ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಲ್ಲಿ ಮತ್ತೆ ಭಾರೀ ಮಳೆ: ಮಲೆನಾಡಿಗರಲ್ಲಿ ಆತಂಕ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು. ಸೆಪ್ಟೆಂಬರ್ 1: ಕಳೆದ 2 ವಾರಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವು ನೀಡಿದ್ದ ಮಳೆಯು ಇಂದು ಚಿಕ್ಕಮಗಳೂರು ನಗರದಲ್ಲಿ ಮತ್ತೆ ಅಬ್ಬರಿಸಿದ್ದಾನೆ.

Recommended Video

Corona ಭೀತಿ ನಡುವೆಯೇ JEE ಪರೀಕ್ಷೆ ಶುರು | Oneindia Kannada

ಆಗಸ್ಟ್ ಮೊದಲ ವಾರದಲ್ಲಿ ಹೆಚ್ಚು ಮಳೆ ಸುರಿದು ಸಾಕಷ್ಟು ಅವಾಂತರಗಳನ್ನು ಸೃಷ್ಠಿಸಿದ್ದ ವರುಣ ಆಗಸ್ಟ್ 11ರ ಬಳಿಕ ಜಿಲ್ಲೆಯಲ್ಲಿ ಸಂಪೂರ್ಣ ಬಿಡುವು ನೀಡಿದ್ದ. ಜಿಲ್ಲೆಯ ಜನರಿಗೆ ಬೇಸಿಗೆ ಕಾಲದ ಅನುಭವವಾಗಿತ್ತು.

ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶಚಾರ್ಮಾಡಿ ಘಾಟಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

ಇಂದು ಬೆಳಿಗ್ಗೆಯಿಂದಲೂ ಚಿಕ್ಕಮಗಳೂರು ನಗರದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಬಿಸಿಲು ಇತ್ತು. ಮಧ್ಯಾಹ್ನ 1 ಗಂಟೆ ಆರಂಭವಾದ ದಿಢೀರ್ ಮಳೆ, ಸುಮಾರು ಅರ್ಧ ಗಂಟೆಗಳ ಕಾಲ ಮನಸ್ಸೋ ಇಚ್ಛೆ ಸುರಿದು ಮಲೆನಾಡಿಗರಿಗೆ ಮತ್ತೆ ಆತಂಕ ತಂದಿಟ್ಟಿದೆ.

Heavy Rain In Chikkamagaluru City On Tuesday

ದಿಢೀರ್ ಆಗಿ ಆರಂಭವಾದ ಮಳೆ ಧಾರಾಕಾರವಾಗಿ ಸುರಿದಿದೆ. ಭಾರೀ ಮಳೆ ಕಂಡು ಸ್ಥಳೀಯರು ಮತ್ತೆ ಆತಂಕಗೊಂಡಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲೂ ಅಲ್ಲಲ್ಲಿ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ. ಕಳೆದ ವರ್ಷ ಹಾಗೂ ಈ ಬಾರಿ ಮಲೆನಾಡಲ್ಲಿ ಭಾರೀ ಮಳೆಯಾಗಿದೆ.

ಕಳೆದ ವರ್ಷವಂತೂ ಮಲೆನಾಡಿಗರು ಮನೆ-ಮಠ, ಆಸ್ತಿ-ಪಾಸ್ತಿ ಎಲ್ಲವನ್ನೂ ಕಳೆದುಕೊಳ್ಳುವಂತಹ ಸ್ಥಿತಿ ಎದುರಾಗಿತ್ತು. ಈ ವರ್ಷವೂ ಆಗಸ್ಟ್ ಆರಂಭದಲ್ಲಿ ಸುರಿದ ಮಳೆ ಅಂತಹದ್ದೇ ಭಯ ತರಿಸಿತ್ತು. ಆದರೆ ವರುಣದೇವ ಬಿಡುವು ನೀಡಿದ್ದರಿಂದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಈಗ ಮತ್ತೆ ಸುರಿದ ದಿಢೀರ್ ಮಳೆ ಕಂಡು ಕಂಡು ಮತ್ತೆ ಭಯ ಭೀತರಾಗಿದ್ದಾರೆ.

English summary
In Chikkamagaluru district Rain has been resting for the past 2 weeks and the rainfall again in Chikkamagaluru city today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X