ಕೆ.ಜೆ ಜಾಜ್೯ ಕಾಣೆಯಾಗಿದ್ದಾರೆ. ಹುಡುಕಿಕೊಟ್ಟವರಿಗೆ ಕನಿಷ್ಠ ಸಿಂಗಲ್ ಫೇಸ್ ವಿದ್ಯುತ್ ಉಚಿತ, ಖಚಿತ, ನಿಶ್ಚಿತ ಎಂದು ಪೋಸ್ಟರ್ನಲ್ಲಿ ಬರೆಯಲಾಗಿದೆ.
ಅದೇ ರೀತಿ, ವೈಎಸ್ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಸಂಗ್ರಹ ಸಮಿತಿಯ ಸುತ್ತೋಲೆ ಎಂಬ ಶೀರ್ಷಿಕೆ ನೀಡಿ, ಯಾವುದೇ ಸರ್ಕಾರಿ ಸಂಬಂಧಿತ ಸೇವೆಗಳಿಗಾಗಿ ಹಲೋ ಅಪ್ಪಾ.. ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ಪೇಮೆಂಟ್ ಮಾಡಿ ಎಂದು ಬರೆಯಲಾಗಿದೆ. ಈ ಪೋಸ್ಟರ್ನಲ್ಲಿ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ.
ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಕೊಟ್ಟ ಐದು ಗ್ಯಾರಂಟಿಗಳು ಎಂದು ಶೀರ್ಷಿಕೆಯುಳ್ಳ ಪೋಸ್ಟರ್ ಕೂಡ ಅಂಟಿಸಲಾಗಿದೆ. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರೆಂಟ್ ಬಿಲ್ ಏರಿಕೆ, ಲೋಡ್ ಶೆಡ್ಡಿಂಗ್ ಶುರು, ಸದ್ದಿಲ್ಲದೇ ಬಸ್ ದರ ಏರಿಕೆ ಮಾಡಿದ್ದು, ಕಾವೇರಿ ನೀರನ್ನು ಬೇಕಾಬಿಟ್ಟಿ ತಮಿಳುನಾಡಿಗೆ ದಾನ ನೀಡಿದೆ. ಸರ್ಕಾರಿ ಕಾರ್ಯಕ್ರಮಗಳ ಆಚರಣೆಗೆ ಅನುದಾನ ನೀಡದೆ ಸುಮ್ಮನೆ ಕೂತಿದ್ದು, ಆಸ್ತಿ ನೋಂದಣಿ ದರ ಏರಿಕೆ, ಗೃಹಲಕ್ಷ್ಮೀ ಬರುತ್ತಿಲ್ಲ, ಶಕ್ತಿ ಯೋಜನೆಗೆ ಬಸ್ ಸಾಲುತ್ತಿಲ್ಲ. ಯುವನಿಧಿಯಿನ್ನೂ ಶುರುವೇ ಆಗಿಲ್ಲ ಎಂದು ಪೋಸ್ಟರ್ನಲ್ಲಿ ಬರೆಯಲಾಗಿದೆ.












Click it and Unblock the Notifications