ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಮಳೆ; ಸಿಡಿಲು ಬಡಿದು ಮೂವರ ಸಾವು
ಚಿಕ್ಕಮಗಳೂರು, ಏಪ್ರಿಲ್ 18: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ವರುಣ ಅಬ್ಬರಿಸಿದ್ದಾರೆ. ಜಿಲ್ಲೆಯಲ್ಲಿ ಆಲಿ ಕಲ್ಲು ಮಳೆಯಾಗಿದ್ದು, ಸತತ ಒಂದು ಗಂಟೆ ಸುರಿದ ಮಳೆಗೆ ಜನ ತತ್ತರಿಸಿದ್ದಾರೆ.
ತರೀಕೆರೆ ಸುತ್ತಮುತ್ತಲೂ ಇಂದು ಸಂಜೆ ನಿರಂತರವಾಗಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಮಳೆಯಿಂದ ರಸ್ತೆ ಬದಿ ಮರಗಳು ಧರೆಗೆ ಉರುಳಿ ಬಿದ್ದಿವೆ. ಗಾಳಿ ಮಳೆಯ ಆರ್ಭಟದಿಂದಾಗಿ ಜನರೂ ಆತಂಕಗೊಂಡಿದ್ದಾರೆ.

ಸಿಡಿಲು ಬಡಿದು ಮೂವರು ಸಾವು: ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹಿತ್ಲುಮಕ್ಕಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಮಹಿಳಾ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ದುರ್ದೈವಿಗಳು. ಮೃತರು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ ಇವರು ಕೂಲಿ ಕೆಲಸಕ್ಕೆಂದು ಇಲ್ಲಿಗೆ ಬಂದಿದ್ದರು ಎಂದು ತಿಳಿದುಬಂದಿದೆ.












Click it and Unblock the Notifications