ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ಸೇತುವೆಗಳು ಮುಳುಗಡೆ, ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 04: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಭಾನುವಾರ ರಾತ್ರಿಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿದ್ದು, ಕಳಸ ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ.

ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲ್ಲೂಕು ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಭದ್ರಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳಸ ಪಟ್ಟಣ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಸಂಪರ್ಕದ ಹೆಬ್ಬಾಳೆ ಸೇತುವೆ ಭದ್ರಾ ನದಿಯ ನೀರಿನಲ್ಲಿ ಮುಳುಗಡೆಯಾಗಿದೆ.

ಸೋಮವಾರ ಮುಂಜಾನೆ ವೇಳೆಯಲ್ಲಿ ಹೆಬ್ಬಾಳೆ ಸೇತುವೆ ಮೇಲೆ 1 ಅಡಿಯಷ್ಟು ನೀರು ಹರಿದಿದ್ದು, ನದಿಯಲ್ಲಿ ತೇಲಿ ಬಂದ ಬೃಹತ್ ಗಾತ್ರದ ಮರವೊಂದು ಸೇತುವೆ ಮಧ್ಯೆ ಸಿಲುಕಿಕೊಂಡಿದ್ದ ಪರಿಣಾಮ ಸೇತುವೆ ಮೇಲೆ ವಾಹನ ಸಂಚಾರ ಸಾಧ್ಯವಾಗದೇ ಸೇತುವೆಯ ಎರಡೂ ಬದಿಗಳಲ್ಲಿ ಖಾಸಗಿ, ಸರ್ಕಾರಿ ಬಸ್‌ಗಳು ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂದವು.

ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ, ಹೆಬ್ಬಾಳೆ ಸೇತುವೆ ಮುಳುಗಡೆ, ಸಂಚಾರ್ ಬಂದ್ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ, ಹೆಬ್ಬಾಳೆ ಸೇತುವೆ ಮುಳುಗಡೆ, ಸಂಚಾರ್ ಬಂದ್

ಭದ್ರಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗು ತ್ತಿರುವ ಹಿನ್ನೆಲೆಯಲ್ಲಿ ಪಾತ್ರದ ಗ್ರಾಮಗಳಾದ ಕಗ್ಗನಳ್ಳ, ಬಾಳೆಹೊಳೆ, ಮಾಗುಂಡಿ ಹಾಗೂ ಬಾಳೆಹೊನ್ನೂರು ಪಟ್ಟಣದ ಜನರಲ್ಲಿ ಆತಂಕ ಮನೆ ಮಾಡಿದೆ. ನದಿ ಪಾತ್ರ ದಲ್ಲಿರುವ ಕಾಫಿ, ಅಡಿಕೆ ತೋಟಗಳಿಗೆ ನದಿ ನೀರು ನುಗ್ಗಿ ಜಲಾವೃತಗೊಂಡಿವೆ.

ಧರೆಗುರುಳಿದ ಮರ, ವಿದ್ಯುತ್ ಕಂಬ, ಜನಜೀವನ ಅಸ್ತವ್ಯಸ್ತ

ಧರೆಗುರುಳಿದ ಮರ, ವಿದ್ಯುತ್ ಕಂಬ, ಜನಜೀವನ ಅಸ್ತವ್ಯಸ್ತ

ತುಂಗಾ ನದಿ ಹಾಗೂ ಮೂಡಿಗೆರೆ ತಾಲ್ಲೂಕಿನಲ್ಲಿ ಹರಿಯುವ ಹೇಮಾವತಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಅಕ್ಕಪಕ್ಕದ ಅಡಿಕೆ ತೋಟಗಳು, ಭತ್ತದ ಗದ್ದೆಗಳಿಗೆ ನದಿ ನೀರು ನುಗ್ಗುವ ಆತಂಕ ಎದುರಾಗಿದೆ. ಮಲೆನಾಡು ಭಾಗದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮಲೆನಾಡು ಭಾಗದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಂಡಿದೆ.

ಭಾರಿ ಮಳೆಗೆ ಕಳಸ ತಾಲ್ಲೂಕಿನ ಸಂಸೆ ಗ್ರಾಪಂ ವ್ಯಾಪ್ತಿ ಪಾತಿಗುಡ್ಡ ಎಂಬಲ್ಲಿ ಸೆಲ್ವಿ ಎನ್ನುವವರಿಗೆ ಸೇರಿದ ಮನೆ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಮನೆ ಭಾಗಶಃ ಜಖಂಗೊಂಡಿದೆ. ಶೃಂಗೇರಿ-ಚಿಕ್ಕಮಗಳೂರು ಹೆದ್ದಾರಿಯಲ್ಲಿರುವ ಕೊಡಿಗೆ ಮಕ್ಕಿ ಎಂಬಲ್ಲಿ ಭೂಕುಸಿತ ಉಂಟಾಗಿ ಹೆದ್ದಾರಿ ಮೇಲೆ ಮಣ್ಣು ಬಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಲೆನಾಡು ಭಾಗದಲ್ಲಿ 8ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲ ಕ್ಕುರುಳಿವೆ. ಎಡಬಿಡದೇ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ.

ಕರ್ನಾಟಕಲ್ಲಿ ಮಳೆ ಅಬ್ಬರ: ಜು.9ರವರೆಗೆ ಭಾರಿ ಮಳೆ ಸಾಧ್ಯತೆ ಇರುವ ಜಿಲ್ಲೆಗಳಿವುಕರ್ನಾಟಕಲ್ಲಿ ಮಳೆ ಅಬ್ಬರ: ಜು.9ರವರೆಗೆ ಭಾರಿ ಮಳೆ ಸಾಧ್ಯತೆ ಇರುವ ಜಿಲ್ಲೆಗಳಿವು

ಹಳ್ಳದಲ್ಲಿ ಕೊಚ್ಚಿಹೋದ ಬಾಲಕಿಗೆ ಹುಡುಕಾಟ

ಹಳ್ಳದಲ್ಲಿ ಕೊಚ್ಚಿಹೋದ ಬಾಲಕಿಗೆ ಹುಡುಕಾಟ

ಕಾಫಿತೋಟದಲ್ಲಿ ಹಳ್ಳದಾಟುವಾಗ ಕಾಲುಜಾರಿ ಬಿದ್ದು 7ವರ್ಷದ ಬಾಲಕಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲ್ಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 7 ವರ್ಷದ ಬಾಲಕಿ ಸುಪ್ರೀತ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಹಳ್ಳಕ್ಕೆ ನಿರ್ಮಿಸಲಾಗಿದ್ದ ಕಿರುಸೇತುವೆ ದಾಟುವಾಗ ಕಾಲುಜಾರಿ ಹಳ್ಳಕ್ಕೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿನೀಡಿ ಬಾಲಕಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶೃಂಗೇರಿ ತಾಲೂಕಿನಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಶೃಂಗೇರಿ ತಾಲೂಕಿನಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಶೃಂಗೇರಿ ತಾಲೂಕಿನಲ್ಲಿ ಮಳೆ ಆರ್ಭಟ ಜೋರಾಗಿದ್ದು, ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಬಿಇಓ ರಾಘವೇಂದ್ರ ಆದೇಶ ಮಾಡಿದ್ದಾರೆ. ಮಳೆ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತುಂಗಾ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ನದಿ ಪಾತ್ರದ ಪ್ರದೇಶದಲ್ಲಿರುವ ಜನರಿಗೆ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚಿಸಿದೆ.

ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ

ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು ಶಾಲಾ-ಕಾಲೇಜಿಗೆ ನೀಡಿದ್ದ ರಜೆಯನ್ನು ಇನ್ನೆರಡು ದಿನಗಳ ಕಾಲ ವಿಸ್ತರಿಸಲಾಗಿದೆ. ಜುಲೈ 5 ಮತ್ತು 6 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್ ಆದೇಶ ನೀಡಿದ್ದಾರೆ.

ಮುಂದಿನ 5 ದಿನಗಳು ಮಲೆನಾಡು, ಕರಾವಳಿ ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈಗಾಗಲೇ ಜಿಲ್ಲೆಯಲ್ಲಿ ಹರಿಯುವ ನದಿಗಳು ಅಪಾಯ ಮಟ್ಟ ಮೀರಿವೆ. ಸಾಧ್ಯವಾದಷ್ಟು ಜನ ಜಾಗೃತಿ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Recommended Video

Ind vs Eng ಕ್ರೀಡಾಂಗಣದಲ್ಲಿ ಏನಿದು ಆತಂಕಕಾರಿ ಸುದ್ದಿ | *Cricket | OneIndia Kannada

English summary
Relentless rain continued to lash across the Chikkamagalur district on Monday. The intensity of the rain had increased since Sunday night. The inflow into reservoir has been on the rise and vehicular movement was affected in several places as roads are inundated and bridges submerged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X