ಏರುತ್ತಿದೆ ಮಳೆ, ಮೂಡಿಗೆರೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಚಿಕ್ಕಮಗಳೂರು, ಆಗಸ್ಟ್ 5: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ರಾತ್ರಿಯಿಂದ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ ಸುರಿದಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್ ರಮೇಶ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಬೈರಾಪುರ, ದಾರದಹಳ್ಳಿ, ಕೊಟ್ಟಿಗೆಹಾರ, ಬಾಳೂರು ಸೇರಿದಂತೆ ಮೂಡಿಗೆರೆ ತಾಲೂಕಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಎಡಬಿಡದೆ ಸುರಿಯುತ್ತಿರೋ ಧಾರಾಕಾರ ಮಳೆಯಿಂದ ನದಿಗಳ ಹರಿವಿನಲ್ಲಿ ಭಾರೀ ಏರಿಕೆಯಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಬಿಡದೇ ಮಳೆ ಸುರಿಯುತ್ತಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.












Click it and Unblock the Notifications